ಶಿವಮೊಗ್ಗ | ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿ; ಇಬ್ಬರಿಗೆ ತೀವ್ರ ಗಾಯ

Date:

ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಉಳ್ಳೂರು ಸಮೀಪ ಶುಕ್ರವಾರ ಸಂಭವಿಸಿದೆ.

- Advertisement -

ಶಿವಮೊಗ್ಗದಿಂದ ಸಾಗರದ ಕಡೆ ತೆರಳುತ್ತಿದ್ದ ಬಸ್ ಇದಾಗಿದ್ದು, ಉಳ್ಳೂರು ಸಮೀಪದ ಸಂಪಿಗೆಸರ ಬಳಿ ಕೆಎಸ್‌ಆರ್‌ಟಿಸಿ ಬಸ್ ಮುಂಭಾಗ ಬಂದ ದ್ವಿಚಕ್ರ ವಾಹನ ಸವಾರನನ್ನು ತಪ್ಪಿಸಲು ಹೋಗಿ ಹೆದ್ದಾರಿ ಪಕ್ಕಕ್ಕೆ ಬಸ್ ಉರುಳಿದೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...
ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿ

ಈ ಸುದ್ದಿ ಓದಿದ್ದೀರಾ? ಯಾದಗಿರಿ | ರಸ್ತೆ ಕಳಪೆ ಕಾಮಗಾರಿ ಆರೋಪ; ‘ಬಿಲ್’ ಪಾವತಿ ತಡೆಗೆ ಆಗ್ರಹ

ತೀವ್ರ ಮಳೆ ಇರುವ ಕಾರಣ ಹೆದ್ದಾರಿ ಜಾರುವಿಕೆಯಿಂದ ಬಸ್ ರಸ್ತೆಯ ಪಕ್ಕಕ್ಕೆ ಜಾರಿದೆ ಎನ್ನಲಾಗಿದ್ದು, ಮಧ್ಯಾಹ್ನ 2 ಗಂಟೆಯ ಹೊತ್ತಿಗೆ ಈ ಘಟನೆ ನಡೆದಿದೆ. ಬಸ್ಸಿನಲ್ಲಿದ್ದ 25ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದ್ದು ಅವರನ್ನು ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಇಬ್ಬರಿಗೆ ಹೆಚ್ಚಿನ ಗಾಯಗಳಾಗಿದ್ದು, ಚಾಲಕ ಸಣ್ಣಪ್ಪ ಗಾಣಿಗೇರ, ನಿರ್ವಾಹಕ ಗೌಡಪ್ಪ ಗೌಡ‌ ಇಬ್ಬರಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...