ಸಹೋದರರ ನಡುವೆ ಜಗಳವುಂಟಾಗಿದ್ದು, ತಲೆಯ ಮೇಲೆ ಕಲ್ಲು ಎತ್ತಿಹಾಕಿ ತಮ್ಮನ ಭೀಕರ ಕೊಲೆಯಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅನುಪಿನಕಟ್ಟೆ ಲಂಬಾಣಿ ತಾಂಡದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಗಿರೀಶ್(30) ಕೊಲೆಯಾದ ತಮ್ಮ. ಇಂದು ಬೆಳಿಗ್ಗೆ ಅಣ್ಣ ಲೋಕೇಶ್ ತಮ್ಮನ ತಲೆಯ ಮೇಲೆ ಕಲ್ಲು ಎತ್ತಿಹಾಕಿದ್ದು, ತೀವ್ರ ರಕ್ತಸ್ರಾವದಿಂದ ಗಿರೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಶಿಕ್ಷಕರಿಗೆ ʼಗುರುವಂದನೆʼ, ‘ಉಚಿತ ಆರೋಗ್ಯ ತಪಾಸಣಾ ಶಿಬಿರ’
ವೈಯಕ್ತಿಕ ವಿಚಾರಕ್ಕೆ ಕೊಲೆ ನಡೆದಿದೆ ಎನ್ನಲಾಗುತ್ತಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಆರೋಪಿ ಲೋಕೇಶ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತನಿಖೆಯನ್ನು ಮುಂದುವರೆಸಿದ್ದಾರೆ.