ಶಿವಮೊಗ್ಗ | ಶರಾವತಿ ನದಿ ನೀರು ಬೆಂಗಳೂರಿಗೆ ಹರಿಸುವುದು ಅವೈಜ್ಞಾನಿಕ: ರೈತ ಸಂಘ

Date:

ಬೆಂಗಳೂರಿಗೆ ಶರಾವತಿ ನದಿ ನೀರನ್ನು ಹರಿಸುವ ಹಾಗೂ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ₹800 ಕೋಟಿ ವೆಚ್ಚದಲ್ಲಿ ಬಹುದೊಡ್ಡ ಕಾಮಕಾರಿ ಮಾಡಲು ಹೊರಟಿರುವುದು ಅವೈಜ್ಞಾನಿಕವಾಗಿದ್ದು, ಇದರಿಂದ ಮಲೆನಾಡಿನ ಜನರಿಗೆ ವಂಚನೆಯಾಗುತ್ತದೆ ಎಂದು ಸಾಗರ ತಾಲೂಕಿನ ರೈತ ಸಂಘ ಅಸಮಾಧಾನ ವ್ಯಕ್ತಪಡಿಸಿದೆ.

- Advertisement -

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಉಪವಿಭಾಗೀಯ ಅಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದ ರೈತರು ಆಗ್ರಹ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಶರಾವತಿ ನದಿ ನೀರನ್ನು 800 ಕಿಲೋಮೀಟರ್ ದೂರವಿರುವ ಬೆಂಗಳೂರಿಗೆ ಹರಿಸುವುದರಿಂದ ಇಲ್ಲಿರುವ ಪರಿಸರದ ಜೀವ ಜಂತುಗಳು ನಾಶವಾಗುತ್ತವೆ. ಕಾಮಗಾರಿ ಮಾಡುವ ಸಂದರ್ಭದಲ್ಲಿ ಭೂಮಿಯನ್ನು ಯಂತ್ರಗಳಿಂದ ಅಗೆಯುತ್ತಾರೆ. ಇದರಿಂದ ಕೇರಳದಲ್ಲಿ ಉಂಟಾದ ಅನಾಹುತದಂತೆ ಇಲ್ಲಿಯೂ ಗುಡ್ಡ ಕೊರೆತ ಉಂಟಾಗುವ ಸಾಧ್ಯತೆ ಇದೆ. ಈ ಹಿಂದೆ 1961ರಿಂದ 64ರವರೆಗೂ ಹೋರಾಟ ನಡೆಸಿದಂತಹ ರೈತರಿಗೆ, ನಿರಾಶ್ರಿತರಿಗೆ ಭೂಮಿ ಕೊಡುವಲ್ಲಿ ಸರ್ಕಾರ ವಂಚನೆ ಮಾಡಿದೆ” ಎಂದು ರೈತರು ಆರೋಪಿಸಿದರು.

“ಆ ಯೋಜನೆಯ ಫಲಾನುಭವಿಗಳು ಇನ್ನೂ ನೆರಳುತ್ತಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಪುನಃ ಈ ಯೋಜನೆ ಮಾಡುವುದರಿಂದ ಮಲೆನಾಡು ಪ್ರದೇಶದಲ್ಲಿ ಭೂಕುಸಿತಗಳಾಗುವ ಸಾಧ್ಯತೆ ಇದೆ. ಆದ್ದರಿಂದ ಸರ್ಕಾರ ನೀರು ಹರಿಸುವ ಯೋಜನೆಯನ್ನು ಹಿಂಪಡೆದು ಮಲೆನಾಡಿನ ಜನಕ್ಕೆ ನ್ಯಾಯ ಒದಗಿಸಬೇಕು. ನಮ್ಮ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಈ ಯೋಜನೆಯನ್ನು ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ತೀವ್ರ ಹೋರಾಟ ನಡೆಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಕೌಟುಂಬಿ ಕಲಹಕ್ಕೆ ಮಹಿಳೆಗೆ ವಿಷ ಕುಡಿಸಿ ಕೊಲೆಗೆ ಯತ್ನ; ನಾಲ್ವರ ಬಂಧನ

ಈ ಸಂದರ್ಭದಲ್ಲಿ ಮಾಜಿ ಮಂತ್ರಿ, ಶಾಸಕ ಎಚ್ ಹಾಲಪ್ಪ, ಮಾಜಿ ಎಂಎಲ್‌ಸಿ ಪ್ರಪುಲ್ಲಾ ಮಧುಕರ್ ಹಾಗೂ ಅಖಿಲೇಶ್, ತಾಲೂಕು ಪಂಚಾಯತ್ ಮಾಜಿ ಸದಸ್ಯ ದೇವೇಂದ್ರಪ್ಪ, ನಗರಸಭಾ ಸದಸ್ಯ ಗಣೇಶ್ ಪ್ರಸಾದ್, ರೈತ ಸಂಘದ ಅಧ್ಯಕ್ಷ ದಿನೇಶ್ ಸಿರಿವಾಳ ಸೇರಿದಂತೆ ಹಲವಾರು ಪ್ರಗತಿಪರ ಚಿಂತಕರು‌, ರೈತ ಮುಖಂಡರು, ಮಹಿಳೆಯರು, ಪತ್ರಕರ್ತರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...