ಶಿವಮೊಗ್ಗ | ಮಳೆ ಸಂತ್ರಸ್ತರ ಸಮಸ್ಯೆಗೆ ಶೀಘ್ರವಾಗಿ ಸ್ಪಂದಿಸಬೇಕು; ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

Date:

ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಹಲವಾರು ಜನರು ನಾನಾ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮಳೆ ಸಂತ್ರಸ್ತರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸಿ, ನಿಯಮಾನುಸಾರ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಮತ್ತು ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ ಸೂಚಿಸಿದ್ದಾರೆ.

- Advertisement -

ಶಿವಮೊಗ್ಗದಲ್ಲಿ ಪ್ರಕೃತಿ ವಿಕೋಪ ಮತ್ತು ಅಡಿಕೆ ಬೆಳೆಯ ಎಲೆಚುಕ್ಕಿ ರೋಗದ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು. “ಈ ವರ್ಷ ತಡವಾಗಿ ಮಳೆ ಆರಂಭವಾಗಿದೆ. ಸದ್ಯಕ್ಕೆ ಹೆಚ್ಚು ಪ್ರಾಕೃತಿಕ ಹಾನಿಯಾಗಿಲ್ಲ. ಮಲೆನಾಡು ಭಾಗದಲ್ಲಿ ಮರಗಳು ವಿದ್ಯುತ್ ಕಂಬಗಳ ಮೇಲೆ ಬಿದ್ದು ಹಾನಿಯಾಗುತ್ತಿದೆ. ಕೆಲವೆಡೆ ರಸ್ತೆ, ಸೇತುವೆ, ಬೆಳೆ – ಮೂಲಭೂತ ಸೌಕರ್ಯಗಳಿಗೆ ಹಾನಿಯಾಗಿದೆ. ಅಧಿಕಾರಿಗಳು ತಮ್ಮ ಕಾರ್ಯಸ್ಥಾನದಲ್ಲಿದ್ದುಕೊಂಡು ಎಲ್ಲವನ್ನು ಗಮನಿಸಬೇಕು. ಎಚ್ಚರಿಕೆಯಿಂದ ಶೀಘ್ರವಾಗಿ ಕ್ರಮ ಕೈಗೊಂಡು ಪರಿಹಾರ ಒದಗಿಸಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

“ಹಳೆಯ ಶಾಲೆ ಕೆಡುವುದು ಮತ್ತು ಮರಗಳನ್ನು ಕಟಾವು ಮಾಡುವುದು ಅತಿ ಮುಖ್ಯ. ಇದು ತುಂಬಾ ಗಂಭೀರ ವಿಚಾರವಾಗಿದ್ದು, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಶೀಘ್ರ ಕ್ರಮ ಕೈಗೊಳ್ಳಬೇಕು. ಡಿಡಿಪಿಐ ಅವರು ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡ ಕೆಡವಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಪಿಡಬ್ಲ್ಯುಡಿ ಮತ್ತು ಪಿಆರ್‍ಇಡಿ ಅಧಿಕಾರಿಗಳು ಶುಕ್ರವಾರದೊಳಗೆ ವರದಿ ನೀಡಬೇಕು: ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಸೆಲ್ವಮಣಿ, ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್‍ಕುಮಾರ್, ಶಾಸಕರಾದ ಆರಗ ಜ್ಞಾನೇಂದ್ರ, ಶಾರದಾ ಪೂರ್ಯ ನಾಯ್ಕ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿರಂತರತೆಯೇ ರಂಗಭೂಮಿಯ ನಿಜವಾದ ಶಕ್ತಿ: ಕೋಟಿಗಾನಹಳ್ಳಿ ರಾಮಯ್ಯ

ರಂಗಭೂಮಿ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಲು ಇಚ್ಛಾಶಕ್ತಿ, ಬದ್ಧತೆ ಹಾಗೂ ಸಾಂಸ್ಕೃತಿಕ ಹೊಣೆಗಾರಿಕೆ...

ಉಡುಪಿ | ಸೌಹಾರ್ದ ಸಮಾಜ ಕಟ್ಟುವ ಹೊಣೆ ಮುಸ್ಲಿಮ್ ಒಕ್ಕೂಟ ವಹಿಸಲಿ: ಯು.ಟಿ.ಖಾದರ್

ಸಾಮರಸ್ಯದ ಬದುಕು ಮತ್ತು ಒಗ್ಗಟ್ಟಿನ ಸಮಾಜವೇ ನಮ್ಮ ದೊಡ್ಡ ಶಕ್ತಿ ಹಾಗೂ...

ಹಾಸನ | ಗೊರೂರು ಪಂಕಜ: ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026ಕ್ಕೆ ಹಾಸನದ...

ಜಮಖಂಡಿ | ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ: 4 ಸಾವಿರ ಅರ್ಜಿಗಳ ಪೈಕಿ 3 ಸಾವಿರಕ್ಕೂ ಹೆಚ್ಚು ವಿಲೇವಾರಿ

ಸರ್ಕಾರದ ವಿವಿಧ ಸೇವೆ ಹಾಗೂ ಸೌಲಭ್ಯಗಳನ್ನು ಪಡೆಯಲು ಕಚೇರಿಗಳಿಗೆ ಅಲೆದಾಡುವ ಬದಲು...