ಶಿವಮೊಗ್ಗ | ಸ್ವಾತಂತ್ರ್ಯ ದಿನಾಚರಣೆ; ಬಿಸಿಲಿನ ತಾಪಕ್ಕೆ ಕುಸಿದುಬಿದ್ದ ಮಕ್ಕಳು

Date:

78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣದ ವೇಳೆ ಬಿಸಿಲಿನ ತಾಪಕ್ಕೆ ನಿತ್ರಾಣರಾದ ಮಕ್ಕಳು ಕುಸಿದುಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.

- Advertisement -

ತೀರ್ಥಹಳ್ಳಿ ಪಟ್ಟಣದ ಯು ಆರ್ ಅನಂತಮೂರ್ತಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ವೇಳೆ ಧ್ವಜಾರೋಹಣ, ಮಕ್ಕಳ ಪಥಸಂಚಲನ ನಡೆದ ಕಾರಣ ಮಕ್ಕಳು ಬಹಳ ಹೊತ್ತು ಬಿಸಿಲಿನಲ್ಲೇ ನಿಂತಿದ್ದರು. ಇದರಿಂದ ಸುಸ್ತಾಗಿ ಮಕ್ಕಳು ಕುಸಿದು ಬಿದ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ತಾಲೂಕು ದಂಡಾಧಿಕಾರಿ ಜಕ್ಕಣ್ಣ ಗೌಡರ್ ಭಾಷಣದ ನಂತರದಲ್ಲಿ ಮಕ್ಕಳು ಕುಸಿದು ಬಿದ್ದಿದ್ದಾರೆ. ಬಳಿಕ ಸ್ವಾತಂತ್ರ್ಯ ದಿನಾಚರಣೆ ಕುರಿತು ಭಾಷಣ ಮಾಡಿ ಮುಗಿಸಿದರು. ಬಿಸಿಲಿನ ತಾಪಕ್ಕೆ ಕುಸಿದು ಬಿದ್ದ ಕುವೆಂಪು ಶಾಲೆಯ ವಿದ್ಯಾರ್ಥಿಯೋರ್ವನ ಮೂಗಿನಲ್ಲಿ ರಕ್ತಸ್ರಾವವಾಗಲು ಆರಂಭವಾಗಿತ್ತು. ನಂತರ ಸ್ಥಳದಲ್ಲಿದ್ದ ತಹಶೀಲ್ದಾರ್ ಅವರ ವಾಹನದಲ್ಲಿಯೇ ಆಸ್ಪತ್ರೆಗೆ ಕರೆದೊಯ್ದಿದ್ದು ನಂತರ ವಿದ್ಯಾರ್ಥಿಯನ್ನು ಮನೆಗೆ ಬಿಡಲಾಗಿದೆ.

ಧ್ವಜಸ್ತಂಭದ ಕಟ್ಟೆ

ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಕುವೆಂಪು ಶಾಲೆಗೆ ಸಂಬಂಧಪಟ್ಟ ಶಿಕ್ಷಕರೊಬ್ಬರು, ʼನಿಮಗೆ ಈ ಹುಡುಗನನ್ನು ಕರೆದುಕೊಂಡು ಹೋಗಲು ಹೇಳಿದ್ಯಾರು?ʼ ಎಂದು ಕಂದಾಯ ಇಲಾಖೆ ಅಧಿಕಾರಿಯೊಬ್ಬರಿಗೆ ಏರುಧ್ವನಿಯಲ್ಲಿ ಗದರಿಸಿ ಕೇಳಿದ ಕುವೆಂಪು ಶಾಲೆಯ ಶಿಕ್ಷಕರ ನಡೆಗೆ ತಾಲೂಕು ಕಚೇರಿಯ ವಾಹನ ಚಾಲಕರು ಸೇರಿದಂತೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಕುಸಿದು ಬಿದ್ದ ಮಕ್ಕಳು

