ಶಿವಮೊಗ್ಗ | ನ.1ರಂದು ಕನ್ನಡ ರಾಜ್ಯೋತ್ಸವ; ಸಕಲ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

Date:

Advertisements

ನವೆಂಬರ್ 1ರಂದು ನಗರದ ಡಿಎಆರ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭ ಏರ್ಪಡಿಸಲಾಗಿದ್ದು, ಸಮಾರಂಭಕ್ಕೆ ಅಗತ್ಯವಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶಿವಮೊಗ್ಗ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕನ್ನಡ ರಾಜ್ಯೋತ್ಸವ ಸಿದ್ದತೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಲು ಕರೆದಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಸಲಹೆ-ಸೂಚನೆಗಳನ್ನು ನೀಡಿದರು.

ಅಪರ ಜಿಲ್ಲಾಧಿಕಾರಿಗಳು, ಜಿ.ಪಂ. ಉಪ ಕಾರ್ಯದರ್ಶಿ, ಪಾಲಿಕೆ ಆಯುಕ್ತರು ಹಾಗೂ ಶಿವಮೊಗ್ಗ ತಹಶೀಲ್ದಾರರು ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ಮುದ್ರಣಗೊಂಡ ಆಹ್ವಾನ ಪತ್ರಿಕೆಗಳನ್ನು ಸಮಾರಂಭದ ಅತಿಥಿಗಳು, ಜನಪ್ರತಿನಿಧಿಗಳು, ಸರ್ಕಾರಿ ಕಚೇರಿಗಳು, ಸಂಘಸಂಸ್ಥೆಗಳು, ಕನ್ನಡ ಸಂಘಟನೆಗಳು ಹಾಗೂ ನಾಗರಿಕರಿಗೆ ಜಾರಿ ಮಾಡುವಂತೆ ಸೂಚಿಸಿದರು.

Advertisements
ಕನ್ನಡ ರಾಜ್ಯೋತ್ಸವ

“ನವೆಂಬರ್ 1ರ ಬೆಳಿಗ್ಗೆ 8 ಗಂಟೆಯಿಂದ ನಗರದ ಸೈನ್ಸ್ ಮೈದಾನದಿಂದ ಮೆರವಣಿಗೆ ಹೊರಡುವುದು. ಮೆರವಣಿಗೆಯಲ್ಲಿ ಪೊಲೀಸ್, ಗೃಹರಕ್ಷಕ ದಳ, ಸೇವಾದಳ, ಎನ್‌ಸಿಸಿ ಬ್ಯಾಂಡ್, ಡೊಳ್ಳುಕುಣಿತ, ವೀರಗಾಸೆ, ಕೋಲಾಟ, ಭಜನೆ ಸೇರಿದಂತೆ ವಿವಿಧ ತಂಡಗಳು ಭಾಗವಹಿಸಲು ಸೂಕ್ತ ವ್ಯವಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕತಿ ಇಲಾಖೆ, ಜಿಲ್ಲಾ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ತಲಾ ಎರಡು ಕಲಾ ತಂಡಗಳನ್ನು ಕಳುಹಿಸಿಕೊಡಬೇಕು” ಎಂದು ತಿಳಿಸಿದರು.

“ಪ್ರಮುಖ ರಸ್ತೆಯ ವೃತ್ತಗಳಿಗೆ ವಿದ್ಯುತ್ ಅಲಂಕಾರವನ್ನು ಮೆಸ್ಕಾಂ, ಪಾಲಿಕೆ ಆಯುಕ್ತರು, ಸೂಡಾ ಆಯುಕ್ತರು ಹಾಗೂ ಧ್ವನಿ ವರ್ಧಕದ ಮೂಲಕ ಕನ್ನಡ ದೇಶಭಕ್ತಿ ಗೀತೆಗಳನ್ನು ಪ್ರಸಾರ ಮಾಡುವ ವವಸ್ಥೆಯನ್ನು ಅಬಕಾರಿ ಇಲಾಖೆ, ನೋಂದಣಿ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯವರು ನೋಡಿಕೊಳ್ಳಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಸೇಡಂ | ಕುಡಿಯುವ ನೀರಿಗಾಗಿ ಪರದಾಟ: ಸ್ಲಮ್‌ಬೋರ್ಡ್ ಬಡಾವಣೆ ನಿವಾಸಿಗಳ ಗೋಳು ಕೇಳದ ಅಧಿಕಾರಿಗಳು!

“ಸಂಜೆಯ ಸಾಂಸ್ಕತಿಕ ಕಾರ್ಯಕ್ರಮಗಳು ಕುವೆಂಪು ರಂಗಮಂದಿರದಲ್ಲಿ ನಡೆಯಲಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ, ಪಾಲಿಕೆ ಆಯುಕ್ತರು ನಿರ್ವಹಿಸಬೇಕು. ಆ್ಯಂಬುಲೆನ್ಸ್ ಮತ್ತು ಅಗ್ನಿಶಾಮಕ ವಾಹನ ವ್ಯವಸ್ಥೆಯನ್ನು ಜಿಲ್ಲಾ ಸರ್ಜನ್‌ರು ಹಾಗೂ ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳು ನಿರ್ವಹಿಸಬೇಕು. ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು, ಕಚೇರಿ ಸಿಬ್ಬಂದಿ ವರ್ಗದವರು ಸಮಾರಂಭಕ್ಕೆ ಹಾಜರಾಗಬೇಕು” ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X