ಶಿವಮೊಗ್ಗ | ಸಚಿವ ಮಧು ಬಂಗಾರಪ್ಪರ ಮಾತು ಕಾಂಗ್ರೆಸ್‌ನ ಗೂಂಡಾ ಸಂಸ್ಕೃತಿಯ ಪ್ರತೀಕ : ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ಎನ್.ಕೆ. ಖಂಡನೆ

Date:

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವರು ಸಂಸದ ಬಿ.ವೈ. ರಾಘವೇಂದ್ರ ಪೋಸ್ಟ್ ಮ್ಯಾನ್ ಸಂಸದ ಎಂದು ಹೇಳಿರುವುದು ಕಾಂಗ್ರೆಸ್‌ನ ಗೂಂಡಾ ಸಂಸ್ಕೃತಿಯ ಪ್ರತೀಕವಾಗಿದೆ. ಇವರ ಹೇಳಿಕೆ ಖಂಡನೀಯ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್ ಕೆ ಜಗದೀಶ್ ಹೇಳಿದ್ದಾರೆ.

- Advertisement -

ಸಂಸದ ಬಿ ವೈ ರಾಘವೇಂದ್ರ ಇವರು ಜಿಲ್ಲೆಯ ಅಭಿವೃದ್ಧಿ ಹರಿಕಾರರಾಗಿದ್ದಾರೆ. ವಿಮಾನ ನಿಲ್ದಾಣ, ರಿಂಗ್ ರಸ್ತೆಗಳು. ಮೇಲ್ಲೇತುವೆಗಳು, ಸಿಗಂದೂರು ಚೌಡೇಶ್ವರಿ ಸೇತುವೆ, ರೈಲ್ವೆಗಳ ಅಭಿವೃದ್ಧಿ, ರಸ್ತೆ ಸೇರಿದಂತೆ ಇನ್ನೂ ಅನೇಕ ಮೂಲಭೂತ ಸೌಕರ್ಯಗಳ ಬಗ್ಗೆ ಕೇಂದ್ರ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ನಿಷ್ಠೆ-ಪ್ರಾಮಾಣಿಕತೆಯಿಂದ ಮಾಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇಂತಹ ಜನಪರವಾದ ಕೆಲಸಗಳನ್ನು ನೋಡಿ ಪಾಪ ಸಚಿವ ಮಧು ಬಂಗಾರಪ್ಪನವರಿಗೆ ತಡೆದುಕೊಳ್ಳಲಾಗದೆ ವಿನಾಕಾರಣ ಈ ಸಂಬಂಧ ಹೇಳಿಕೆಗಳನ್ನು ನೀಡುತ್ತಾ ನಾನಿನ್ನು ಜಿಲ್ಲೆಯಲ್ಲಿ ಇದ್ದೇನೆ ಎಂದು ತೋರಿಸಿಕೊಳ್ಳಲು ಹೊರಟಿದ್ದಾರೆ.

ಸಿಗಂದೂರು ಚೌಡೇಶ್ವರಿ ಸೇತುವೆ ಉದ್ಘಾಟನೆಗೆ ಮೊದಲೇ ಕೇಂದ್ರ ಭೂಸಾರಿಗೆ ಇಲಾಖೆಯ ಸಂಬಂಧ ಪಟ್ಟ ಅಧಿಕಾರಿಗಳು ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಿದ್ದರೂ ಸಹ ರಾಜಕೀಯ ಕಾರಣಗಳಿಗಾಗಿ ಉದ್ಘಾಟನೆಗೆ ಬರದಿರುವುದು ಅವರ ಹದಪತನ ತೋರಿಸುತ್ತದೆ. ಇದರ ಹಿಂದೆ ಸಚಿವ ಮಧು ಬಂಗಾರಪ್ಪನವರ ಕೀಳು ರಾಜಕೀಯ ವರ್ತನೆ ಕೆಲಸ ಮಾಡಿದೆ ಎಂದಿದ್ದಾರೆ.

1001939885

ರಾಜ್ಯ ಸರ್ಕಾರ ಗ್ಯಾರಂಟಿಗೆ ಹಣ ಹೊಂದಿಸಲು ಸಣ್ಣಪುಟ್ಟ ಕ್ಯಾಂಟೀನ್, ಗೂಡಂಗಡಿ, ತರಕಾರಿ ಅಂಗಡಿಗಳವರೆಗೆ ಜಿಎಸ್‌ಟಿ ಟ್ಯಾಕ್ಸ್ ಕಟ್ಟಲು ನೋಟಿಸ್ ನೀಡಿದೆ. ಇದು ಕೇಂದ್ರ ಸರ್ಕಾರದ ನಿರ್ಧಾರವಲ್ಲ, ರಾಜ್ಯದ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ಜವಾಬ್ದಾರಿಯಾಗಿದೆ ಇದು ಗೊತ್ತಿದ್ದರೂ ಜನರ ಧಿಕ್ಕು ತಪ್ಪಿಸಲು ಕೇಂದ್ರ ಸರ್ಕಾರದ ಮೇಲೆ ಗೂಬೆಕೂರಿಸಲು ಹೊರಟಿದ್ದಾರೆ ಇದು ಖಂಡನೀಯ ಎಂದಿದ್ದಾರೆ.

ರಾಜ್ಯ ಸರ್ಕಾರ ಕೂಡಲೇ ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಕಳಿಸಿರುವ ನೋಟಿಸ್‌ಗಳನ್ನು ಕೂಡಲೇ ವಾಪಸ್ ಪಡೆಯಬೇಕು ಇಲ್ಲವಾದರೆ ಬಿಜೆಪಿಯಿಂದ ಹೋರಾಟ ನಡೆಸಲಾಗುವುದೆಂದು ಜಿಲ್ಲಾಧ್ಯಕ್ಷ ಎನ್. ಕೆ. ಜಗದೀಶ್ ಪತ್ರಿಕೆ ಹೇಳಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...