ಶಿವಮೊಗ್ಗ | ಜಿಲ್ಲಾ ಉಸ್ತುವಾರಿ ಸಚಿವರಿಂದ ನೂತನ ತಾ.ಪಂ. ಕಟ್ಟಡ ಲೋಕಾರ್ಪಣೆ

Date:

ಶಿವಮೊಗ್ಗ, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಜನಸಾಮಾನ್ಯರ ಪರಿಶ್ರಮದ ಫಲವಾಗಿ ಇಂದು ನೂತನ ತಾಲ್ಲೂಕು ಪಂಚಾಯ್ತಿ ಕಟ್ಟಡ ಉದ್ಘಾಟನೆಯಾಗಿರುವುದು ಬಹಳ ಸಂತೋಷವನ್ನು ಉಂಟು ಮಾಡಿದೆ ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ತಿಳಿಸಿದರು.

- Advertisement -

ಶನಿವಾರ ನಗರದಲ್ಲಿ ನೂತನ ತಾಲ್ಲೂಕು ಪಂಚಾಯತಿ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತಾನಾಡಿದರು. ತಾಲ್ಲೂಕು ಪಂಚಾಯಿತಿ ನೂತನ ಕಟ್ಟಡವನ್ನು ಬಹಳ ಅಚ್ಚುಕಟ್ಟಾಗಿ ನಿರ್ಮಿಸಲಾಗಿದೆ ಎಂದ ಅವರು ಇನ್ನು ಬಾಕಿ‌ ಉಳಿದಿರುವ ಕಾಮಗಾರಿಗಳಿಗೆ, ಹೆಚ್ಚಿನ ಅನುದಾನ ತಂದು ಉಳಿದ ಕೆಲಸವನ್ನು ಸಂಪೂರ್ಣ ಮಾಡಲು ಸಹಕರಿಸುವುದಾಗಿ ಇದೇ ವೇಳೆ ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಾರ್ಯಪಾಲಕ ಅಭಿಯಂತರರಾದ ಬಿ.ಎನ್. ಮಂಜುನಾಥ್ ಮಾತನಾಡಿ, ತಾ.ಪಂ. ಕಟ್ಟಡವು ರೂ.2 ಕೋಟಿ ಮೊತ್ತದಲ್ಲಿ ಅನುಮೋದನೆಗೊಂಡಿದ್ದು, 1.72 ಕೋಟಿ ಮೊತ್ತದಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗಿದೆ ಹಾಗೂ ಕಟ್ಟಡಕ್ಕೆ ತಾರಸಿ ಶೀಟ್ ಸೇರಿದಂತೆ ಇನ್ನೂ ಕೆಲವು ಕಾಮಗಾರಿಗಳು ಬಾಕಿ ಉಳಿದಿದ್ದು, ಸಚಿವರು ಅನುದಾನ ಬಿಡುಗಡೆ ಮಾಡಿಸಿಕೊಡಬೇಕೆಂದು ಮನವಿ‌ ಮಾಡಿದರು.

ಕಾರ್ಯಕ್ರಮದಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಶಾರದಾ ಪೂರ್ಯಾನಾಯ್ಕ್ ಮಾತನಾಡಿ, ತಾ.ಪಂ. ಕಟ್ಟಡವನ್ನು ಸುಸಜ್ಜಿತವಾಗಿ‌ನಿರ್ಮಿಸಲಾಗಿದೆ. ಮುಂಬರುವ ದಿನಗಳಲ್ಲಿ ತಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಆಯ್ಕೆಯಾಗಿ ಇಲ್ಲಿ ಉತ್ತಮವಾದ ಆಡಳಿತ ನಡೆಸುವಂತಾಗಲಿ ಎಂದು ಹಾರೈಸಿದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ್, ತಾಲ್ಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಮಧು ಹೆಚ್.ಎಂ, ಜಿ.ಪಂ.ಸಿಇಓ ಹೇಮಂತ್, ತಾಲ್ಲೂಕು ಪಂಚಾಯತ್ ಇಓ ತಾರಾ, ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...