ಶಿವಮೊಗ್ಗ | ರಸ್ತೆ ಮಾಡಿಕೊಡುವುದಕ್ಕೆ ಇನ್ನೆಷ್ಟು ವರ್ಷ ಬೇಕು?; ಬಿದರೆ ಗ್ರಾಮಸ್ಥರ ಆಕ್ರೋಶ

Date:

Advertisements

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಬಿದರೆ ಗ್ರಾಮಕ್ಕೆ ಬರಬೇಕಾದರೆ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದುಕೊಂಡು ಬರುವಂತಹ ಸ್ಥಿತಿ ಎದುರಾಗಿದ್ದು, ಅಂತಹ ಬೃಹತ್‌ ಗುಂಡಿಗಳು ಇವೆ. ಇದರಿಂದ ಆ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಆತಂಕದಲ್ಲಿ ಸಂಚರಿಸುವಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸುಮಾರು 6 ವರ್ಷಕ್ಕೂ ಅಧಿಕ ವರ್ಷಗಳಿಂದ ರಸ್ತೆಗಳ ಪರಿಸ್ಥಿತಿ ಇದೇ ರೀತಿ ಇದೆ. ಆಗಿನ ಬಿಜೆಪಿ ಎಂಎಲ್‌ಎ ಅಶೋಕ್‌ ನಾಯ್ಕ್‌ ಅವರ ಗಮನಕ್ಕೆ ತಂದಿದ್ದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ” ಎಂದು ಆರೋಪಿಸಿದರು.

ರಸ್ತೆ ದುರಸ್ತಿ 1

ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಅಶ್ವಿನಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಸುತ್ತಮುತ್ತಲಿನ ಕೆರೆ, ಚಾನೆಲ್ ಮತ್ತು ಗದ್ದೆಗಳು ಇದ್ದು, ಹೆಚ್ಚು ಕಡಿಮೆಯಾದರೆ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಹಾಗಾಗಿ ಸ್ಥಳೀಯ ಜನಪ್ರತಿನಿಧಿಗಳು ಈಗಲಾದರೂ ಎಚ್ಚೆತ್ತುಕೊಂಡು ತ್ವರಿತಗತಿಯಲ್ಲಿ ರಸ್ತೆ ರಿಪೇರಿ ಮಾಡಿಸಿಕೊಡಬೇಕು” ಎಂದು ಆಗ್ರಹಿಸಿದರು.

Advertisements

“ಕೆಲವು ತಿಂಗಳ ಹಿಂದೆ ಒಂದು ಅಜ್ಜಿಯನ್ನು ಬೈಕಿನಲ್ಲಿ ಕರೆದುಕೊಂಡು ಹೋಗುವಾಗ ಬೈಕ್ ಆಯತಪ್ಪಿ ಬಿದ್ದು, ಅಜ್ಜಿ ಜೀವ ಕಳೆದುಕೊಂಡ ಘಟನೆ ನಡೆದಿದೆ. ಇದೊಂದು ಸಾವಿನ ಗುಂಡಿಯಂತಾಗಿದೆ. ನಿತ್ಯವೂ ಊರಿನ ಒಳಗೆ ಬರಲು ಹೊರಗಡೆ ಹೋಗಲು ತೀವ್ರ ಸಮಸ್ಯೆ ಆಗುತ್ತಿದ್ದೂ ಶಾಲಾ ಮಕ್ಕಳಿಗೆ ಮತ್ತು ವೃದ್ಧರಿಗೆ ಅನಾರೋಗ್ಯ ಪೀಡಿತರು ಹೀಗೆ ಎಲ್ಲರೂ ಸಮಸ್ಯೆ ಎದುರಿಸುವಂತಾಗಿದೆ” ಎಂದು ಹೇಳಿದರು.

