ಶಿವಮೊಗ್ಗ | ಬಾಲಕಿ ಸಾವು ಪ್ರಕರಣ; ವಸತಿ ಶಾಲೆ ಮಾಲೀಕನ ಬಂಧನ

Date:

ವಿದ್ಯಾರ್ಥಿನಿಯೊಬ್ಬಳ ಸಾವು ಪ್ರಕರಣ ಮತ್ತು ಅಪ್ರಾಪ್ತೆಯರಿಗೆ ಲೈಂಗಿಕ ಕುರುಕುಳ ನೀಡಿದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲೆಯ ಸಾಗರದ ಖಾಸಗಿ ವಸತಿ ಶಾಲೆಯ ಮಾಲೀಕನನ್ನು ಬಂಧಿಸಲಾಗಿದೆ. ಆರೋಪಿ ಮಂಜಪ್ಪನ ವಿರುದ್ಧ ಎರಡು ಎಫ್‌ಐಆರ್‌ಗಳು ದಾಖಲಾಗಿವೆ.

- Advertisement -

ಹೊಟ್ಟೆ ನೋವಿನಿಂದ ಬಳಲುತ್ತಿದ್ದ ವನಶ್ರೀ ಖಾಸಗಿ ವಸತಿ ಶಾಲೆಯ ಬಾಲಕಿ ಜೂನ್‌ 8ರಂದು ಮೃತಪಟ್ಟಿದ್ದರು. ಆಕೆಗೆ ಶಾಲೆಯ ಮಾಲೀಕ ಕೆಲವು ಮಾತ್ರೆಗಳನ್ನು ಕೊಟ್ಟಿದ್ದರು ಮತ್ತು ಹೆಚ್ಚಾಗಿ ನೀರು ಕುಡಿಸಿದ್ದರು. ಪರಿಣಾಮ ಬಾಲಕಿ ಮೃತಪಟ್ಟಿದ್ದಾಳೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

8ನೇ ತರಗತಿಯಲ್ಲಿ ಓದುತಿದ್ದ ತೇಜಸ್ವಿನಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯದೆ ತನ್ನ ಕೊಠಡಿಗೆ ಕರೆದೊಯ್ದ ಆರೋಪಿ ಮಾಲೀಕ, ಆಕೆಗೆ ಸಿಕ್ಕಾಪಟ್ಟೆ ನೀರು ಕುಡಿಸಿದ್ದರು. ಇದರಿಂದಾಗಿ, ಆಕೆ ಆಸ್ವಸ್ಥಳಾದ್ದು, ಬಳಿಕೆ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಆಸ್ಪತ್ರೆ ತಲುಪುವಷ್ಟರಲ್ಲಿ ಆಕೆ ಸಾವನ್ನಪ್ಪಿದ್ದಾರೆಂದು ವೈದ್ಯರು ತಿಳಿಸಿದ್ದರು ಎಂದು ವರದಿಯಾಗಿದೆ.

ಮರಣೋತ್ತರ ಪರೀಕ್ಷಾ ವರದಿ ಬಂದ ನಂತರವೇ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಮಾಲೀಕನ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದು, ಆತನನ್ನು ಬಂಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ದಕ್ಷಿಣ ಕನ್ನಡ | ಗಾಳಿಮಳೆಗೆ ಮನೆ ಮೇಲೆ ಉರುಳಿದ ಬೃಹತ್‌ ಮರ; ಮೂವರು ಪಾರು

ಅದೇ ಆರೋಪಿ ಮಾಲೀಕ, ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುವ ನೆಪದಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು ಎಂದು ಮತ್ತೊಂದು ಪ್ರಕರಣ ದಾಖಲಾಗಿದೆ.

ಎರಡೂ ದೂರುಗಳಿಗೆ ಸಂಬಂಧಿಸಿದಂತೆ ಆರೋಪಿ ಮಾಲೀಕನ ವಿರುದ್ಧ ಐಪಿಸಿ ಸೆಕ್ಷನ್ 354, 504, 506 ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯಿದೆಯ ವಿವಿಧ ಸೆಕ್ಷನ್‌ಗಳು ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...