ಶಿವಮೊಗ್ಗ | ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್; ಕನ್ಸರ್ವೆನ್ಸಿ ಕ್ಲೀನ್ ಮಾಡಿಸಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಿದ ಟ್ರಾಫಿಕ್ ಪೊಲೀಸರಿಗೆ ಶ್ಲಾಘನೆ

Date:

ಶಿವಮೊಗ್ಗ ಮಹಾನಗರ ಪಾಲಿಕೆ ಮಾಡಬೇಕಾದ ಕೆಲಸವನ್ನು ನಗರದ ಟ್ರಾಫಿಕ್ ಪೊಲೀಸರು ಮಾಡಿದ್ದು, ಸಾರ್ವಜನಿರಿಂದ ಶ್ಲಾಘನೆ ವ್ಯಕ್ತಾಗಿದೆ.

ಎಲ್ಲೆಂದರಲ್ಲಿ ವಾಹನಗಳ ನಿಲುಗಡೆ ಮಾಡಿ, ಸಂಚಾರ ವ್ಯವಸ್ಥೆಗೆ ಕಂಟಕವಾಗುತ್ತಿದ್ದ ಪಾರ್ಕಿಂಗ್ ಸಮಸ್ಯೆಗೆ ಶಿವಮೊಗ್ಗದ ಟ್ರಾಫಿಕ್ ಪೊಲೀಸರು ಅಂತ್ಯ ಹಾಡಿದ್ದಾರೆ. ಶಿವಮೊಗ್ಗದ ಜನನಿಬಿಡ ಹಾಗೂ ಸದಾ ಕಾಲ ಟ್ರಾಫಿಕ್‌ನಿಂದ ಗಿಜಿಗುಡುವ ಸವಾರ್ ಲೇನ್ ರಸ್ತೆಯಲ್ಲಿ ಮುಕ್ತವಾಗಿ ವಾಹನ ಸಂಚಾರ ಮಾಡಲು ಪೊಲೀಸರು ಉಪಾಯ ಮಾಡಿದ್ದು, ರಸ್ತೆಯಲ್ಲಿ ವಾಹನಗಳನ್ನು ಎಲ್ಲಿ ಬೇಕಲ್ಲಿ ಪಾರ್ಕಿಂಗ್ ಮಾಡಿ, ವಾಹನ ಸಂಚಾರಕ್ಕೆ ಅಡಚಣೆ ಮಾಡುತ್ತಿದ್ದ ವಾಹನ ಸವಾರರಿಗೆ, ಇದೀಗ ಟ್ರಾಫಿಕ್ ಪೊಲೀಸರು ಜಾಗ ಮಾಡಿಕೊಟ್ಟಿದ್ದಾರೆ.

ಮಂಗಳವಾರ ಮುಂಜಾನೆಯಿಂದಲೇ, ಕಾರ್ಯಾಚರಣೆಗಿಳಿದ ಟ್ರಾಫಿಕ್ ಪೊಲೀಸರು, ಅಲ್ಲಿಯೇ ಇದ್ದ ಕೆಲವರನ್ನು ಕರೆದು ಪಾಳು ಬಿದ್ದಿದ್ದ ಕನ್ಸರ್ವೆನ್ಸಿ ರಸ್ತೆಯನ್ನು ಸ್ವಚ್ಚ ಮಾಡಿಸಿ, ವಾಹನಗಳ ಪಾರ್ಕಿಂಗ್‌ಗೆ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುತ್ತಿದ್ದ ಕಾರಣ ವಾಹನ ಸಂಚಾರಕ್ಕೆ ಕಿರಿಕಿರಿ ಉಂಟಾಗುತ್ತಿತ್ತು. ಅಲ್ಲದೇ, ಸಂಚಾರಿ ನಿಯಮಗಳ ಉಲ್ಲಂಘನೆ ಕೂಡ ಆಗುತ್ತಿತ್ತು. ಇದನ್ನು ತಪ್ಪಿಸಲು ಟ್ರಾಫಿಕ್‌ ಪೊಲೀಸರೇ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿದ್ದು, ಸಂಚಾರಕ್ಕೆ ವ್ಯವಸ್ಥಿತವಾದ ಅನುಕೂಲ ಮಾಡಿಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಪಶ್ಚಿಮ ಸಂಚಾರಿ ಪಿಎಸ್‌ಐ ತಿರುಮಲೇಶ್ ನೇತೃತ್ವದ ಪೊಲೀಸರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮುಚ್ಚಿರುವ ಸರ್ಕಾರಿ ಶಾಲೆಗಳ ಪುನರಾರಂಭಕ್ಕೆ ಒತ್ತಾಯ

ತಿರುಮಲೇಶ್ ಪಿಎಸ್ಐ, ಪ್ರಕಾಶ್ ಎಆರ್‌ಎಸ್‌ಐ, ಸಂದೀಪ್ ಹೆಚ್ ಸಿ, ಪ್ರಕಾಶ್ ಸಿಪಿಸಿ, ಪ್ರಶಾಂತ್‌ ಸಿಪಿಸಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ: ರೈತ ಮುಖಂಡ ಚಾಮರಸ ಮಾಲೀ ಪಾಟೀಲ್

"ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ, ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಹಗರಣಗಳ...

ಚಿಕ್ಕನಾಯಕನಹಳ್ಳಿ | ವೆಲ್ಡಿಂಗ್ ಮಾಲೀಕರ-ಕೆಲಸಗಾರರ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನೆ

ಚಿಕ್ಕನಾಯಕನಹಳ್ಳಿ ಪಟ್ಟಣದ ಮತಿಘಟ್ಟ ಗೇಟ್ ಬಳಿಯಿರುವ ವೀರಭದ್ರೇಶ್ವರ ಇಂಜಿನಿಯರಿಂಗ್ ವರ್ಕ್ಸ್ ಆವರಣದಲ್ಲಿ...

ಶಿವಮೊಗ್ಗ | ವ್ಯಾಪಕ ಮಳೆ ಹಿನ್ನೆಲೆ: ಜು.16ರಂದು ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ, ತೀರ್ಥಹಳ್ಳಿ ತಾಲೂಕಿನಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ...

ಕಲಬುರಗಿ | ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಸಾವು; ಕುಟುಂಬಸ್ಥರಿಂದ ಪ್ರತಿಭಟನೆ

ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೋರ್ವರು ಮೃತಪಟ್ಟಿದ್ದು, ವೈದ್ಯರು ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾರೆಂದು...