ಶಿವಮೊಗ್ಗ | ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆ

Date:

ಬಿಜೆಪಿ ವಿರುದ್ಧ ಬಂಡಾಯ ಎದ್ದಿರುವ ಕೆ.ಎಸ್‌ ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಶಿವಮೊಗ್ಗದ ರಾಮಣ್ಣ ಶ್ರೇಷ್ಟಿಪಾರ್ಕ್‌ನಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಮೆರವಣಿಗೆ ಮೂಲಕ ಗಾಂಧಿ ಬಜಾರ್, ನೆಹರು ರಸ್ತೆ ಇಂದ ಸಾಗಿ ಬಂದ ಮೆರವಣಿಗೆ ಮಹಾವೀರ ವೃತ್ತದಲ್ಲಿ ಕೊನೆಗೊಂಡಿತು. ಮೆರವಣಿಗೆಯಲ್ಲಿ ಸಾವಿರಾರು ಜನ ಭಾಗಿಯಾಗಿದ್ದರು.

ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಶಿವಮೊಗ್ಗ ಲೋಕಸಭಾ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಿದ್ದೇನೆ. ನಾಮ ಪತ್ರ ಸಲ್ಲಿಸುವುದಕ್ಕಿಂತ ಮುಂಚೆ ಶಿವಮೊಗ್ಗ ಜಿಲ್ಲೆಯ ಎಲ್ಲಾ 8 ತಾಲೂಕಿನಿಂದ ನನ್ನ ಬೆಂಬಲಿಗರು 25ರಿಂದ 30ಸಾವಿರ ಜನ ಮೆರವಣಿಗೆಯಲ್ಲಿ ಬಂದು ನಮಗೆ ಆಶೀರ್ವಾದ ಮಾಡಿದ್ದಾರೆ. ಗೆದ್ದು ಬನ್ನಿ ಅಂತ ಶುಭವನ್ನು ಕೋರಿದ್ದಾರೆ ಅವರಿಗೆಲ್ಲ ಅಭಿನಂದನೆಗಳನ್ನು ಸಲ್ಲಿಸುತ್ತೇನೆ” ಎಂದರು.

“ಇವತ್ತಿನಿಂದ ಚುನಾವಣೆ ಕೊನೆಯ ದಿನದ ತನಕ ನಮ್ಮ ಕಾರ್ಯಕರ್ತರು ಮನೆ ಮನೆಗೂ ಹೋಗಿ ಈಶ್ವರಪ್ಪ ಯಾಕೆ ಚುನಾವಣೆಗೆ ನಿಂತಿದ್ದಾರೆ. ಭಾರತೀಯ ಜನತಾ ಪಕ್ಷದ ಒಬ್ಬ ನಿಷ್ಠಾವಂತನಿಗೆ ಏನು ನೋವಾಗಿದೆ, ಏನು ಅನ್ಯಾಯ ಆಗಿದೆ, ಹಾಗೇ ಹಿಂದುತ್ವಕ್ಕೆ ಏನು ಅನ್ಯಾಯ ಆಗಿದೆ, ಒಂದೇ ಕುಟುಂಬ ಕೈಯಲ್ಲಿ ಅಪ್ಪ-ಮಕ್ಕಳ ಕೈಯಲ್ಲಿ ಪಕ್ಷ ಯಾಕೆ ಇದೆ ಈ ಎಲ್ಲಾ ಅಂಶವನ್ನು ಕೂಡ ಪ್ರತೀ ಮನೆಗೂ ತೆರಳಿ ನಮ್ಮ ಕಾರ್ಯಕರ್ತರು ಹೇಳಿ ಬರುತ್ತಾರೆ ಎಂದು ನನಗೆ ಪೂರ್ಣ ವಿಶ್ವಾಸ ಇದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನ ನನಗೆ ಪೂರ್ಣ ಬೆಂಬಲ ನೀಡುತ್ತಾರೆ, ಗೆಲ್ಲಿಸುತ್ತಾರೆ. ಚುನಾವಣೆ ಮುಗಿದ ನಂತರ ಭಾರತೀಯ ಜನತಾ ಪಾರ್ಟಿಯಲ್ಲಿ ಸಾಕಷ್ಟು ಬದಲಾವಣೆ ಆಗಿದೆ ಹಾಗೂ ಪಕ್ಷ ಶುದ್ಧೀಕರಣ ಆಗುತ್ತೆ ಅನ್ನೋ ವಿಶ್ವಾಸ ನನಗಿದೆ ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಎಫ್‌ಪಿಒಗಳೊಂದಿಗೆ ಸೃಜನಾತ್ಮಕ ಹೆಜ್ಜೆಯನ್ನಿಡಲು ರೈತರಿಗೆ ಕರೆ

ಶೋಷಣೆ ಮುಕ್ತ ಕೃಷಿ ಪರಿಸರ ಹಾಗೂ ಸುಸ್ಥಿರ ಆದಾಯದ ಮೂಲಗಳನ್ನು ಸೃಜಿಸಲು...

ಉಡುಪಿ | ನೆರೆ ಪೀಡಿತ ಪ್ರದೇಶಗಳಿಗೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ

ಮಳೆ, ಪ್ರವಾಹದಿಂದ ಯಾವುದೇ ಅನಾಹುತ ಸಂಭವಿಸದಂತೆ ಉಡುಪಿ ಜಿಲ್ಲಾಡಳಿತ ದಿನದ 24...

ರಾಯಚೂರು | ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ ಪ್ರಗತಿಪರ ಸಂಘಟನೆಗಳ ಒತ್ತಾಯ

ಸರ್ಕಾರ, ನಿರ್ಲಕ್ಷ್ಯ ಧೋರಣೆ ಬಿಟ್ಟು ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ...

ಕಲಬುರಗಿ | ಸಿಮೆಂಟ್‌ ಕಾರ್ಖಾನೆಯಲ್ಲಿ ಕಾರ್ಮಿಕ ಸಾವು; 2 ತಿಂಗಳಲ್ಲಿ 4ನೇ ದುರಂತ

ಸಿಮೆಂಟ್‌ ಕಾರ್ಖಾನೆಯಲ್ಲಿ ಬೃಹತ್ ಟ್ಯಾಂಕರ್ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ,...