ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಉಳ್ಳೂರು ಸಮೀಪ ಶುಕ್ರವಾರ ಸಂಭವಿಸಿದೆ.
ಶಿವಮೊಗ್ಗದಿಂದ ಸಾಗರದ ಕಡೆ ತೆರಳುತ್ತಿದ್ದ ಬಸ್ ಇದಾಗಿದ್ದು, ಉಳ್ಳೂರು ಸಮೀಪದ ಸಂಪಿಗೆಸರ ಬಳಿ ಕೆಎಸ್‌ಆರ್‌ಟಿಸಿ ಬಸ್ ಮುಂಭಾಗ ಬಂದ ದ್ವಿಚಕ್ರ ವಾಹನ ಸವಾರನನ್ನು ತಪ್ಪಿಸಲು ಹೋಗಿ ಹೆದ್ದಾರಿ ಪಕ್ಕಕ್ಕೆ ಬಸ್ ಉರುಳಿದೆ ಎಂದು ಹೇಳಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ರಸ್ತೆ ಕಳಪೆ ಕಾಮಗಾರಿ ಆರೋಪ; ‘ಬಿಲ್’ ಪಾವತಿ ತಡೆಗೆ ಆಗ್ರಹ
ತೀವ್ರ ಮಳೆ ಇರುವ ಕಾರಣ ಹೆದ್ದಾರಿ ಜಾರುವಿಕೆಯಿಂದ ಬಸ್ ರಸ್ತೆಯ ಪಕ್ಕಕ್ಕೆ ಜಾರಿದೆ ಎನ್ನಲಾಗಿದ್ದು, ಮಧ್ಯಾಹ್ನ 2 ಗಂಟೆಯ ಹೊತ್ತಿಗೆ ಈ ಘಟನೆ ನಡೆದಿದೆ. ಬಸ್ಸಿನಲ್ಲಿದ್ದ 25ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದ್ದು ಅವರನ್ನು ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಇಬ್ಬರಿಗೆ ಹೆಚ್ಚಿನ ಗಾಯಗಳಾಗಿದ್ದು, ಚಾಲಕ ಸಣ್ಣಪ್ಪ ಗಾಣಿಗೇರ, ನಿರ್ವಾಹಕ ಗೌಡಪ್ಪ ಗೌಡ ಇಬ್ಬರಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.