ಶಿವಮೊಗ್ಗ ಗಲಭೆ | ಪರಿಸ್ಥಿತಿ ನಿಯಂತ್ರಣದಲ್ಲಿದೆ, ಆತಂಕ ಅಗತ್ಯವಿಲ್ಲ: ಎಸ್‌ಪಿ

Date:

Advertisements

ಶಿವಮೊಗ್ಗದ ರಾಗಿಗುಡ್ಡ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದ ಗಲಭೆಗೆ ಸಂಬಂಧಿಸಿದಂತೆ ಪರಿಸ್ಥಿತಿಯನ್ನು ತಕ್ಷಣವೇ ನಿಯಂತ್ರಣಕ್ಕೆ ತರಲಾಗಿದ್ದು, ಪರಿಸ್ಥಿತಿ ತಹಬದಿಗೆ ಬರುತ್ತಿದೆ. ಯಾರೂ ಅನಗತ್ಯ ಭಯಭೀತರಾಗುವ ಅಗತ್ಯವಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಕೆ ಮಿಥುನ್‌ಕುಮಾರ್ ತಿಳಿಸಿದ್ದಾರೆ.

“ಗಲಭೆಯಲ್ಲಿ ಒಂದು ಕಾರು, ಮೂರು ಆಟೊ, ಎರಡು ದ್ವಿಚಕ್ರ ವಾಹನ ಜಖಂಗೊಂಡಿದ್ದು, ಕಲ್ಲು ತೂರಾಟದಿಂದ ಏಳು ಮನೆಗಳ ಕಿಟಕಿಗಳಿಗೆ ಹಾನಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಈವರೆಗೆ 24 ಪ್ರಕರಣಗಳನ್ನು ದಾಖಲಿ‌ಸಿದ್ದು, 60 ಮಂದಿಯನ್ನು ಬಂಧಿಸಲಾಗಿದೆ” ಎಂದು ತಿಳಿಸಿದ್ದಾರೆ.

ಘಟನೆ ಹಿನ್ನೆಲೆ

Advertisements

ಮನೆಗಳಿಗೆ ಕಲ್ಲು ತೂರಾಟ, ಪೊಲೀಸರೊಂದಿಗೆ ಘರ್ಷಣೆಯಿಂದಾಗಿ ಭಾನುವಾರ ರಾತ್ರಿ ಇಡೀ ರಾಜ್ಯದ ಗಮನ ಸೆಳೆದಿದ್ದ ಶಿವಮೊಗ್ಗದ ರಾಗಿಗುಡ್ಡ ಪ್ರದೇಶದಲ್ಲಿ ಸೋಮವಾರ ನೀರವ ಮೌನ ಆವರಿಸಿತ್ತು. ಜಿಲ್ಲಾಡಳಿತ 144ನೇ ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೊಳಿಸಿದ್ದರಿಂದ ಇಡೀ ದಿನ ಸ್ಥಳೀಯರ ಗದ್ದಲ ಅಡಗಿತ್ತು. ಪೊಲೀಸರ ಓಡಾಟ, ಗಣ್ಯರ ಭೇಟಿಯ ಗದ್ದಲ ಮಾತ್ರ ಅಲ್ಲಿತ್ತು.

ರಾಗಿಗುಡ್ಡ ದೇವಸ್ಥಾನ, ಕೆಲವು ಮನೆಗಳ ಬಳಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿನ ದೃಶ್ಯಗಳನ್ನು ಪರಿಶೀಲಿಸಿ ಗಲಾಟೆ ನಡೆಸಿದವರನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ನಿರತರಾಗಿದ್ದರು. ಆರ್‌ಎಎಫ್ ತುಕಡಿ ಮೊಕ್ಕಾಂ ಹೂಡಿದ್ದು, ಮೀಸಲು ಪಡೆ ಪೊಲೀಸರೊಂದಿಗೆ ಸೇರಿ ಆ ಪ್ರದೇಶದ ಗಸ್ತಿನ ಜೊತೆಗೆ ಬಂದು ಹೋಗುವವರ ಮೇಲೆ ನಿಗಾ ವಹಿಸಿತ್ತು. ರಾತ್ರಿಯೇ ಪೂರ್ವವಲಯ ಐಜಿಪಿ ತ್ಯಾಗರಾಜನ್ ಹಾಗೂ ಜಿಲ್ಲಾಧಿಕಾರಿ ಡಾ ಆರ್ ಸೆಲ್ವಮಣಿ ರಾಗಿಗುಡ್ಡಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದರು.

ಬೆಳಿಗ್ಗೆ ಕೆಲ ಹೊತ್ತು ಅಂಗಡಿ ತೆಗೆದು ದಿನಸಿ, ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಡಲಾಗಿತ್ತು. ಬಳಿಕ ಜನರು ಮನೆಗಳನ್ನು ಬಿಟ್ಟು ಹೊರಗೆ ಬರಲಿಲ್ಲ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ ಗಲಾಟೆ | ಪರಿಸ್ಥಿತಿ ನಿಯಂತ್ರಣದಲ್ಲಿದೆ: ಗೃಹ ಸಚಿವ ಪರಮೇಶ್ವರ್‌

ನಿಷೇಧಾಜ್ಞೆ ಶಿವಮೊಗ್ಗ ನಗರಕ್ಕೂ ವಿಸ್ತರಿಸಿದ್ದರಿಂದ ಮಾರುಕಟ್ಟೆ ಸ್ತಬ್ಧವಾಗಿತ್ತು. ಅಂಗಡಿಗಳು ಬಾಗಿಲು ಹಾಕಿದ್ದವು. ಗಾಂಧಿ ಜಯಂತಿ ಪ್ರಯುಕ್ತ ಮದ್ಯ–ಮಾಂಸ ಮಾರಾಟಕ್ಕೂ ನಿಷೇಧ ಇದ್ದ ಕಾರಣ ಬಹಳಷ್ಟು ಹೋಟೆಲ್‌, ಮದ್ಯದಂಗಡಿಗಳು ಬಾಗಿಲು ಹಾಕಿದ್ದವು. ಚೇಂಬರ್ ಆಫ್ ಕಾಮರ್ಸ್‌ನ ಮನವಿ ಮೇರೆಗೆ ಸಂಜೆ ಕೆಲವು ಕಡೆ ಅಂಗಡಿಗಳ ಬಾಗಿಲು ತೆರೆಯಲು ಪೊಲೀಸರು ಅವಕಾಶ ಮಾಡಿಕೊಟ್ಟಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X