ಶಿವಮೊಗ್ಗ | ಸರ್ಕಾರದ ವಿರುದ್ಧ ಫೆ.10ರಂದು ರಾಜ್ಯಾದ್ಯಂತ ಸಂಯುಕ್ತ ಹೋರಾಟ: ಎಚ್ ಆರ್ ಬಸವರಾಜಪ್ಪ

Date:

ಲಿಖಿತ ಭರವಸೆ ಕೊಟ್ಟು ಮಾತು ತಪ್ಪಿದ ಸರ್ಕಾರದ ವಿರುದ್ಧ ಸಂಯುಕ್ತ ಹೋರಾಟ-ಕರ್ನಾಟಕದಿಂದ ಫೆಬ್ರವರಿ 10ರಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಪ್ರತಿಯೊಬ್ಬ ರೈತನೂ ಭಾಗಿಯಾಗಿ ಸರ್ಕಾರದ ಗಮನ ಸೆಳೆಯಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷ ಹೆಚ್‌ ಆರ್ ಬಸವರಾಜಪ್ಪ ಹೇಳಿದರು.

- Advertisement -

ಶಿವಮೊಗ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, “ರಾಜ್ಯ ಸರ್ಕಾರದವರು ನುಡಿದಂತೆ ನಡೆದ್ದಿದೇವೆಂದು ಹೇಳುತ್ತಾರೆ. ಆದರೆ ಅವರ ಪ್ರಣಾಳಿಕೆಯಲ್ಲಿ ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದು, ಎಸ್‌ಕೆಎಂನಿಂದ ಕೊಟ್ಟ ಪ್ರಣಾಳಿಕೆಯನ್ನು ಒಪ್ಪಿ ಡಿ ಕೆ ಶಿವಕುಮಾರ್ ಅವರು ಕೃಷಿ ಕಾಯ್ದೆಗಳನ್ನ ವಾಪಾಸ್‌ ಪಡೆಯುವುದು ಮತ್ತು ವಿದ್ಯುತ್ ಖಾಸಗೀಕರಣ ಮಾಡುವುದಿಲ್ಲವೆಂದು ಲಿಖಿತ ಭರವಸೆ ಕೊಟ್ಟಿರುವುದನ್ನು ಮರೆತು ರೈತ ವಿರೋಧಿಗಳಾಗಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...
1001220754

“ಹಿಂದಿನ ಸರ್ಕಾರ ಕೃಷಿ ಕಾಯ್ದೆಗಳನ್ನು ತರುವ ಸಮಿತಿಯಲ್ಲಿದ್ದ ಅಶೋಕ್ ದಳವಾಯಿ ಅವರನ್ನು ಕೃಷಿ ಬೆಲೆ ಆಯೋಗದ ಅಧ್ಯಕ್ಷರನಾಗಿ ಮಾಡಿತ್ತು. ಇಂತಹ ವ್ಯಕ್ತಿಯನ್ನು ಈಗಿನ ಕಾಂಗ್ರೆಸ್ ಸರ್ಕಾರವೂ ಕೂಡಾ ಮತ್ತೆ ಅಧ್ಯಕ್ಷರನ್ನಾಗಿ ವಿಸ್ತರಿಸಿದೆ. ಜತೆಗೆ ರೈತ ವಿರೋಧಿ ಕೃಷಿ ಕಾಯ್ದೆಗಳ ಅಧ್ಯಯನ ನಡೆಸಿ ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಹೇಳುತ್ತಿದ್ದ ಬಿಜೆಪಿ ಸರ್ಕಾರದ ಹಳೇ ಮಂತ್ರವನ್ನು ಹೇಳಿ ಶಿಫಾರಸು ಮಾಡಲು ತಿಳಿಸಿದೆ. ಈಗಾಗಲೇ ಎಸ್‌ಕೆಎಂನಿಂದ ಸರ್ಕಾರಕ್ಕೆ ಬಹಿರಂಗ ಪತ್ರ ಕೊಟ್ಟಿದ್ದೇವೆ. ಅದಕ್ಕೆ ಈವರೆಗೂ ಯಾವುದೇ ಉತ್ತರ ಬಂದಿಲ್ಲ. ಆದ್ದರಿಂದ ರಾಜ್ಯ ಸರ್ಕಾರ ಕೊಟ್ಟ ಮಾತಿಗೆ ತಪ್ಪದೆ ನುಡಿದಂತೆ ನಡೆಯಬೇಕು” ಎಂದು ಒತ್ತಾಯಿಸಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮರಿಸ್ವಾಮಿ ಗೆಲುವು

ಈ ಸಂದರ್ಭದಲ್ಲಿ ಡಿಎಸ್‌ಎಸ್(ಅಂಬೇಡ್ಕರ್ ವಾದ) ಜಿಲ್ಲಾ ಪ್ರಧಾನ ಸಂಚಾಲಕ ಟಿ ಹೆಚ್ ಹಾಲೇಶಪ್ಪ, ರೈತ‌ ಸಂಘದ ರಾಜ್ಯ ಉಪಾಧ್ಯಕ್ಷ ಹಿಟ್ಟೂರು ರಾಜು, ಜಿಲ್ಲಾಧ್ಯಕ್ಷ ಕೆ ರಾಘವೇಂದ್ರ, ಜಿಲ್ಲಾ ಉಪಾಧ್ಯಕ್ಷ ಎಂ ಮಂಜಪ್ಪ, ಎಂ ಮಹದೇವಪ್ಪ, ಶಿವಮೊಗ್ಗ ತಾಲೂಕು ಪ್ರಧಾನ ಕಾರ್ಯದರ್ಶಿ ಜ್ಞಾನೇಶ್, ಭದ್ರಾವತಿ ತಾ ಅಧ್ಯಕ್ಷ ಜಿ ಎನ್ ಪಂಚಾಕ್ಷರಿ, ಭದ್ರಾವತಿ ತಾ ಪ್ರಧಾನ ಕಾರ್ಯದರ್ಶಿ ಹನುಮಂತಪ್ಪ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...