ಶಿವಮೊಗ್ಗ | ಹಣಗೆರೆಕಟ್ಟೆ ಗ್ರಾಮದಲ್ಲಿ ಗೀತಾ ಶಿವರಾಜಕುಮಾರ್ ಚುನಾವಣೆ ಪ್ರಚಾರ 

Date:

ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಗ್ರಾಮೀಣ ಕೃಪಾಂಕ ಕಲ್ಪಿಸಿಕೊಡುವ ಮೂಲಕ ಗ್ರಾಮೀಣ ಪ್ರದೇಶದ ಯುವಜನರಿಗೆ ಉದ್ಯೋಗಕ್ಕೆ ದಾರಿ ದೀಪವಾಗಿದ್ದರು ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.

- Advertisement -

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಹಣಗೆರೆಕಟ್ಟೆ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಆಯೋಜಿಸಿದ್ದ ಲೋಕಸಭಾ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಾರಿಗೆ ತಂದ ಅನೇಕ ಯೋಜನೆಗಳಾದ ಆಶ್ರಯ, ಆರಾಧನಾ ಯೋಜನೆಗಳು ಇಂದಿಗೂ ಬಡವರ ಮನದಲ್ಲಿ ಶಾಶ್ವತವಾಗಿ ಬೇರೂರಿವೆ” ಎಂದು ಹೇಳಿದರು.

“ದೇವರಾಜ ಅರಸ್ ನಂತರ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಶ್ರಮಿಸಿದವರು ಬಂಗಾರಪ್ಪನವರು. ಅವರ ಜ್ಞಾನ ಪ್ರತಿಭೆ ಅಪಾರವಾಗಿದ್ದು, ಆದರ್ಶ ವ್ಯಕ್ತಿಯಾಗಿ ಬಾಳಿದ ಅವರು ಬದುಕಿನಲ್ಲಿ ಹೋರಾಟ ಮನೋಭಾವವನ್ನು ಬೆಳೆಸಿಕೊಂಡಿದ್ದರು. ಅದೇ, ಹಾದಿಯಲ್ಲಿ ನಾನೂ ಕೂಡಾ ಸಾಗುತ್ತೇನೆ” ಎಂದು ಹೇಳಿದರು.

ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮಾತನಾಡಿ, “ಗ್ಯಾರಂಟಿ ಯೋಜನೆಗಳನ್ನು ರದ್ದುಮಾಡಲು ಬಿಜೆಪಿಯವರು ಸಂಚು ಹೂಡುತ್ತಿದ್ದಾರೆ. ಅದು ಆಗಕೂಡದೆಂದರೆ, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಮತ ನೀಡಿ ಆಶೀರ್ವದಿಸಬೇಕು” ಎಂದರು.

“ಜನಪರ ಆಡಳಿತಕ್ಕೆ ಮತ್ತೊಂದು ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಹಲವು ಯೋಜನೆಗಳನ್ನು ನೀಡುತ್ತಿದೆ. ಮನೆ ಯಜಮಾನಿಗೆ ಗೃಹಲಕ್ಷ್ಮಿ ಯೋಜನೆ, ಮಹಿಳೆಯರಿಗೆ ಉಚಿತ ಬಸ್ ಸಂಚಾರ, ಪ್ರತಿಮನೆಗೂ ಉಚಿತ ವಿದ್ಯುತ್, ನಿರುದ್ಯೋಗಿಗಳಿಗೆ ತಿಂಗಳ ಗೌರವಧನ, ಪಡಿತರ ಅಕ್ಕಿ ಹೆಚ್ಚುವರಿ ಹಣ ಈ ರೀತಿಯ ಹಲವು ಯೋಜನೆಗಳನ್ನು ನೀಡಿದೆ” ಎಂದು ಮಾಜಿ ಸಚಿವ ಕಿಮ್ಮ‌ನೆ ರತ್ನಾಕರ್ ಹೇಳಿದರು.

ಮಲೆನಾಡು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಆರ್ ಎಂ ಮಂಜುನಾಥ ಗೌಡ ಮಾತನಾಡಿ, “ಬಿ ವೈ ರಾಘವೇಂದ್ರ ಅವರು ಸಂಸದರಾಗಿ ಆಯ್ಕೆಗೊಂಡು ದಶಕ ಕಳೆದಿದೆ. ಇಲ್ಲಿ ಕೇಂದ್ರ ಸರ್ಕಾರದ ಹಂತದಲ್ಲಿ ಪರಿಹರಿಸಬಹುದಾದ ಅನೇಕ ಸಮಸ್ಯೆಗಳಿವೆ. ಅದರಲ್ಲಿ ಮುಖ್ಯವಾಗಿ ನೆಟ್ವರ್ಕ್ ಸಮಸ್ಯೆಯೂ ಒಂದು. ಆದರೆ, ಈ ಸಮಸ್ಯೆಗಳಿಗೆ ನ್ಯಾಯ ಒದಗಿಸಲು ಇಂದಿಗೂ ಸಾಧ್ಯವಾಗಿಲ್ಲ” ಎಂದು ದೂರಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ ಮಾತನಾಡಿ, “ಹಣಗೆರೆಕಟ್ಟೆ ಗ್ರಾಮ ಸೌಹಾರ್ದಯುತ ಕೇಂದ್ರ. ಅದೇ ರೀತಿ, ಇಲ್ಲಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಕೊಡುಗೆ ಸಾಕಷ್ಟಿದೆ. ಅವರ ಋಣ ತೀರಿಸಬೇಕಾದರೆ, ಗೀತಾ ಶಿವರಾಜಕುಮಾರ್ ಅವರಿಗೆ ಬೆಂಬಲಿಸಬೇಕಿದೆ” ಎಂದರು‌.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸೊನ್ನ ಬ್ಯಾರೆಜ್‌ನಿಂದ ಘಾಣಗಾಪುರ ಬ್ಯಾರೆಜ್‌ವರೆಗೆ ನೀರು ಬಿಡುವಂತೆ ಆಗ್ರಹ; 20ನೇ ದಿನಕ್ಕೆ ಕಾಲಿಟ್ಟ ಆಹೋರಾತ್ರಿ ಧರಣಿ

ಕಾಂಗ್ರೆಸ್ ಮುಖಂಡ ಸುರೇಶ್ ಕಲ್ಲುಕೊಪ್ಪ ಅವರು ಮಾಜಿ ಮುಖ್ಯಮಂತ್ರಿ ಅವರ ರೀತಿಯಲ್ಲಿ ಮಿಮಿಕ್ರಿ ಮಾಡಿ ರಂಜಿಸಿದರು‌.

ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ನಟ ಶಿವರಾಜಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಡುಬ ರಾಘವೇಂದ್ರ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆರೆಹಳ್ಳಿ ರಾಮಪ್ಪ, ಲೋಕೇಶ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...