ಶಿವಮೊಗ್ಗ | ಬೆದ್ರಕಟ್ಟೆಯ ಜನತಾ ಕಾಲೋನಿಗೆ ಗೀತಾ ಶಿವರಾಜ್‌ಕುಮಾರ್ ಭೇಟಿ

Date:

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಅವರು ‌ಶಿವಮೊಗ್ಗ ತಾಲೂಕಿನ ಶಂಕರನಾರಾಯಣದ ಬೆದ್ರಕಟ್ಟೆಯ ಜನತಾ ಕಾಲೋನಿಗೆ ಭೇಟಿ ನೀಡಿ ಕೊರಗ ಸಮುದಾಯದ ಮುಖಂಡರೊಂದಿಗೆ ಮಾತುಕತೆ ನಡೆಸಿದರು.

- Advertisement -

“ಕಾಲೋನಿಯಲ್ಲಿ 70ಕ್ಕೂ ಅಧಿಕ ಕುಟುಂಬಗಳು ಬದುಕು ನಡೆಸುತ್ತಿದ್ದಾರೆ. ಆದರೆ, ಇಲ್ಲಿ ಮೂಲ ಸೌಕರ್ಯಗಳ ಕೊರತೆ ಸಾಕಷ್ಟಿದೆ. ಈ ಭಾಗದ ಜನರಿಗೆ ಪ್ರಮುಖ ಸಮಸ್ಯೆಯಾದ ಮನೆ ನಿರ್ಮಾಣಕ್ಕೆ ಭೂಮಿಯ ಸಮಸ್ಯೆ ತೀರದ ದಾಹದಂತಿದೆ. ಅದೇ ರೀತಿ, ಕುಡಿಯುವ ನೀರು, ರಸ್ತೆ, ಭೂ- ಹಕ್ಕು ಪತ್ರ ಸೇರಿದಂತೆ ಅನೇಕ ಸಮಸ್ಯೆಗಳು ಈ ಭಾಗದಲ್ಲಿ ತಲೆದೋರಿವೆ. ಆದರೆ, ಈವರೆಗೆ ಯಾವುದೇ ಸಂಸದರು ಈ ಕಾಲೂನಿಗೆ ಭೇಟಿ ನೀಡಿಲ್ಲ” ಎಂದು ಸ್ಥಳೀಯರು ಅಳಲು ತೋಡಿಕೊಂಡರು‌.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಈ ಭಾಗದಲ್ಲಿ ಹೆಚ್ಚಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯದ ಬುಟ್ಟಿ ನೇಕಾರರು, ಚೆಂಡೆ ವಾದ್ಯ ವಾದಕರು ಸೇರಿ ಇನ್ನಿತರ ಕುಲಕಸುಬು ನಂಬಿಕೊಂಡು ಬದುಕು ನಡೆಸುತ್ತಿದ್ದಾರೆ. ಆದರೆ, ಸರ್ಕಾರ ಈವರೆಗೆ ಯಾವುದೇ, ರೀತಿಯ ಮಕ್ಕಳ ಉದ್ಯೋಗ, ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಸೃಷ್ಟಿಸಿಲ್ಲ. ಆದ್ದರಿಂದ, ಈ ಭಾಗದ ಜನರಿಗೆ ಸಮರ್ಪಕವಾದ ಸೌಲಭ್ಯ ಕಲ್ಪಿಸಿಕೊಡಬೇಕು” ಎಂದು ಸ್ಥಳಿಯರು ಮನವಿ ಮಾಡಿದರು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್‌ ಇಲ್ಲಿನ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ತಿಳಿಸಿದ್ದು, ಮುಂದಿನ ದಿನದಲ್ಲಿ ಸಮಾಜದೊಂದಿಗೆ ಇರುವುದಾಗಿ ಭರವಸೆ ನೀಡಿದರು.

ತಾಲೂಕಿನ ಉಳ್ಳೂರು ಕನಕಾನಂದ ಬ್ರಾಂಡ್ ಗೋಡಂಬಿ ಉತ್ಪನ್ನ ಕಾರ್ಖಾನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರು, ಕಾರ್ಖಾನೆಯ ಸಿಬ್ಬಂದಿಗಳೊಂದಿಗೆ ಸಮಸ್ಯೆಗಳ ಬಗ್ಗೆ ಚರ್ಚಿಸಿದರು. ಈ ವೇಳೆ ಮಾತನಾಡಿ, “ಕಾರ್ಖಾನೆಯ ಸಿಬ್ಬಂದಿಗಳಿಗೆ ಸರ್ಕಾರದಿಂದ ಸಿಗಬೇಕಾದ ಎಲ್ಲ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಶ್ರಮಿಸಲಾಗುವುದು‌” ಎಂದು ಹೇಳಿದರು.

ನಟ ಶಿವರಾಜ್‌ಕುಮಾರ್‌ ಮಾತನಾಡಿ, “ಗೀತಾಗೆ ಬಡವರ ಬಗ್ಗೆ ಕಾಳಜಿ ಹೆಚ್ಚಿದೆ. ಆದ್ದರಿಂದ, ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ, ಕೇಂದ್ರ ಹಾಗೂ ರಾಜ್ಯ ಮಟ್ಟದ ಸಮಸ್ಯೆಗಳಿಗೆ ತ್ವರಿತ ಪರಿಹಾರಕ್ಕೆ ಗೀತಾ ಒತ್ತು ನೀಡುವರು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇದೇ ವೇಳೆ, ಕಲೋನಿಯ ಸ್ಥಳೀಯ ಕಾಂಗ್ರೆಸ್ ಮುಖಂಡೆ ರೂಪ ಅಕ್ಷಯ್ ಅವರ ಗೃಹ ಪ್ರವೇಶಕ್ಕೆ ಭೇಟಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯಿಂದ ಗ್ರಾಜುಯೇಷನ್ ಡೇ ಕಾರ್ಯಕ್ರಮ

ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜು ಪೂಜಾರಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸದಾಶಿವ ಶೆಟ್ಟಿ, ಪಂಚಾಯಿತಿ ಸದಸ್ಯ ಗುರುದತ್ ಷೇಟ್, ಸಂಕೇತ್ ಶೆಟ್ಟಿ, ಕೃಷ್ಣ ನಾಯ್ಕ್, ರಾಮಚಂದ್ರ ದೇವಾಡಿಗ, ಎ.ಪಿ ಶೆಟ್ಟಿ, ಬಿ ಕೆ ಶ್ರೀನಿವಾಸ, ಜಿ ಎಸ್ ಹರಿಪ್ರಸಾದ್ ಆಚಾರ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಸಂಪಿಗೇಡಿ ಸಂಜೀವ್ ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯ ಸುಧಾಕರ ಶೆಟ್ಟಿ ಸೇರಿ ಅನೇಕ ಕಾರ್ಯಕರ್ತರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...