ಶಿವಮೊಗ್ಗ | ಸ್ಥಾನ-ಮಾನದ ಗ್ಯಾರಂಟಿ ನಿರೀಕ್ಷೆಯಲ್ಲಿ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರು

Date:

ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಂತಹ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ ಎಂಬುದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಆಕ್ರೋಶ ಭುಗಿಲೆದ್ದಿದ್ದು, ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

- Advertisement -

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಸರಿಯಾಗಿ ಬಳಸಿಕೊಳ್ಳದೆ, ಸ್ಪಂದನೆ ನೀಡದೆ ನಡಿಸಿಕೊಂಡಿರುವುದೂ ಕೂಡ ಈ ಬಾರಿ  ಬಿಜೆಪಿ ಅಭ್ಯರ್ಥಿ ಅತಿಹೆಚ್ಚು ಲೀಡ್‌ನಿಂದ ಗೆಲ್ಲಲು ಒಂದು ಬಹುಮುಖ್ಯ ಕಾರಣ ಎನ್ನಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಾಂಗ್ರೆಸ್ ಪಕ್ಷದ ಬಹುತೇಕ ಕಾರ್ಯಕರ್ತರು ಈ ದಿನ.ಕಾಮ್‌ನೊಂದಿಗೆ ತಮ್ಮ ಅಸಮಾಧಾನ ಹಾಗೂ ಆಕ್ರೋಶ ಹೊರ ಹಾಕಿದ್ದು, “ಸರ್ಕಾರ ಬಂದು ಒಂದು ವರ್ಷ ಕಳೆದರೂ ಕೂಡಾ ಕಾರ್ಯಕರ್ತರಿಗೆ ಸರಿಯಾದ ಸ್ಥಾನಮಾನ ನೀಡದೆ ಇರುವುದು ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ” ಎಂದು ತಿಳಿಸಿದ್ದಾರೆ.

“ನಿಗಮ ಮಂಡಳಿ, ಎಂಎಲ್‌ಸಿ ಚುನಾವಣೆ ಮತ್ತೊಂದು ಮಗದೊಂದು ಎಲ್ಲವೂ ಮುಗಿದರು ಕಾರ್ಯಕರ್ತರಿಗೆ ಶಾಸಕರಾಗಲಿ, ಸಚಿವರಾಗಲೀ ಹಾಗೂ ಯಾವೊಬ್ಬ ನಾಯಕರೂ ಕೂಡಾ ಸ್ಪಂದಿಸುತ್ತಿಲ್ಲ. ಕ್ಯಾರೇ ಎನ್ನದ ಪರಿಸ್ಥಿತಿ ಎದುರಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಪಕ್ಷಕ್ಕೋಸ್ಕರ ಸರ್ಕಾರ ರಚನೆಯಿಂದ ಈವರೆಗೂ ಇಷ್ಟೆಲ್ಲ ಪ್ರಾಮಾಣಿಕ ಕೆಲಸ ಮಾಡಿದರೂ ಕೂಡ ನಮ್ಮನ್ನು ಕಡೆಗಣಿಸುತ್ತಿದ್ದಾರೆ. ಹಾಗಾಗಿ ಶಿವಮೊಗ್ಗ ಹಾಗೂ ರಾಜ್ಯದಲ್ಲಿಯೂ ಕಾರ್ಯಕರ್ತರಿಗೆ ಅನ್ಯಾಯವಾಗುತ್ತಿದೆ” ಎಂದು ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಅವಲತ್ತುಕೊಂಡಿದ್ದಾರೆ.

“ಪಕ್ಷದಲ್ಲಿ ಆಂತರಿಕ ಕಲಹ ಹಾಗೂ ಗುಂಪುಗಾರಿಕೆ ಹೆಚ್ಚಾಗಿದ್ದು, ಮುಂಬರುವ ಮಹಾನಗರ ಪಾಲಿಕೆ ಚುನಾವಣೆ ಆಗಿರಬಹುದು, ನಗರಸಭೆ ಚುನಾವಣೆ, ಪುರಸಭೆ ಚುನಾವಣೆ, ಪಟ್ಟಣ ಪಂಚಾಯತ್ ಚುನಾವಣೆ ವೇಳೆ ಮುಂದಿನ ದಿನಗಳಲ್ಲಿ ಇದು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಮಟ್ಟದ ಹಾನಿಯಾಗುವ ಸಂಭವವಿದೆ” ಎಂದು ಎಚ್ಚರಿಕೆ ನೀಡಿದರು.

“ಪಕ್ಷದ ಅಧ್ಯಕ್ಷರು ಈ ಒಳ ಬೇಗುದಿ ಶಮನ ಮಾಡಿ ಇದರ ಕುರಿತು ಈ ಕೂಡಲೇ ಗಮನ ಹರಿಸಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಅನ್ಯಾಯವಾಗದಂತೆ ಸರಿಪಡಿಸಿಕೊಡಬೇಕು” ಎಂದು ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತರು ಆಗ್ರಹಿಸಿದರು.

“ಎಲ್ಲ ಸ್ಥಾನ-ಮಾನಗಳನ್ನು ಹಾಲಿ ಸ್ಥಾನದಲ್ಲಿರುವವರು ಮತ್ತೆ ಮತ್ತೆ ಒಂದು ಸ್ಥಾನ ಇದ್ದವರಿಗೆ ಮತ್ತೆ ಎರಡು ಮೂರು ಸ್ಥಾನಗಳ ಅವಕಾಶ ಮಾಡಿಕೊಟ್ಟರೆ, ಇತರೆ ನಿಷ್ಠಾವಂತ ಕಾರ್ಯಕರ್ತರಿಗೆ ಅನ್ಯಾಯವಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಅಬ್ಬಿಫಾಲ್ಸ್‌ನಲ್ಲಿ ನೀರು ಪಾಲಾದ ಯುವಕ

“ರಾಜ್ಯ, ರಾಷ್ಟದ ನಾಯಕರೂ ಕೂಡ ಇದಕ್ಕೆ ಸರಿಯಾಗಿ ಅನುಕೂಲ ಮಾಡಿಕೊಡದಿದ್ದರೆ ಇದು ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಬಲವಾಗಿ ಪೆಟ್ಟು ಬೀಳುವ ಸಾಧ್ಯತೆ ಹೆಚ್ಚಾಗಿದೆ. ಕಾರ್ಯಕರ್ತರು ಅವಕಾಶ ವಂಚಿತರಾಗದಂತೆ ಪಕ್ಷ ಸ್ಪಂದಿಸಬೇಕು. ʼಪಕ್ಷದ ಕಾರ್ಯಕರ್ತರೇ ಪಕ್ಷದ ಶಕ್ತಿʼ ಎಂದು ಹೇಳುತ್ತಾರೆ. ಆದರೆ ಕಾರ್ಯಕರ್ತರಿಗೆ ಏನೂ ಅನುಕೂಲವಾಗುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

WhatsApp Image 2025 11 17 at 5.17.05 PM
ರಾಘವೇಂದ್ರ, ಶಿವಮೊಗ್ಗ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...