ಶಿವಮೊಗ್ಗ | ಅಲ್ಲಮಪ್ರಭು‌ ಫ್ರೀಡಂ ಪಾರ್ಕ್ ಕಾಮಗಾರಿಗೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

Date:

Advertisements

ಲೋಕೋಪಯೋಗಿ ಇಲಾಖೆ ವತಿಯಿಂದ ನಗರದ ಅಲ್ಲಮಪ್ರಭು‌ ಉದ್ಯಾನವನದಲ್ಲಿ ಶನಿವಾರ ಏರ್ಪಡಿಸಿದ್ದ ಅಲ್ಲಮ ಪ್ರಭು ಫ್ರೀಡಂ ಪಾರ್ಕ್ ಉದ್ಯಾನವನದ ಸರ್ವಾಂಗೀಣ ಅಭಿವೃದ್ದಿ ಕಾಮಗಾರಿಯ ಶಂಕುಸ್ಥಾಪನಾ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ನೆರವೇರಿಸಿದರು.

ಬಳಿಕ ಕ್ರಾಫ್ಟ್ ಆಫ್ ಮಲೆನಾಡು ಮತ್ತು ಫಲಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿ ಕರಕುಶಲ ಉತ್ಪನ್ನಗಳನ್ನು ಖರೀದಿಸಿ, ಕುಶಲಕರ್ಮಿಗಳನ್ನು ಉತ್ತೇಜಿಸಿದರು. ಈ ವೇಳೆ ಮಾತನಾಡಿದ ಅವರು, “ಜಿಲ್ಲೆಯ ಕುಶಲಕರ್ಮಿಗಳು ವಿಶೇಷವಾಗಿ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಮಾನ್ಯ ಮುಖ್ಯಮಂತ್ರಿಗಳಿಗೂ ನೀಡಿ, ಅವರ ಗಮನ ಸೆಳೆದಿದ್ದೇವೆ. ಮುಂದಿನ ದಿನಗಳಲ್ಲಿ ಕುಶಲಕರ್ಮಿಗಳು ತಯಾರಿಸಿದ ಉತ್ಪನ್ನಗಳಿಗೆ ಶಾಶ್ವತ ಮಳಿಗೆ ತೆರೆಯುವ ಆಲೋಚನೆ ಸಹ ಇದೆ. ಇದರಿಂದ ಸ್ಥಳೀಯ ಕಲಾವಿದರು, ಕುಶಲಕರ್ಮಿಗಳಿಗೆ ಉತ್ತಮ‌ ಮಾರುಕಟ್ಟೆ ಲಭ್ಯವಾಗಲಿದೆ” ಎಂದರು.

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ಭದ್ರಾವತಿಯನ್ನ ರಿಪಬ್ಲಿಕ್ ಆಗಲು ಬಿಡಲ್ಲ: ಸಚಿವ ಮಧು ಬಂಗಾರಪ್ಪ

Advertisements

ಈ ವೇಳೆ ಶಾಸಕ ಎಸ್ ಎನ್ ಚನ್ನಬಸಪ್ಪ, ವಿಧಾನ ಪರಿಷತ್ ಶಾಸಕಿ ಬಲ್ಕೀಶ್ ಬಾನು, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ವಿಜಯಕುಮಾರ್, ಮಾಜಿ‌ ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ ಸೇರಿ ಹಲವು ಮುಖಂಡರು, ಜಿಲ್ಲಾಧಿಕಾರಿ, ಜಿಪಂ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಇತರೆ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X