ಜನವಸತಿ ಪ್ರದೇಶದಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಅಂಗಡಿಗಳ ಮೇಲೆ ಶಿವಮೊಗ್ಗದ ಗಾಂಧಿ ಬಜ಼ಾರ್‌ನಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.
ಗಾಂಧಿ ಬಜ಼ಾರ್‌ನಲ್ಲಿ ರಮೇಶ್ ಎನ್ನುವವರು ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ವೇಳೆ ಶಿವಮೊಗ್ಗ ತಹಶೀಲ್ದಾರ್ ನಾಗರಾಜ್ ನೇತೃತ್ವದಲ್ಲಿ ದೊಡ್ಡಪೇಟೆ ಪೊಲೀಸರು ದಾಳಿ ನಡೆಸಿ, ₹50,000 ಮೌಲ್ಯದ ಪಟಾಕಿಯನ್ನು ವಶಪಡಿಸಿಕೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಳಕಿನ ಹಬ್ಬ | ಮೊದಲ ದಿನ ಪಟಾಕಿ ಸಿಡಿತಕ್ಕೆ 26 ಜನರಿಗೆ ಗಾಯ
ಅಹಿತಕರ ಘಟನೆಗಳನ್ನು ಮುಂಚಿತವಾಗಿಯೇ ತಡೆಯಲು ಜಿಲ್ಲಾಡಳಿತ ಫ್ರೀಡಂ ಪಾರ್ಕ್‌ನಲ್ಲಿ ಪಟಾಕಿ ಮಾರಾಟ ಮಾಡಲು ಅವಕಾಶ ಕಲ್ಪಿಸಿತ್ತು. ಜಿಲ್ಲಾಡಳಿತದ ಆದೇಶವಿದ್ದರೂ ಜನ ನಿಬಿಡ ಪ್ರದೇಶದಲ್ಲಿ ಅಕ್ರಮ ಪಟಾಕಿ ಮಾರಾಟ ಮಾಡುತ್ತಿದ್ದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.