ಶಿವಮೊಗ್ಗ | ಜನರ ಸಮೃದ್ಧಿಯೇ ನಿತ್ಯ ನವರಾತ್ರಿ: ಸಚಿವ ಮಧುಬಂಗಾರಪ್ಪ ಆಶಯ

Date:

ಕಲಿಯುವ ಮಕ್ಕಳಿಗೆ ಉತ್ತಮ ವಿದ್ಯೆ, ಯೋಗ್ಯ ಸಂಸ್ಕಾರ, ರೈತರು ಉಳುವ ಭೂಮಿಗೆ ಹಕ್ಕುಪತ್ರ, ನೀರಾವರಿ ಮತ್ತು ಉತ್ತಮ ಬೆಳೆ ಬಂದರೆ ನಿತ್ಯವೂ ನವರಾತ್ರಿ ಸಂಭ್ರಮ ಮನೆಮಾಡುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

- Advertisement -

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶ್ರೀಕ್ಷೇತ್ರ ಸಿಗಂದೂರು ಚೌಡಮ್ಮ ದೇಗುಲದಲ್ಲಿ ದಸರಾ ವೈಭವ ಕಾರ್ಯಕ್ರಮಕ್ಕೆ ಚೆಂಡೆ ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದರಿಂದ ನವರಾತ್ರಿಯ ಸಂಭ್ರಮ ಇಮ್ಮಡಿಯಾಗಿದೆ. ರಾಜ್ಯ ಸರ್ಕಾರ ಸಂವಿಧಾನ ಓದು ಕಾರ್ಯಕ್ರಮವನ್ನು ಜಾರಿಗೆ ತಂದಿರುವುದರಿಂದ ಮಕ್ಕಳಲ್ಲಿ ಸಂವಿಧಾನದ ಅರಿವು, ಜಾತ್ಯತೀತ ಮನೋಭಾವ ಹೆಚ್ಚಾಗುತ್ತದೆ. ಮಕ್ಕಳನ್ನು ಜಾತಿ-ಧರ್ಮದ ತಾರತಮ್ಯದಿಂದ ದೂರ ಮಾಡುತ್ತದೆ” ಎಂದರು.

“ಮಕ್ಕಳಲ್ಲಿ ಜಾತಿ ಪ್ರೇಮ ಮೂಡಬಾರದು. ಇದು ಎಂದಿಗೂ ದೇಶ ಪ್ರೇಮವಾಗುವುದಿಲ್ಲ. ಜಾತಿ- ಧರ್ಮದ ಸಂಕೋಲೆ ತೊರೆದು ಒಳ್ಳೆಯ ಪ್ರಜೆಯಾಗಬೇಕು ಎಂದರೆ, ಡಾ. ಬಿ ಆರ್ ಅಂಬೇಡ್ಕರ್‌ ಅವರು ಕೊಟ್ಟ ಸಂವಿಧಾನದಿಂದ ಮಾತ್ರ ಸಾಧ್ಯ. ಒಂದೇ ಜಾತಿ, ಒಂದೇ ಮತವೆಂಬ ನಾರಾಯಣ ಗುರುಗಳ ಆಶಯವನ್ನು ವೇದಿಕೆ ಮೇಲೆ ಭಾಷಣ ಮಾಡಲಾಗುತ್ತದೆ. ಆದರೆ, ರಾಜಕಾರಣಕ್ಕೆ ಹೋಗಿ ಜಾತಿ, ಧರ್ಮದ ಹೆಸರಿನಲ್ಲಿ ಕಚ್ಚಾಡಿದರೆ, ದೇಶದ ಭವಿಷ್ಯ ಕಟ್ಟಲು ಸಾಧ್ಯವಿಲ್ಲ” ಎಂದರು.

