ಶಿವಮೊಗ್ಗ | ವಿದ್ಯಾರ್ಥಿಗಳ ಪರೀಕ್ಷೆ ಆತಂಕ ನೀಗಿಸಲು ʼನಾಲೆಡ್ಜ್‌ ಆಫ್‌ ದಿ ಪವರ್ʼ ಕಾರ್ಯಕ್ರಮ ಆಯೋಜನೆ

Date:

ವಿದ್ಯಾರ್ಥಿಗಳ ಪರೀಕ್ಷೆ ಆತಂಕ ನೀಗಿಸಲು ʼನಾಲೆಡ್ಜ್‌ ಆಫ್‌ ದಿ ಪವರ್ʼ ಕಾರ್ಯಕ್ರಮ ಆಯೋಜನೆ ಮಾಡಿರುವುದು ತುಂಬಾ ಒಳ್ಳೆಯದು. ಕಾರ್ಯಕ್ರಮ ತುಂಬಾ ಚೆನ್ನಾಗಿದೆ ಎಂದು ಅಮೀನ್ ಈ ಮುದಾಸಿರ್ ತಿಳಿಸಿದರು.

- Advertisement -

ಶಿವಮೊಗ್ಗ ನಗರದ ಅಂಬೇಡ್ಕರ್ ಭವನದಲ್ಲಿ ಎಸ್‌ಐಒ ವತಿಯಿಂದ ಹಮ್ಮಿಕೊಂಡಿದ್ದ ʼನಾಲೆಡ್ಜ್‌ ಆಫ್‌ ದಿ ಪವರ್ʼ ಎಂಬ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

“ಮಕ್ಕಳಲ್ಲಿ ಪರೀಕ್ಷೆಯ ಆತಂಕ ಇರತ್ತದೆ. ಹಾಗಾಗಿ ವಿದ್ಯಾರ್ಥಿಗಳಿಗೆ ಕೆಲವೊಂದು ಟೆಕ್ನಿಕ್ ಅವಶ್ಯಕತೆ ಇರತ್ತದೆ. ಅದನ್ನು ತಿಳಿದುಕೊಂಡು ಮಕ್ಕಳು ಮೈಗೂಡಿಸಿಕೊಳ್ಳಬೇಕು” ಎಂದು ಅಮೀನ್ ಈ ಮುದಾಸಿರ್ ತಿಳಿಸಿದರು.

“ಮಕ್ಕಳಲ್ಲಿ ಕೆಲವು ಅಡಚಣೆಗಳಿರುತ್ತವೆ. ಮೊಬೈಲ್ ಹಾಗೂ ಕೆಲವೊಂದು ವಸ್ತುಗಳಿಂದ ಅಡಚಣೆಗಳಿರುತ್ತವೆ. ಹಾಗಾಗಿ ಅವರಲ್ಲಿ ಸೆಲ್ಫ್ ಮೋಟಿವೇಷನ್‌ ಆಗುವ ನಿಟ್ಟಿನಲ್ಲಿ ಮಕ್ಕಳಲ್ಲಿ ಶೈಕ್ಷಣಿಕವಾಗಿ ಬೆಳವಣಿಗೆಯಾಗುವ ನಿಟ್ಟಿನಲ್ಲಿ ಒಂದಷ್ಟು ವಿಚಾರ ಸಲಹೆಗಳನ್ನು ನೀಡಿದ್ದೇನೆ. ಅದರಿಂದ ವಿದ್ಯಾರ್ಥಿ ಜೀವನಕ್ಕೆ ಅನುಕೂಲವಾಗಲಿದೆ” ಎಂದರು.

ಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ವಿದ್ಯಾರ್ಥಿಗಳು ಯಾವ ರೀತಿಯಾಗಿ ಭವಿಷ್ಯ ರೂಪಿಸಿಕೊಳ್ಳಬಹುದು, ಸಮಾಜದಲ್ಲಿ ಯಾವ ರೀತಿಯಾಗಿ ಬೆಳೆಯಬೇಕು ಎಂಬಿತ್ಯಾದಿ ಮಾಹಿತಿ ನೀಡಿದರು. ಜತೆಗೆ ಬರಿ ಉದ್ಯೋಗದ ಬಗ್ಗೆ ಯೋಚಿಸದೆ ಸಮಾಜದ ಕಡೆಗೂ ಯಾವ ರೀತಿಯಾಗಿ ಕೊಡುಗೆ ನೀಡಬಹುದು ಹಾಗೂ ಅಭಿವೃದ್ಧಿ ನೈತಿಕತೆ ಹೇಗೆ ಬೆಳಸಿಕೊಳ್ಳಬಹುದು, ಇದರಿಂದ ಹೇಗೆ ಉತ್ತಮ ವ್ಯಕ್ತಿಯಾಗಬಹುದು” ಎಂಬ ವಿಷಯದ ಕುರಿತು ಮನವರಿಕೆ ಮಾಡಿದರು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಹಿಜಾಬ್ | ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಕಲ್ಲು ಹಾಕಿದ್ದ ಪ್ರಾಂಶುಪಾಲನಿಗೆ ಕಾಂಗ್ರೆಸ್‌ ಸರ್ಕಾರದಿಂದ ‘ರಾಜ್ಯ ಪ್ರಶಸ್ತಿ’

ನಾಲೆಡ್ಜ್‌ ಆಫ್‌ ದಿ ಪವರ್ʼ ಎಂಬ ಕಾರ್ಯಕ್ರಮಕ್ಕೆ ಶಿವಮೊಗ್ಗ ನಗರದ ಹಲವು ಶಾಲೆಗಳಿಂದ ಆಗಮಿಸಿದ್ದ ಸುಮಾರು 500ಕ್ಕೂ ಅಧಿಕ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಂಡರು.

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಜಮಾತ್ ಈ ಇಸ್ಲಾಮಿಕ್ ಅಧ್ಯಕ್ಷ ಅಬ್ದುಲ್ ವಾಹಬ್, ಎಸ್‌ಐಒ ಜಿಲ್ಲಾಧ್ಯಕ್ಷ ಸಲೀಕ್, ಅತಿಫ್ ರೆಹಮಾನ್, ಉಬೆದುಲ್ಲ ಬಿ ಜಮಾತ್ ಕರಕುಲ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...