ಶಿವಮೊಗ್ಗ ಜಿಲ್ಲೆಯ ಸಾಗರ ನಗರಸಭೆ ಕಂದಾಯ ಅಧಿಕಾರಿ ಸಂತೋಷ್ ಕುಮಾರ್ ಅವರು ಶನಿವಾರ ಕೊನೆಯುಸಿರೆಳೆದಿದ್ದಾರೆ.
ಮೃತ ಅಧಿಕಾರಿ ಸಂತೋಷ್ ಕುಮಾರ್(52) ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಕಳೆದ ಭಾನುವಾರ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಸಲಹೆ ಮೇರೆಗೆ ತೀರ್ಥಹಳ್ಳಿಯ ಅವರ ಸ್ವಗ್ರಾಮಕ್ಕೆ ಕರೆ ತರುವ ಮಾರ್ಗ ಮಧ್ಯ ಕೊನೆಯುಸಿರೆಳೆದಿದ್ದಾರೆ.
ಸಾಗರ ನಗರಸಭೆ ಕಂದಾಯ ಅಧಿಕಾರಿ ಮೃತ ಸಂತೋಷ್ ಕುಮಾರ್ ಅವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಸಂಶೋಧನೆ, ವಿಮರ್ಶೆ, ಓದು ಪೂರ್ವಗ್ರಹ ಹಾಗೂ ಪಕ್ಷಪಾತ ರಹಿತವಾಗಿರಲಿ; ಚಿಂತಕ ಬರಗೂರು ರಾಮಚಂದ್ರಪ್ಪ
ಸಂತಾಪ : ಕಂದಾಯ ಅಧಿಕಾರಿ ಸಂತೋಷ್ ಕುಮಾರ್ ನಿಧನಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು, ಮಾಜಿ ಶಾಸಕ ಹಾಲಪ್ಪ ಹರತಾಳು, ಸಾಗರ ಉಪವಿಭಾಗಾಧಿಕಾರಿ ಯತೀಶ್, ನಗರಸಭೆ ಪೌರಾಯುಕ್ತ ನಾಗಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪರಮೇಶ್ವರಪ್ಪ, ನಗರಸಭೆ ಸದಸ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಂತಾಪ ಸೂಚಿಸಿದ್ದಾರೆ.