ಶಿವಮೊಗ್ಗ | ಹೈಕೋರ್ಟ್ ಆದೇಶವಾದರೂ ಭೂಮಿ ಬಿಡಿಸಿಕೊಡದ ಅಧಿಕಾರಿಗಳು; ಮಹಿಳೆ ಹೋರಾಟ

Date:

ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಫೆಬ್ರವರಿ 6ರಿಂದ ಹೋರಾಟ ನಡೆಸುತ್ತಿರುವ ದಲಿತ ಮಹಿಳೆಗೆ ಇನ್ನೂ ಪರಿಹಾರ ದೊರಕದಿದ್ದು, ಅಹೋರಾತ್ರಿ ಧರಣಿ ಮುಂದುವರಿಸಿದ್ದಾರೆ.

- Advertisement -

ಶಿವಮೊಗ್ಗ ನಗರದ ನಿವಾಸಿ ಉಮಾದೇವಿ ನ್ಯಾಯಕ್ಕಾಗಿ ಧರಣಿ ಕೂತಿದ್ದಾರೆ. ಹಸೂಡಿ ಗ್ರಾಮದ ಸರ್ವೇ ನಂಬರ್ 134/6ರಲ್ಲಿನ ಎರಡು ಎಕರೆ ಜಮೀನನ್ನು ಪಿಟಿಸಿಎಲ್ ಕಾಯ್ದೆಯಡಿ ಮರು ಸ್ವಾಧೀನ ಮಾಡಿಕೊಡಬೇಕೆಂದು ಈ ಹಿಂದೆ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. 11-12-1985ರಂದು ಆದೇಶವಾಗಿತ್ತು. ಜೆ ಜೆ ವೆಂಕಟೇಶ್ ಎಂಬವವರು ಭೂಮಿಯನ್ನು ಸ್ವಾಧೀನ ಮಾಡಿಕೊಂಡಿದ್ದರು.
ತೀರ್ಪಿನ ವಿರುದ್ಧ ಪ್ರತಿವಾದಿಯು ಜಿಲ್ಲಾ ನ್ಯಾಯಾಲಯದ ಮೆಟ್ಟಿಲೇರಿದ್ದರು. ನಂತರ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯಗಳು ತೀರ್ಪು ನೀಡಿದ್ದು ಜಮೀನನ್ನು ತೆರವುಗೊಳಿಸಬೇಕಿದೆ. ಅಧಿಕಾರಿಗಳು ನೋಟಿಸ್ ನೀಡಿ ಶೀಘ್ರದಲ್ಲಿ ಮರು ಸ್ವಾಧೀನಪಡಿಸಿಕೊಡಬೇಕಿದೆ. ಈ ಸಂಬಂಧ ಉಮಾದೇವಿ ಹೋರಾಟಕ್ಕೆ ಕುಳಿತಿದ್ದಾರೆ. ಕಾನೂನುಯುತವಾಗಿ ಬರಬೇಕಾದ ಭೂಮಿಗಾಗಿ ಬೇಡಿಕೊಳ್ಳುವಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
1001239789

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ಶಾಸಕ ಸಂಗಮೇಶ್‌ ರಾಜಿನಾಮೆಗೆ ಆಗ್ರಹಿಸಿ ಫೆ.14 ರಂದು ಜೆಡಿಎಸ್ ಪ್ರತಿಭಟನೆ

“ಆದೇಶ ಪ್ರತಿ ಸ್ಪಷ್ಟವಾಗಿದೆ. ದಿನಾಂಕ 09-01-2025ರಂದು ಹೈಕೋರ್ಟ್ ನೀಡಿರುವ ಆದೇಶದಂತೆ ಜಮೀನನ್ನು ಜೆ ಜೆ ವೆಂಕಟೇಶ್ ಅವರಿಂದ ಬಿಡಿಸಿಕೊಡಬೇಕಾಗಿದೆ. ಇಲ್ಲಿವರೆಗೂ ಅಧಿಕಾರಿಗಳು ಕ್ರಮ ತೆಗೆದುಕೊಂಡಿಲ್ಲ” ಎಂದು ಉಮಾದೇವಿ ಆರೋಪಿಸುತ್ತಿದ್ದಾರೆ.
ಉಪವಿಭಾಗಾಧಿಕಾರಿಗಳು ಹಾಗೂ ಕಂದಾಯ ಅಧಿಕಾರಿಗಳು ಉಚ್ಚ ನ್ಯಾಯಾಲಯದ ಆದೇಶಕ್ಕೆ ಮನ್ನಣೆ ನೀಡದೆ ಬರೀ ಸಬೂಬು ಹೇಳಿ ಕಾಲಹರಣ ಮಾಡುತ್ತಿದ್ದಾರೆ. ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿಯು ಈ ಹೋರಾಟಕ್ಕೆ ಬೆಂಬಲವಾಗಿ ನಿಂತಿದ್ದು, “ನ್ಯಾಯ ಸಿಗುವವರೆಗೂ, ಜಮೀನನ್ನು ಉಮಾದೇವಿಯವರಿಗೆ ಸ್ವಾಧೀನಪಡಿಸಿ ಕೊಡುವವರೆಗೂ ಧರಣಿ ಮುಂದುವರಿಸುತ್ತೇವೆ” ಎಂದು ಸಮಿತಿ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...