ಶಿವಮೊಗ್ಗ | ಕನ್ನಡ ಭಾಷೆಗೆ ವಿಶಿಷ್ಟವಾದ ಸ್ಥಾನವಿದೆ : ಪ್ರೊ. ಶರತ್ ಅನಂತಮೂರ್ತಿ

Date:

ಶಿವಮೊಗ್ಗ, ಶಂಕರಘಟ್ಟ, ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಅನನ್ಯವಾದ ಇತಿಹಾಸ, ಪರಂಪರೆ ಇದೆ. ಇಪ್ಪತ್ತನೇ ಶತಮಾನದಲ್ಲಿ ಕನ್ನಡ ವೈಚಾರಿಕತೆ ಮತ್ತು ವೈಜ್ಷಾನಿಕ ಕ್ಷೇತ್ರದಲ್ಲಿ ಮೊದಲನೇ ಸ್ಥಾನ ಗಳಿಸಿದೆ ಕುವೆಂಪು ವಿವಿ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಅಭಿಪ್ರಾಯಪಟ್ಟರು.

- Advertisement -

ಕುವೆಂಪು ವಿಶ್ವವಿದ್ಯಾಲಯದ ಹಿರೇಮಠ ಸಭಾಂಗಣದಲ್ಲಿ ಇಂದು ಏರ್ಪಡಿಸಿದ್ದ ೭೦ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾನಾಡಿದರು.ಕನ್ನಡದ ನೆಲ ಜಲ ಭಾಷೆಗಾಗಿ ಅನೇಕ ಮಹನೀಯರು ಶ್ರಮಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ಶ್ರೀಸಾಮಾನ್ಯರಿಂದ ಮೊದಲುಗೊಂಡು ರಾಜಮಹಾರಾಜರು, ಕವಿಗಳು, ಸಂಸ್ಕೃತಿ ಚಿಂತಕರು, ಸುಧಾರಕರು, ವಿಜ್ಞಾನಿಗಳನ್ನು ಸ್ಮರಿಸುವ ಮೂಲಕ ಕನ್ನಡವನ್ನು ಇನ್ನಷ್ಟು ಸದೃಢವಾಗಿ ಬಳಸಬೇಕಿದೆ. ಇಲ್ಲಿನ ಸಾಂಸ್ಕೃತಿಕ, ಧಾರ್ಮಿಕ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಆಧ್ಯಾತ್ಮಿಕ ಕ್ಷೇತ್ರಗಳ ಸಾಧನೆಗಳಿಂದ ಕರ್ನಾಟಕ ವಿಶಿಷ್ಟ ಸ್ಥಾನ ಪಡೆದಿದೆ ಎಂದು ಅವರು ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪರೀಕ್ಷಾಂಗ ಕುಲಸಚಿವರಾದ ಪ್ರೊ. ಆರ್. ತಿಮ್ಮರಾಯಪ್ಪನವರು ಮಾತಾನಾಡಿ, ಭಾರತದ ಪ್ರಾದೇಶಿಕ ಭಾಷೆಗಳಲ್ಲಿ ಕನ್ನಡ ಎರಡನೇ ಸ್ಥಾನ ಪಡೆದಿದೆ. ವಿಶ್ವವಿದ್ಯಾಲಯದ ಪ್ರಾಧ್ಯಾಪಕರುಗಳಾದ ಕುವೆಂಪು, ವಿ.ಕೃ. ಗೋಕಾಕ್, ಚಂದ್ರಶೇಖರ ಕಂಬಾರ, ಅನಂತಮೂರ್ತಿ ಮೂದಲಾದವರು ಕನ್ನಡ ನಾಡು ನುಡಿ ಬೆಳಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಮಾತೃ ಭಾಷೆ ಬಗ್ಗೆ ಆಸಕ್ತಿ ಇರಬೇಕು. ಮುಂದಿನ ಪೀಳಿಗೆೆಯು ಕನ್ನಡ ಭಾಷೆಯನ್ನ ಶ್ರೀಮಂತಗೊಳಿಸುವಂತಾಗಬೇಕು ಎಂದರು.

ಕನ್ನಡ ನಾಡು ನುಡಿಯ ವೈಶಿಷ್ಟತೆಯನ್ನು ಕುರಿತು ಹಿರಿಯ ಪ್ರಾಧ್ಯಾಪಕರಾದ ಪ್ರೊ. ಜಿ. ಪ್ರಶಾಂತ ನಾಯಕ ಅವರು ಮಾತನಾಡಿದರು. ಕನ್ನಡ ಭಾರತಿ ನಿರ್ದೇಶಕರಾದ ಪ್ರೊ. ನೆಲ್ಲಿಕಟ್ಟೆ ಎಸ್. ಸಿದ್ದೇಶ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.

ರೀಯಾ ಆಯೇಷಾ ಮತ್ತು ತಂಡ ನಾಡಗೀತೆಯನ್ನು ಹಾಡಿದರು. ಶ್ರೀಧರ ಸ್ವಾಗತಿಸಿದರು, ರಘು ವಂದಿಸಿದರು. ಶಿಲ್ಪಕಲಾ ನಿರೂಪಿಸಿದರು. ಅಧ್ಯಾಪಕರು ಮತ್ತು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮಾನವ ಪ್ರಕೃತಿಯ ಭಾಗ ಎಂಬುದನ್ನು ಮರೆಯಬಾರದು; ಹರೀಶ್ ಎನ್.ಆರ್

ಕಳಸ : ಇಂದಿನ ಜಾಗತಿಕ ತಾಪಮಾನ ಏರಿಕೆ, ಹವಾಮಾನ ವೈಪರಿತ್ಯ ಸೇರಿದಂತೆ...

ಶಿವಮೊಗ್ಗ | ಅಕ್ಟೋಬರ್ 11ರಂದು ರಾಜ್ಯ, ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆ

ಶಿವಮೊಗ್ಗ ಮಹಾನಗರ ಪಾಲಿಕೆ, ಕರ್ನಾಟಕ ಅಸೋಸಿಯೇಷನ್ ಆಫ್ ಬಾಡಿ ಬಿಲ್ಡರ್ಸ್ ಹಾಗೂ...

ಹಾವೇರಿ | ಪುಸ್ತಕವನ್ನು ಪರಿಚಯಿಸುವ ಸಾಮರ್ಥ್ಯ ಗ್ರಂಥಪಾಲಕರಿಗೆ ಇದೆ: ಡಾ. ರಾಘವೇಂದ್ರ ಪತ್ತೇಪುರ

"ನಾನು ಓದುವ ಕಾಲದಲ್ಲಿ ಗ್ರಂಥಾಲಯದಲ್ಲಿ ಓದುವಾಗ,  ಸಂಶೋದನೆಗೆ ಸಂಬಂಧಿಸಿ ಪುಸ್ತಕಗಳು ಕಡಿಮೆ...

ಶಿವಮೊಗ್ಗ | ಸೂಡಾ ನೂತನ ಅಧ್ಯಕ್ಷರಿಗೆ ಶುಭಕೋರಿದ ಸಚಿವ ಮಧು ಬಂಗಾರಪ್ಪ; ಪಕ್ಷ ಸಂಘಟನೆಗೆ ಕರೆ

ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ನೂತನ ಅಧ್ಯಕ್ಷರಾದ ಸಿ.ಜಿ. ಮಧುಸೂದನ್ ಅವರು...