ಶಿವಮೊಗ್ಗ | ಜ.12ರಂದು ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿಗೆ ಅಧಿಕೃತ ಚಾಲನೆ: ಸಚಿವ ಮಧು ಬಂಗಾರಪ್ಪ

Date:

Advertisements

ಜ.12ರಂದು ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿಗೆ ಶಿವಮೊಗ್ಗ ಜಿಲ್ಲೆಯಿಂದ ಅಧಿಕೃತ ಚಾಲನೆ ಸಿಗಲಿದೆ. ನಾವು ನುಡಿದಂತೆ ನಡೆದಿದ್ದೇವೆ. ಯುವಕರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಯುವನಿಧಿ ಯೋಜನೆಯ ಉದ್ಘಾಟನಾ ಸಮಾರಂಭದ ಪೂರ್ವಬಾವಿ ಸಭೆಯಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಲಕ್ಷಾಂತರ ಜನ ಭಾಗವಹಿಸುವ ನಿರೀಕ್ಷೆ ಇದೆ. ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದೇವೆ. ಕೌಶಲ್ಯಾಭಿವೃದ್ಧಿ ಇಲಾಖೆ ಈಗಾಗಲೇ ಸಿದ್ಧತೆ ನಡೆಸಿದೆ. ಕಾರ್ಯಕರ್ತರು ನಿರುದ್ಯೋಗಿ ಯುವಕರ ಗಮನಕ್ಕೆ ತನ್ನಿ, ಯುವಕರಲ್ಲಿ ನಾವು ಪದವಿ ಮುಗಿಸಿದರು ಪೋಷಕರಿಗೆ ಭಾರವಾಗಿದ್ದೇವೆ ಎಂಬ ಆತಂಕ ಬೇಡ ಎಂದರು.

Advertisements

ಉನ್ನತ ಶಿಕ್ಷಣ ಸಚಿವ ಸುಧಾಕರ್ ಮಾತನಾಡಿ, ಈಗಾಗಲೇ ಜನಪ್ರಿಯ ನಾಲ್ಕು ಗ್ಯಾರಂಟಿಗಳನ್ನು ನೀಡಿದ್ದೇವೆ. ಜನರ ಇಟ್ಟ ವಿಶ್ವಾಸಕ್ಕೆ ನಾವು ಋಣಿಯಾಗಿದ್ದು, ಕೊಟ್ಟ ಭರವಸೆಯನ್ನು ಈಡೇರಿಸಿದ್ದೇವೆ. ಅರ್ಹ ಫಲಾನುಭವಿಗಳನ್ನು ಇಲಾಖೆ ಗುರುತಿಸಿ, ಈ ಯೋಜನೆಯಂತೆ ಯುವಕರಿಗೆ ಸಹಕಾರ ನೀಡುತ್ತೇವೆ. ನಿರುದ್ಯೋಗಿ ಯುವಕರು ತಲೆಯೆತ್ತಿ ನಿಲ್ಲುವಂತೆ ಮಾಡಿದ್ದೇವೆ ಎಂದರು.

ವೈದ್ಯಕೀಯ ಶಿಕ್ಷಣ ಸಚಿವ ಶರಣ್‍ಪ್ರಕಾಶ್ ಮಾತನಾಡಿ, ಶಿವಮಗ್ಗದಲ್ಲಿ ಜ.12ರಂದು ಯುವ ನಿಧಿ ಯೋಜನೆಯಡಿಯಲ್ಲಿ ಸೂಕ್ತ ಫಲಾನುಭವಿಗಳಿಗೆ ಪದವಿದರರಿಗೆ 3000, ಡಿಪ್ಲೋಮೋ ಪದವಿದರರಿಗೆ 1,500 ಧನಸಹಾಯ ನೀಡಲಿದ್ದು, ಮುಖ್ಯಮಂತ್ರಿಗಳು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಶಿವಮೊಗ್ಗ ಸಮಾಜವಾದಿ ಹೋರಾಟದ ತವರೂರು, ಮಧ್ಯ ಕರ್ನಾಟಕದಲ್ಲಿದೆ. ಇದು ಸರ್ಕಾರದ ಪ್ರಮುಖ ಆಶ್ವಾಸನೆಯಾಗಿದ್ದು, ಇಲ್ಲಿಂದಲೇ ನೆರವೇರಿಸುತ್ತಿದ್ದೇವೆ. ಇಲ್ಲಿ ಪ್ರಣಾಳಿಕೆ ಸಮಿತಿಯ ಉಪಾಧ್ಯಕ್ಷರು, ಕ್ರಿಯಾಶೀಲಾ ಮಂತ್ರಿಗಳಾದ ಮಧುಬಂಗಾರಪ್ಪನವರು ಈ ಯೋಜನೆಯ ಅನುಷ್ಠಾನಕ್ಕೆ ಅವಿರತವಾಗಿ ಶ್ರಮಿಸುತ್ತಿದ್ದಾರೆ. ನಿರುದ್ಯೋಗಿ ಯುವಕರು ಆತಂಕ ಬಿಟ್ಟು, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಿ ಎಂದರು.

ಈಗಾಗಲೇ 25 ಸಾವಿರಕ್ಕೂ ಹೆಚ್ಚು ಯುವಕರು ನೊಂದಾಯಿಸಿದ್ದಾರೆ. ಇದಕ್ಕೆ ಸಮಯದ ಮಿತಿಯಿಲ್ಲ. ಯೋಜನೆ ಜಾರಿಯಾದ ನಂತರವು ಸತತವಾಗಿ ನೊಂದಾಣಿ ಮಾಡಿಸಿಕೊಳ್ಳಬಹುದು ಎಂದರು.

ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಕಾಂಗ್ರೆಸ್ ಸರ್ಕಾರ ರಚನೆಗೊಂಡ ನಂತರ ಐದನೇ ಗ್ಯಾರೆಂಟಿ ಗೆ ಚಾಲನೆ ನೀಡಲಾಗಿದೆ. ಬಿಜೆಪಿ ಭದ್ರಕೋಟೆಗೆ ಯುವನಿಧಿ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗಿಯಾಗಿ ಬಲಪ್ರದರ್ಶಿಸಬೇಕಿದೆ ಎಂದರು.

ಕಾಂಗ್ರೆಸ್ ಕಚೇರಿಯಲ್ಲಿ ಯುವನಿಧಿ ಪೂರ್ವಭಾವಿ ಸಭೆಯಲ್ಲಿ ಇಂದು ಮೂವರು ಸಚಿವರು ಭಾಗವಹಿಸಿದ್ದು, ಅವರ ಎದುರಿನಲ್ಲೇ ಕಾರ್ಯಕರ್ತರು ಎದ್ದು ನಿಂತು ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದಿದೆ. ನೀವು ಕಾರ್ಯಕರ್ತರಿಗೆ ಯಾವಾಗ ಅಧಿಕಾರ ನೀಡುತ್ತಿರ, ನಿಗಮ ಮಂಡಳಿಗಳಿಗೆ ಯಾವಾಗ ಅಧ್ಯಕ್ಷರನ್ನು ನೇಮಕ ಮಾಡುತ್ತಿರ ಎಂದು ಕೆಲವು ಕಾರ್ಯಕರ್ತರು ಪ್ರಶ್ನಿಸಿದರು.

ಸ್ಥಳದಲ್ಲಿದ್ದ ಅನೇಕ ಕಾರ್ಯಕರ್ತರು ಅದಕ್ಕೆ ಧ್ವನಿಗೂಡಿಸಿದರು. ಈ ಸಂದರ್ಭದಲ್ಲಿ ಸಭೆಯಲ್ಲಿ ಗೊಂದಲದ ವಾತಾವರಣ ಉಂಟಾಯಿತು. ಭದ್ರಾವತಿಯ ಸಿ.ಎಂ.ಖಾದರ್ ಅವರು ಅಲ್ಪಸಂಖ್ಯಾತರನ್ನು ಕಡೆಗಣಿಸಬೇಡಿ, ನಾವು ಬೆಂಬಲ ನೀಡುತ್ತ ಬಂದಿದ್ದೇವೆ. ಕಲಡ್ಕ ಪ್ರಭಾಕರ್ ಭಟ್‍ರು ಅತ್ಯಂತ ತುಚ್ಛವಾಗಿ ಅಲ್ಪಸಂಖ್ಯಾತರನ್ನು ಅವಮಾನಿಸಿದ್ದಾರೆ. ಆದರು ಕಾಂಗ್ರೆಸ್ ನಾಯಕರು ಪ್ರತಿಕ್ರಿಯಿಸಲಿಲ್ಲ. ನಿಮಗೂ ಬಿಜೆಪಿಗೂ ಏನೂ ವ್ಯತ್ಯಾಸವಿಲ್ಲವೇ . ಎಲ್ಲವನ್ನು ಅಲ್ಪಸಂಖ್ಯಾತರು ಒಪ್ಪಿಕೊಳ್ಳಬೇಕ ಎಂದು ಏರುಧ್ವನಿಯಲ್ಲಿ ಪ್ರಶ್ನಿಸಿದರು. ಸಚಿವರು ಪ್ರತಿಕ್ರಿಯಿಸದೆ ಸಭೆಯಿಂದ ತೆರಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್, ಭದ್ರಾವತಿ ಶಾಸಕ ಸಂಗಮೇಶ್, ಸಾಗರ ಶಾಸಕ ಬೇಳುರು ಗೋಪಾಲಕೃಷ್ಣ ಪ್ರಮುಖರಾದ ಆಯನೂರು ಮಂಜುನಾಥ್, ಆರ್.ಎಂ. ಮಂಜುನಾಥ್‍ಗೌಡ, ಎಂ.ಶ್ರೀಕಾಂತ್, ಆರ್.ಪ್ರಸನ್ನಕುಮಾರ್, ಡಾ.ಶೀನಿವಾಸ್ ಕರಿಯಣ್ಣ, ಎನ್ ರಮೇಶ್, ಚಂದ್ರ ಭೂಪಾಲ್, ರಮೇಶ್ ಶೆಟ್ಟಿ ಶಂಕರಘಟ್ಟ, ಇಸ್ಮಾಯಿಲ್ ಖಾನ್, ಬಲ್ಖೀಶ್ ಬಾನು, ಶಾಂತವೀರನಾಯಕ್, ಇಕ್ಕೇರಿ ರಮೇಶ್ ಅನಿತಾಕುಮಾರಿ, ಕಲಗೋಡು ರತ್ನಾಕರ್, ಖಲೀಂ ಪಾಷಾ, ಜಿ.ಡಿ.ಮಂಜುನಾಥ್, ವಿಜಯಕುಮಾರ್, ದೇವಿಕುಮಾರ್, ದೇವೇಂದ್ರಪ್ಪ, ಶಿವಕುಮಾರ್, ಮತ್ತಿತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X