ಚಾನಲ್

“ಪ್ರಸ್ತುತ ಜೆಡಿಎಸ್ ಎಂಎಲ್‌ಎ ಶಾರದಾ ಪುರ್ಯ ನಾಯಕ್ ಅವರ ಗಮನಕ್ಕೂ ತಂದಿದ್ದು, ಇಷ್ಟು ತಿಂಗಳು ಕಳೆದರೂ ಸಮಸ್ಯೆ ಬಗೆಹರಿಸಿ ಕೊಡುತ್ತಿಲ್ಲ. ಇಲ್ಲಿಗೆ ಬಸ್ ವ್ಯವಸ್ಥೆಯೂ ಇಲ್ಲ. ಬಸ್‌ ವ್ಯವಸ್ಥೆ ನೀಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಕ್ಕೆ ಬಸ್ ವ್ಯವಸ್ಥೆಯಾಗಿದೆ. ಆದರೆ, ರಸ್ತೆ ಸರಿ ಇಲ್ಲದೆ ಬಸ್ ಕೂಡ ಬರುತ್ತಿಲ್ಲ. ಸಂಜೆ ವೇಳೆಯಲ್ಲಿ ಶಾಲಾ ಮಕ್ಕಳು ಬರಲು ತುಂಬ ಅನಾನುಕೂಲವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಇಲ್ಲಿರುವ ಚಾನೆಲ್ ಕೂಡ ಗಬ್ಬೆದ್ದು ನಾರುತ್ತಿದೆ. ಚಾನೆಲ್‌ಗೆ ಕಸ, ಇತರೆ ತ್ಯಾಜ್ಯ ಸೇರಿದ್ದು, ತುಂಬಿ ತುಳುಕುತ್ತಿದೆ. ಇದನ್ನೂ ಕೂಡ ಸ್ವಚ್ಛಗೊಳಿಸಿಲ್ಲ. ರಸ್ತೆ ಕಾಮಗಾರಿ ಕಳಪೆಯಾಗಿದ್ದು, ರಸ್ತೆ ತುಂಬೆಲ್ಲಾ ಗುಂಡಿಮಯವಾಗಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವಿದ್ಯಾರ್ಥಿ ನಿಲಯ ಕಟ್ಟಡದ ಮೇಲೆ ಕಲ್ಲು ತೂರಾಟ; ತಪ್ಪಿತಸ್ಥರ ಕ್ರಮಕ್ಕೆ ಕುರುಬರ ಸಂಘ ಆಗ್ರಹ

ಮಾಹಿತಿಗಾಗಿ ಈ ದಿನ.ಕಾಮ್‌ ಪಿಡಿಒ ನಾಗಮಣಿ ಅವರನ್ನು ಸಂಪರ್ಕ ಮಾಡಿದ್ದು, ಅವರು ರಜೆಯಲ್ಲಿ ಇದ್ದೇನೆ. ಎರಡು ದಿನಗಳ ನಂತರ ಮಾಹಿತಿ ನೀಡುತ್ತೇನೆಂದು ಪ್ರತಿಕ್ರಿಯಿಸಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ಶಾಸಕ ಶಾರದಾ ಪುರ್ಯ ನಾಯಕ ಅವರನ್ನು ಈ ದಿನ.ಕಾಮ್‌ ಸಂಪರ್ಕಿಸಿದಾಗ ಮಾತನಾಡಿ,  “ಸರ್ಕಾರ ಯಾವುದೇ ರೀತಿಯ ಅನುದಾನ ನೀಡುತ್ತಿಲ್ಲ. ಇದರಿಂದ ಕ್ಷೇತ್ರದ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ. ಅನುದಾನ ಬಂದ ಕೂಡಲೇ ಮೊದಲ ಪ್ರಾತಿನಿಧ್ಯವನ್ನು ಬಿದರೆ ಗ್ರಾಮಕ್ಕೆ ನೀಡಿ ರಸ್ತೆ ಮಾಡಿಕೊಡುತ್ತೇವೆ” ಎಂದು ಭರವಸೆ ನೀಡಿದ್ದಾರೆ.

ಭಾರದ್ವಾಜ್
ರಾಘವೇಂದ್ರ, ಶಿವಮೊಗ್ಗ
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X