78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಧ್ವಜಾರೋಹಣ ಹಬ್ಬದ ವಾತಾವರಣ ಆದರೂ ವೇದಿಕೆಗೆ ಶಾಮಿಯಾನ ಕೂಡ ಹಾಕದಿರುವುದು ಕಂಡುಬಂದಿತು. ಧ್ವಜಾರೋಹಣ ಕಟ್ಟೆಗೆ ಸುಣ್ಣ ಬಣ್ಣ ಕಾಣದಿದ್ದರೂ ಕೂಡ ಮಳೆಯಲ್ಲಿ ಪಾಚಿ ಕಟ್ಟಿದ ಸ್ಥಿತಿಯಲ್ಲಿತ್ತು. ಕೊನೆಪಕ್ಷ ಧ್ವಜದ ಕಟ್ಟೆಯನ್ನಾದರೂ ತಿಕ್ಕಿ ತೊಳೆಯಬಹುದಿತ್ತಲ್ವೇ? ಎಂದು ಸ್ಥಳದಲ್ಲಿ ಹಾಜರಿದ್ದ ಆನೇಕ ಸಾರ್ವಜನಿಕರಿಂದ ಮಾತುಗಳು ಕೇಳಿಬರುತ್ತಿದ್ದವು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಭವ್ಯ ಭಾರತದ ಪ್ರಜೆಗಳಾಗಿರುವುದು ನಮ್ಮ ಹೆಮ್ಮೆ: ಜಕ್ಕಣ್ಣಗೌಡರ್‌

ಧ್ವಜಾರೋಹಣ ನೆರವೇರಿಸಿ ನಂತರದ ಸಭಾ ಕಾರ್ಯಕ್ರಮ ಯು ಆರ್ ಅನಂತಮೂರ್ತಿ ಪ್ರೌಢಶಾಲೆಯ ಒಳಗಿರುವ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಆದರೆ ಕೊನೆ ಘಳಿಗೆಯಲ್ಲಿ ವೇದಿಕೆ ಕಾರ್ಯಕ್ರಮ ಪ್ರೌಢಶಾಲೆ ಕ್ರೀಡಾಂಗಣದಲ್ಲೇ ನಡೆಸುವಂತೆ ಬದಲಾವಣೆ ಅಗಿದ್ದರಿಂದ ಅಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕೂಡ ಸರಿಯಿರಲಿಲ್ಲದಿರುವುನ್ನು ಗಮನಿಸಿ, ʼತುಂಗಾನದಿ ಪಕ್ಕದಲ್ಲಿ ಇದ್ದು, ನೀರಿಗೂ ಬರ ಬಂತೇʼ ಎಂದು ಪೋಷಕರು ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮ ಆಯೋಜಕರಿಗೆ ಹಿಡಿಶಾಪ ಹಾಕುತ್ತ ಧ್ವಜದ ಕಂಬಕ್ಕೆ ಸ್ವಾತಂತ್ರ್ಯ ಸಿಕ್ಕರೂ ಧ್ವಜದ ಕಟ್ಟೆಗೆ ಸ್ವಾತಂತ್ರ್ಯ ಸಿಗಲಿಲ್ವಾ?ʼ ಎಂದು ಸ್ಥಳದಲ್ಲಿದ್ದ ಸಾರ್ವಜನಿಕರು ಗುನುಗುತ್ತಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ರಾಯಚೂರು | ಕಾಲೇಜಿನಲ್ಲಿ ಶೌಚಾಲಯವಿದೆ, ನೀರಿಲ್ಲ: 400 ಮಂದಿ ವಿದ್ಯಾರ್ಥಿನಿಯರ ಪರದಾಟ

ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವುದಷ್ಟೇ ಸಾಲದು; ಅವರು ಸುರಕ್ಷಿತ, ಗೌರವಯುತ ಹಾಗೂ ಸ್ವಚ್ಛ...