ಶಿವಮೊಗ್ಗದ ಮಲೆನಾಡು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿರ್ದೇಶಕರ ಚುನಾವಣೆಗೆ ಮಹಿಳಾ ಮೀಸಲು ಕ್ಷೇತ್ರದ ಅಭ್ಯರ್ಥಿಯಾಗಿ ಮಂಜುಳ ಆರ್ ನಾಮಪತ್ರ ಸಲ್ಲಿಸಿದರು.
ಶಿವಮೊಗ್ಗ ನಗರದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ಜನವರಿ 19ರ ಭಾನುವಾರದಂದು ಮಲೆನಾಡು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆ ನಡೆಯಲಿದೆ. ಬೆಳಿಗ್ಗೆ 9 ರಿಂದ ಸಂಜೆ 4ರವರೆಗೆ ಮತದಾನಕ್ಕೆ ಅವಕಾಶವಿರಲಿದೆ.
ರಾಜ್ಯ ಒಕ್ಕಲಿಗರ ಸಂಘ ಹಾಗೂ ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘದ ಸದಸ್ಯೆಯಾಗಿರುವ ಮಂಜುಳ ಅವರು, ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿ, “ಸೊಸೈಟಿ ಸದಸ್ಯರೆಲ್ಲರೂ ಈ ಬಾರಿ ನೂತನ ಮಹಿಳಾ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದಾರೆ. ನನಗೆ ಎಲ್ಲರೂ ಆಶೀರ್ವದಿಸಿ ಮತಗಳ ಮೂಲಕ ಬೆಂಬಲ ನೀಡಲಿದ್ದಾರೆ” ಎಂದರು.
ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ಅನರ್ಹ ʼಕಟ್ಟಡ ಕಾರ್ಮಿಕರ ಕಾರ್ಡ್ʼ ರದ್ದುಗೊಳಿಸಿ: ಸಚಿವ ಸಂತೋಷ್ ಲಾಡ್ʼಗೆ ಮನವಿ
“ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗುವ ಸಂಭವ ಇದೆಯೆಂದು ಸಂಘದ ಸದಸ್ಯರ ಅಪೇಕ್ಷೆಯಂತೆ ಚುನಾವಣೆಗೆ ಸ್ಪರ್ಧಿಸಿದ್ದೇನೆ” ಎಂದು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.