ನಾಡಿನ ಅಸಂಖ್ಯಾತ ಭಕ್ತರ ಶ್ರದ್ಧಾ ಕೇಂದ್ರ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಸಮಷ್ಟಿಯ ದೃಷ್ಟಿಕೋನವನ್ನು ಹೊಂದಿದೆ. ಧರ್ಮದರ್ಶಿ ರಾಮಪ್ಪ ಅವರು ಅನೇಕ ಸಾಮಾಜಿಕ ಕಾರ್ಯಗಳಿಗೆ ಜೀವ ತುಂಬಿದ್ದಾರೆ. ಅದೇ ರೀತಿ, ಶಿಕ್ಷಣ ಕ್ಷೇತ್ರಕ್ಕೂ ಅಪಾರ ಕೊಡುಗೆ ನೀಡಿದ್ದಾರೆ. ಆದ್ದರಿಂದ, ಮುಂದಿನ ದಿನದಲ್ಲೂ ಈ ಸಹಕಾರ ಶಿಕ್ಷಣ ಕ್ಷೇತ್ರಕ್ಕೆ ಇರಲಿ”‌ ಎಂದು ಕೋರಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಗಾಂಧೀಜಿ ಪ್ರತಿಪಾದಿಸಿದ ಅಭಿವೃದ್ಧಿ ಮಾದರಿ ವಿಕಸಿತ ಭಾರತದ ಗುರಿ ಸಾಧಿಸಲು ಸಾಧ್ಯ: ಕುಲಪತಿ ಬಿ ಕೆ ತುಳಸಿಮಾಲ

ಸಿಗಂದೂರು ಕ್ಷೇತ್ರದ ಧರ್ಮದರ್ಶಿ ರಾಮಪ್ಪ ಮಾತನಾಡಿ, “ಚೌಡೇಶ್ವರಿ ದೇವಿಯ ಅನುಗ್ರಹದಿಂದ ಉತ್ತಮ ಮಳೆ-ಬೆಳೆ ಆಗಿದೆ. ಇಲ್ಲಿ ದಸರಾ ಹಬ್ಬವನ್ನು 34 ವರ್ಷದಿಂದ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಶ್ರೀ ಕ್ಷೇತ್ರದಿಂದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿಕೊಂಡು ಬರಲಾಗುತ್ತಿದೆ. ಇಲ್ಲಿ ದಶಕಗಳಿಂದ ಬಗೆಹರಿಯದ ಹತ್ತಾರು ಸಮಸ್ಯೆಗಳು ಜೀವಂತವಾಗಿವೆ. ಈ ಎಲ್ಲ ಸಮಸ್ಯೆಗಳಿಗೆ ಸರ್ಕಾರ ಮುಕ್ತಿ ಕೊಡಿಸಬೇಕು. ಮುಳುಗಡೆ ರೈತರು ಹಾಗೂ ಬಗರ್‌ ಹುಕುಂ ಸಾಗುವಳಿ ಸಮಸ್ಯೆಗೆ ಪರಿಹಾರ ಒದಗಿಸಬೇಕು. 75 ವರ್ಷಗಳ ದಾಖಲೆ ಕೇಳಿದರೆ ಮುಳುಗಡೆ ಸಂತ್ರಸ್ತರಿಗೆ ಕೊಡಲಾಗುವುದಿಲ್ಲ ಈ ಬಗ್ಗೆ ಸರ್ಕಾರ ಗಮನ ಹರಿಸಬೇ‌ಕು” ಎಂದು ಹೇಳಿದರು.

ಪ್ರಮುಖರಾದ ಆರ್ ಪ್ರಸನ್ನ ಕುಮಾರ, ಕಲಗೋಡು ರತ್ನಾಕರ, ಶ್ರೀನಿವಾಸ ಕರಿಯಣ್ಣ, ಶಾಂತವೀರ ನಾಯ್ಕ, ಹೊಳಿಯಪ್ಪ, ಸರಸ್ವತಿ ಗಣಪತಿ, ಮಂಜಪ್ಪ ಮರಸ, ಯೋಗರಾಜ್‌ ಯಮಗಳಲತೆ ಸೇರಿದಂತೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...