ಶಿವಮೊಗ್ಗ | ಅತಿಥಿ ಉಪನ್ಯಾಸಕರ ವೇತನ ಹೆಚ್ಚಳಕ್ಕೆ ಪಪೂ ಅತಿಥಿ ಉಪನ್ಯಾಸಕರ ಸಂಘ ಮನವಿ

Date:

ಸರ್ಕಾರಿ ಪದವಿಪೂರ್ವ ಕಾಲೇಜು ಅತಿಥಿ ಉಪನ್ಯಾಸಕರ ವೇತನವನ್ನು ಕನಿಷ್ಟ ₹30,000 ಹೆಚ್ಚಳ ಮಾಡುವಂತೆ ಹಾಗೂ ಅದಕ್ಕಾಗಿ ಮುಂದಿನ ಬಜೆಟ್‌ನಲ್ಲಿ ಅನುದಾನ ನಿಗದಿಪಡಿಸುವಂತೆ ಒತ್ತಾಯಿಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ಅತಿಥಿ ಉಪನ್ಯಾಸಕರ ಸಂಘ ಮನವಿ ಸಲ್ಲಿಸಿತು.

- Advertisement -

“ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಸುಮಾರು 4,659ಕ್ಕೂ ಹೆಚ್ಚು ಮಂದಿ ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದು, ಮಾಸಿಕ ₹12,000 ದಂತೆ ವೇತನ ಪಡೆಯುತ್ತಿದ್ದಾರೆ. ಇಂದಿನ ದಿನಗಳಲ್ಲಿ ನಗರ ಪ್ರದೇಶಗಳಲ್ಲಿ ಸಿಗುವ ಸಂಬಳದಲ್ಲಿ ಜೀವನ ನಡೆಸುವುದೇ ಕಷ್ಟ. ಇನ್ನು ಅತಿಥಿ ಉಪನ್ಯಾಸಕರು ಬದುಕು ಕಟ್ಟಿಕೊಳ್ಳಲು ಸಾಧ್ಯವೇ? ಸಾಕಷ್ಟು ಸಮಸ್ಯೆಗಳನ್ನು ನಿಭಾಯಿಸುವುದರಲ್ಲಿ ಅತಿಥಿ ಉಪನ್ಯಾಸಕರ ಜೀವನದ ಎತ್ತಿನ ಬಂಡಿಯ ಹಗ್ಗ-ಜಗ್ಗಾಟ ಹಳ್ಳ ಹಿಡಿಯುತ್ತಿದೆ. ರಾಜ್ಯದ ನೂರಾರು ಕಾಲೇಜುಗಳು ಅತಿಥಿ ಉಪನ್ಯಾಸಕರಿಲ್ಲದೆ ನಡೆಯುವುದೇ ಕಷ್ಟ, ಕಾಲೇಜುಗಳಲ್ಲಿ ದ್ವಿತೀಯ ದರ್ಜೆ ಸಹಾಯಕನಿಗೆ ಕೊಡುವಂತ ಸಂಬಳಕ್ಕಿಂತಲೂ ಕಡಿಮೆ ವೇತನವನ್ನು ಅತಿಥಿ ಉಪನ್ಯಾಸಕರಿಗೆ ನೀಡಲಾಗುತ್ತಿದೆ. ಈ ವ್ಯವಸ್ಥೆಯಲ್ಲಿ ಬದಲಾವಣೆ ತಂದು ಸಮಾಜದಲ್ಲಿ ಅತಿಥಿ ಉಪನ್ಯಾಸಕರೂ ಗೌರವಯುತ ಬದುಕು ನಡೆಸಲು ಅನುವು ಮಾಡಿಕೊಡಬೇಕು” ಎಂದು ಮನವಿ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಹಲವು ವರ್ಷಗಳಿಂದ ಈ ಕುರಿತು ಹೋರಾಟಗಳ ಮೂಲಕ ಸಮಸ್ಯೆಗಳನ್ನು ಗಮನಕ್ಕೆ ತರಲಾಗಿದೆ. ಆದರೆ ಯಾವ ಸರ್ಕಾರವೂ ಸಕರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ಅಲ್ಲದೆ ರಾಜ್ಯದ ಅನೇಕ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಅನೇಕ ಬೋಧನಾ ಹುದ್ದೆಗಳಿಗೆ ಖಾಯಂ ಉಪನ್ಯಾಸಕರು ಇಲ್ಲದೇ ಅತಿಥಿ ಉಪನ್ಯಾಸಕರಿಂದಲೇ ತರಗತಿಗಳು ನಡೆಯುತ್ತಿವೆ ಎಂಬುದನ್ನು ಮರೆಯುವಂತಿಲ್ಲ. ಖಾಯಂ ಉಪನ್ಯಾಸಕರಿಗಿಂತಲೂ ಹೆಚ್ಚು ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಗೌರವ ಧನವನ್ನು ಹೆಚ್ಚಿಸುವುದು ನ್ಯಾಯ ಸಮ್ಮತವಾಗಿದೆ. ಹಾಗಾಗಿ ಮುಂಬರುವ ಬಜೆಟ್‌ನಲ್ಲಿ ಅನುದಾನ ನಿಗದಿಪಡಿಸಬೇಕು” ಎಂದು ಒತ್ತಾಯಿಸಲಾಯಿತು.

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ನಾಳೆ ವಿದ್ಯುತ್‌ ವ್ಯತ್ಯಯ; ಎಲ್ಲೆಲ್ಲಿ?

ಈ ವೇಳೆ ಸಂಘದ ರಾಜ್ಯಾಧ್ಯಕ್ಷ ಪದ್ಮಪ್ರಭ ಇಂದ್ರ, ಉಪಾಧ್ಯಕ್ಷ ರಾಜೇಶ್ ಭಟ್ ಪಿ, ಜಂಟಿ ಕಾರ್ಯದರ್ಶಿ ಎಸ್ ಜಿ ನಾಗರತ್ನ, ಅಶ್ವಿನಿ ಕೆ ಎಸ್‌, ಶಿಕ್ಷಣ ತಜ್ಞ ವಿ ಎನ್ ರಾಜಶೇಖರ್, ನಿವೃತ್ತ ಪ್ರಾಚಾರ್ಯ ಬೈರೇಗೌಡ, ಕಾರ್ಯಕಾರಿಣಿ ಸಮಿತಿ ಸದಸ್ಯ ಸುಧೀರ್ ಕುಮಾ‌ರ್, ಜಗದೀಶ್, ಸುಲತಾ, ಭರತ್ ಕುಮಾರ್, ತಾರಾಸಿಂಗ್, ಸತೀಶ್, ಸದಾಶಿವ ಮುರುಗೋಡು, ವಾಸು, ಗುರುರಾಜ್, ಮಮತಾ, ನಿತ್ಯಾನಂದ, ಶಂಕರ್ ಪೂಜಾರಿ, ಸುಮಿತ್ರಾ, ಲೋಕೇಶ್ ಇನ್ನಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...