ಶಿವಮೊಗ್ಗ | ರೈತರೊಂದಿಗೆ ಅಧಿಕಾರಿಗಳ ಅಮಾನವೀಯ ವರ್ತನೆ ಸಹಿಸಲ್ಲ: ಸಚಿವ ಮಧುಬಂಗಾರಪ್ಪ

Date:

“ರೈತ ವಿರೋಧಿಯಾಗಿ ಕಾರ್ಯನಿರ್ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಅನಿವಾರ್ಯ. ಆದ್ದರಿಂದ, ಮಾನವೀಯ ನೆಲೆಯಲ್ಲಿ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕೆಲಸ ಮಾಡಬೇಕು” ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧುಬಂಗಾರಪ್ಪ ಎಚ್ಚರಿಸಿದರು.

- Advertisement -

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕಚೇರಿ ಆವರಣದಲ್ಲಿ ಆಯೋಜಿಸಿಲಾದ ಬಗರ್‌ ಹುಕುಂ ಅಕ್ರಮ-ಸಕ್ರಮ ಸಮಿತಿ, ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಅರಣ್ಯ ರಕ್ಷಕರು ಹಾಗೂ ವನ ಪಾಲಕರ ಅಮಾನವೀಯ ವರ್ತನೆ ಅಕ್ಷ್ಯಮ್ಯ ಅಪರಾಧ. ಅನೇಕ ವರ್ಷದಿಂದ ಕಾನು, ಸೊಪ್ಪಿನ ಬೆಟ್ಟ, ಹುಲ್ಲುಜಾಡು, ಈ ಪ್ರದೇಶಗಳಲ್ಲಿ ಕೃಷಿ ಮಾಡಿಕೊಂಡು ಬಂದಿರುವ ರೈತರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಒಕ್ಕಲೆಬ್ಬಿಸುವ ಕಾರ್ಯ ಮಾಡುತ್ತಿದ್ದಾರೆ. ಈ ರೀತಿಯ ವರ್ತನೆ ಸರಿಯಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

“ಅರಣ್ಯ ಭೂಮಿ ವಿಚಾರವಾಗಿ ನ್ಯಾಯಲಯದ ಹಂತದಲ್ಲಿ ತನಿಖೆ ನಡೆಯುತ್ತಿದೆ. ಆದ್ದರಿಂದ, ಅರಣ್ಯ ಅಧಿಕಾರಿಗಳು ಎಚ್ಚರಿಕೆಯ ಹೆಜ್ಜೆ ಇಡಬೇಕು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ರೈತರನ್ನು ಏಕಾ ಏಕಿ ಒಕ್ಕಲೆಬ್ಬಿಸುವ ಕ್ರಮದಿಂದ ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಾರೆ. ಆದ್ದರಿಂದ ಅಧಿಕಾರಿಗಳು ತಾಳ್ಮೆಯ ಗುಣ ಬೆಳೆಸಿಕೊಳ್ಳಬೇಕು” ಎಂದು ತಾಕೀತು ಮಾಡಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಮನೆ ಮೇಲೆ ಗುಡ್ಡ ಕುಸಿದು ಅಪಾರ ಹಾನಿ: ಮನೆಮಂದಿ ಪ್ರಾಣಾಪಾಯದಿಂದ ಪಾರು

“ಅರಣ್ಯ ಮತ್ತು ಕಂದಾಯ ಭೂಮಿಗೆ ಸಂಬಂಧಪಟ್ಟಂತೆ ಅನೇಕ ವರ್ಷದಿಂದ ಸಮಸ್ಯೆಗಳು ಜೀವಂತವಾಗಿವೆ. ಈ ಎಲ್ಲ ತೊಡಕುಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುವುದು. ಬಗರ್‌ ಹುಕುಂ ಸಮಿತಿಗೆ ಸಲ್ಲಿಸಿರುವ ಸಾಕಷ್ಟು ಅರ್ಜಿಗಳನ್ನು ಈ ಹಿಂದೆ ತಿರಸ್ಕರಿಸಲಾಗಿದೆ. ಇದರಿಂದ, ಪಾರಂಪರಿಕವಾಗಿ ಸಾಗುವಳಿ ಮಾಡಿಕೊಂಡು ಬಂದ ಕುಟುಂಬಗಳಿಗೆ ತೊಂದರೆ ಆಗಲಿದೆ. ರೈತರಿಂದ ಪುನಃ ದೂರುಗಳನ್ನು ಪಡೆದು ಕಾನೂನಿನ ಪ್ರಕಾರ ಪರಿಶೀಲಿಸಿ ನಿರ್ಣಯ ತೆಗೆದುಕೊಳ್ಳಬೇಕು” ಎಂದು ಸೂಚಿಸಿದರು.

ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿ ಯತೀಶ್, ತಾಲ್ಲೂಕು ಇ.ಒ ಪ್ರದೀಪ್ ಕುಮಾರ್, ತಹಶೀಲ್ದಾರ್ ಮಂಜುಳಾ, ಡಿಎಫ್ಒ ಮೋಹನ್ ಕುಮಾರ್ ಡಿ, ಆಎಫ್ಒ ಶಬುಬ್ತಾ ಶೇಖ್,ಪರುಶುರಾಮ, ಜಾವೀದ್ ಅಹ್ಮದ್, ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಂ.ಡಿ ಶೇಖರ್ ಸೇರಿದಂತೆ ಬಗರ್ ಹುಕುಂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ 8 ಸೇತುವೆಗಳ ಕಾಮಗಾರಿ ತಕ್ಷಣ ಆರಂಭಿಸಲು ಒತ್ತಾಯ

ದೇವದುರ್ಗ ತಾಲ್ಲೂಕಿನ ಮನಗೂಳಿ–ಬಿಚ್ಚಾಲಿ–61 ರಾಜ್ಯ ಹೆದ್ದಾರಿಯ ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ ನಿರ್ಮಿಸಬೇಕಿರುವ...

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...