ಶಿವಮೊಗ್ಗ | ಕೃಷಿ ಕಾಯ್ದೆ ವಾಪಸಾತಿಗೆ ಸರ್ಕಾರ ನಕಾರ; ಸಂಯುಕ್ತ ಹೋರಾಟ ಕರ್ನಾಟಕ ಪ್ರತಿಭಟನೆ

Date:

ರೈತ ವಿರೋಧಿ ಕೃಷಿ ಕಾಯ್ದೆಗಳನ್ನ ವಾಪಾಸ್ಸು ಪಡೆಯುವುದಾಗಿ ಪ್ರಣಾಳಿಕೆಯಲ್ಲಿ ತಿಳಿಸಿ ಲಿಖಿತ ಭರವಸೆಯನ್ನೂ ಕೊಟ್ಟು ಬಳಿಕ ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆಯಲು ಹಿಂದೇಟು ಹಾಕುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕ ಪ್ರತಿಭಟನೆ ನಡೆಸಿತು.

- Advertisement -

ಅಂದು ಕೇಂದ್ರ ಸರ್ಕಾರ ರೈತರ ಹೋರಾಟಕ್ಕೆ ಮಣಿದು ರೈತ ವಿರೋಧಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿತ್ತು. ಅದೇ ರೀತಿ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಪ್ರಣಾಳಿಕೆಯಲ್ಲಿ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದು ಸೇರಿದಂತೆ ಅನೇಕ ಭರವಸೆಗಳನ್ನು ನೀಡಿ ಅಧಿಕಾರ ಹಿಡಿದ ಕಾಂಗ್ರೆಸ್ ಪಕ್ಷ ಇಲ್ಲಿವರೆಗೆ ಭರವಸೆಗಳನ್ನು ಈಡೇರಿಸಿಲ್ಲ ಎಂದು ರೈತ ಮುಖಂಡ ಎಚ್ ಆರ್ ಬಸವರಾಜಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...
1001227374

ಚುನಾವಣಾ ಸಂದರ್ಭದಲ್ಲಿ ವಿದ್ಯುತ್ ಖಾಸಗೀಕರಣ ಮಾಡುವುದಿಲ್ಲವೆಂದು, ಪ್ರಕಟಣೆ ಮಾಡಲಾಯಿತು. ಹಿಂದಿನ ಬಿಜೆಪಿ ರಾಜ್ಯ ಸರ್ಕಾರ ಕೇಂದ್ರದಲ್ಲಿ ರೈತ ವಿರೋಧಿ ಕಾಯ್ದೆಗಳನ್ನ ತರುವ ಸಮಿತಿಯಲ್ಲಿದ್ದ ಅಶೋಕ್ ದಳವಾಯಿ ಅವರನ್ನ ರಾಜ್ಯ ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಮಾಡಲಾಯಿತು. ಕಾಂಗ್ರೆಸ್‌ ಸರ್ಕಾರ ಕೂಡ ಪುನಃ ಅವರನ್ನೇ ಅಧ್ಯಕ್ಷರನ್ನಾಗಿ ವಿಸ್ತರಿಸಿತು. ಈ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರ ತಂದಿದ್ದ ರೈತ ವಿರೋಧಿ ಕೃಷಿ ಕಾಯ್ದೆಗಳ ಅಧ್ಯಯನ ನಡೆಸಿ ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಹೇಳುತ್ತಿದ್ದ ಬಿಜೆಪಿ ಸರ್ಕಾರದ ಹಳೇ ಮಂತ್ರವನ್ನೇ ಜಪಿಸುತ್ತಿದೆ ಎಂದು ಸಂಘಟನೆಯ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದದ್ದೀರಾ?: ಶಿವಮೊಗ್ಗ | ಮಾಹಿತಿ ಹಕ್ಕಿನಡಿ ಸರ್ಕಾರಿ ದಾಖಲೆಗಳನ್ನು ಪಡೆಯುವ ಬಗ್ಗೆ ಮಾಹಿತಿ ಕಾರ್ಯಾಗಾರ

ಈಗಾಗಲೇ ಮುಖ್ಯಮಂತ್ರಿಗಳಿಗೆ ತುರ್ತು ಬಹಿರಂಗ ಪತ್ರ ಕೊಡಲಾಗಿದೆ. ಆದರೆ ಇಲ್ಲಿಯವರೆಗೂ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದೇ ಇರುವುದರಿಂದ ರಾಜ್ಯ ಸರ್ಕಾರದ ವಿರುದ್ಧ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ. ಈಗಲಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಅವರೇ ನೀಡಿದ ಭರವಸೆಗಳನ್ನ ಈಡೇರಿಸಬೇಕೆಂದು ಒತ್ತಾಯಿಸಿದರು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...