ಶಿವಮೊಗ್ಗ ನಗರದ ನ್ಯೂಮಂಡ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿರುವ ಉರ್ದು ಶಾಲೆಯಲ್ಲಿ ಎಲ್‌ಕೆಜಿಯಿಂದ ಎಂಟನೇ ತರಗತಿವರೆಗೆ ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಪ್ರಸ್ತುತ ವರ್ಷದಲ್ಲಿ 160ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದಾರೆ. ಕನ್ನಡ ಶಾಲೆಯಲ್ಲಿ 200ಕ್ಕೂ ಅಧಿಕ ಮಕ್ಕಳ ದಾಖಲಾತಿಯಿದೆ.
ಶಾಲೆಯಲ್ಲಿ ಶಿಕ್ಷಕರ ವ್ಯವಸ್ಥೆಯೂ ಚೆನ್ನಾಗಿದ್ದು ಸರಿಸುಮಾರು ಕನ್ನಡ ಶಾಲೆ ಮತ್ತೆ ಉರ್ದು ಶಾಲೆ ಸೇರಿ ಒಟ್ಟು 300ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಶಿಕ್ಷಣ ಸಿಗುತ್ತಿದೆ. ಆದರೆ ಶಾಲೆಗೆ ಕುಡಿಯುವ ನೀರಿನ ವ್ಯವಸ್ಥೆಯೇ ಇಲ್ಲದಾಗಿದೆ.

ಕುಡಿಯುವ ನೀರಿಗೆ ಸಂಬಂಧಪಟ್ಟಂತೆ ಈ ದಿನ.ಕಾಮ್ ಸೆಪ್ಟಂಬರ್ 15ರಂದು ಶಿವಮೊಗ್ಗ | ಸರ್ಕಾರಿ ಶಾಲೆಯಲ್ಲಿ ನೀರಿಗೆ ಹಾಹಾಕಾರ; ಮನವಿಗೂ ಸ್ಪಂದಿಸದ ಶಿಕ್ಷಣ ಇಲಾಖೆ, ಅಧಿಕಾರಿಗಳು ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಬಿಇಒ ವರದಿಗೆ ಸ್ಪಂದಿಸಿದ್ದು, ನ್ಯೂಮಂಡ್ಲಿ ಉರ್ದು ಶಾಲೆಗೆ ಭೇಟಿ ನೀಡಿ ಪರಿಶೀಲಿದ್ದಾರೆ. ಎಂಜಿನಿಯರ್ ಜತೆಗೆ ಮಾತನಾಡಿ ಸಮಸ್ಯೆ ಬಗೆಹರಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಮಕ್ಕಳ ಹಕ್ಕುಗಳ ರಕ್ಷಣೆ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ : ಡಾ.ಕೆ.ಟಿ. ತಿಪ್ಪೇಸ್ವಾಮಿ
