ಶಿವಮೊಗ್ಗ | ಅಧಿಕಾರಿಗಳು ರೈತರ ಹಿತ ಕಾಯುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿ: ಮಧು ಬಂಗಾರಪ್ಪ

Date:

ಶಿವಮೊಗ್ಗ ಜಿಲ್ಲೆಯ ರೈತರು ಹಾಗೂ ತೋಟಗಾರಿಕೆ ಬೆಳೆಗಾರರು ಬೆಳೆದ ಅಡಿಕೆ, ಭತ್ತ ಮತ್ತಿತರರ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ಅನಗತ್ಯವಾಗಿ ಭಾರೀ ಪ್ರಮಾಣದ ತೆರಿಗೆ ವಿಧಿಸುತ್ತಿರುವುದು ಸರಿಯಲ್ಲ. ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ರೈತರ ಹಿತ ಕಾಯುವಲ್ಲಿ ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದರು.

- Advertisement -

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಅನಗತ್ಯ ತೆರಿಗೆಯ ಸಮಸ್ಯೆಯಿಂದ ಪಾರಾಗಲು ರೈತರಿಗೆ ಇರಬಹುದಾದ ಸಾಧ್ಯತೆಗಳ ಬಗ್ಗೆ ಪ್ರಥಮ ಹಂತದ ಮಾಹಿತಿ ಕಾರ್ಯಾಗಾರಗಳನ್ನು ಆಯೋಜಿಸಬೇಕು. ಮಲೆನಾಡು ಸೇರಿದಂತೆ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ನೂತನ ರಸ್ತೆಗಳ ನಿರ್ಮಾಣ ಮತ್ತು ದುರಸ್ಥಿಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕೂಡಲೇ ಕ್ರಿಯಾಯೋಜನೆ ರೂಪಿಸಿ ಪ್ರಸ್ತಾವನೆ ಸಲ್ಲಿಸಿದಲ್ಲಿ ಸರ್ಕಾರದಿಂದ ಹೆಚ್ಚಿನ ಅನುದಾನ ತರಲು ಪ್ರಾಮಾಣಿಕವಾಗಿ ಯತ್ನಿಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕಳೆದ ಶೈಕ್ಷಣಿಕ ಸಾಲಿನಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಸರ್ಕಾರಿ ಕಟ್ಟಡಗಳು, ಶಿಥಿಲಗೊಂಡ ಶಾಲೆಗಳ ವಿವರಗಳನ್ನು ನೀಡುವಂತೆ ಸೂಚಿಸಿದ ಅವರು, ಈಗಾಗಲೇ ಕೈಗೆತ್ತಿಕೊಂಡಿರುವ ರಸ್ತೆ, ಸೇತುವೆ, ಕಾಲುವೆ ಮತ್ತಿತರ ಕಟ್ಟಡಗಳ ಕಾಮಗಾರಿಯನ್ನು ನಿಗದಿಪಡಿಸಿದ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.

1001273617

ಗ್ರಾಮೀಣ ಜನರಿಗೆ ಉತ್ತಮ ಸಂಪರ್ಕ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಸುಮಾರು 400 ಕಾಲುಸಂಕಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಆ ಪೈಕಿ ಈಗಾಗಲೇ 150 ಕಾಲುಸಂಕ (ಕಾಲುಸೇತುವೆ)ಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗಿದೆ. ಬಾಕಿ ಇರುವೆಡೆಗಳಲ್ಲಿ ಆದ್ಯತೆಯ ಮೇಲೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

ಅಲ್ಲದೆ ಜಿಲ್ಲೆಯಲ್ಲಿ ಮನೆ ಮನೆಗೆ ಶುದ್ಧ ಕುಡಿಯುವ ನೀರು ಪೂರೈಸಲು ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳು ಹಾಗೂ ಗ್ರಾಮದ ನಿವಾಸಿಗಳಿಗೆ ಮೊಬೈಲ್ ಸಂಪರ್ಕ ಸೌಲಭ್ಯ ಕಲ್ಪಿಸಿಕೊಡಲು ನಿರ್ಮಿಸಲಾಗುತ್ತಿರುವ ಟವರ್‌ಗಳನ್ನು ಕೂಡಲೇ ಪೂರ್ಣಗೊಳಿಸುವಂತೆ ಸೂಚಿಸಿದ ಅವರು, ಈ ಸಂದರ್ಭದಲ್ಲಿ ಎದುರಾಗುವ ಸಮಸ್ಯೆಗಳ ಪರಿಹಾರಕ್ಕಾಗಿ ಇಲಾಖೆಗಳ ಅಧಿಕಾರಿಗಳ ನಡುವೆ ಸಮನ್ವಯತೆ ಇಟ್ಟುಕೊಳ್ಳುವಂತೆ ಸಲಹೆ ನೀಡಿದರು.‌

ಈ ಸುದ್ದಿ ಓದಿದ್ದೀರಾ?:ಶಿವಮೊಗ್ಗ | ಫೆ.25ರಂದು ಸಚಿವ ಜಮೀರ್ ಅಹ್ಮದ್‌ರಿಂದ ಆಶ್ರಯ ಮನೆ ಹಂಚಿಕೆ

ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ವಿಧಾನ ಪರಿಷತ್ ಸದಸ್ಯೆ ಬಿಲ್ಕಿಸ್ ಬಾನು, ರಾಜ್ಯ ಬೋವಿ ನಿಗಮದ ಅಧ್ಯಕ್ಷ ರವಿಕುಮಾರ್, ಸಿ. ಸಿ. ಎಫ್. ಹನುಮಂತಪ್ಪ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...