ಶಿವಮೊಗ್ಗ | ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಅಪಘಾತ; ತಪ್ಪಿದ ಭಾರಿ ಅನಾಹುತ

Date:

ಶಾಲಾ ಮಕ್ಕಳು ಸೇರಿದಂತೆ 30 ಮಂದಿಯಿದ್ದ ಸ್ಕೂಲ್​ ಬಸ್ಸೊಂದು ಶಿವಮೊಗ್ಗದ ಆಗುಂಬೆ ಘಾಟ್ ತಿರುವಿಗೆ ಢಿಕ್ಕಿ ಹೊಡೆದಿದೆ. ಅರ್ಧ ಮುಂದಕ್ಕೆ ಹೋಗಿ ಅಲ್ಲಿಯೇ ನಿಂತಿದ್ದರಿಂದ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ. ಅದೃಷ್ಟವಶಾತ್‌ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನಿಂದ ಪ್ರವಾಸಕ್ಕೆ ತೆರಳಿದ್ದ ಶಾಲಾ ವಾಹನವೊಂದು ಶೃಂಗೇರಿಯಿಂದ ಕೊಲ್ಲೂರಿಗೆ ಹೋಗುತ್ತಿತ್ತು. ಈ ಮಾರ್ಗದಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ ಸೂರ್ಯಾಸ್ತಮಾನ ಜಾಗಕ್ಕೂ ಮೊದಲು ಸಿಗುವ ತಿರುವಿನಲ್ಲಿ ಘಟನೆ ಸಂಭವಿಸಿದೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಹೇಮಾವತಿ ನಾಲೆ ಕಳಪೆ ಕಾಮಗಾರಿ ಆರೋಪ; ರೈತರ ಪ್ರತಿಭಟನೆ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸ್ಕೂಲ್ ಬಸ್​ ಆಗುಂಬೆ ಗೇಟ್ ದಾಟಿಕೊಂಡು ಮುಂದಕ್ಕೆ ಸಾಗಿದೆ. ಅಲ್ಲಿಂದ ತಿರುವಿನಲ್ಲಿ ವೇಗವಾಗಿದ್ದರಿಂದ ಬಸ್​ ಕಂಟ್ರೋಲ್​ಗೆ ಸಿಗದೇ ತಿರುವಿನಂಚಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯಾದ ರಭಸಕ್ಕೆ ಬಸ್​ನ ಅರ್ಧ ಭಾಗ ಮುಂದಕ್ಕೆ ಹೋಗಿ ನಿಂತಿದೆ. ಒಂದು ವೇಳೆ ಬಸ್ ಸ್ವಲ್ಪ ಕೆಳಗೆ ಜಾರಿದ್ದರೂ ದೊಡ್ಡ ದುರಂತವೇ ಸಂಭವಿಸುತ್ತಿತ್ತು. ಅದೃಷ್ಟವಶಾತ್‌ ಸ್ವಲ್ಪದರಲ್ಲೇ ದೊಡ್ಡ ಅನಾಹುತವೊಂದು ತಪ್ಪಿದೆ.

ಘಟನೆ ಬಳಿಕ ಸ್ಥಳದಲ್ಲಿದ್ದವರು ಬಸ್​ನಲ್ಲಿರುವವರನ್ನು ಸುರಕ್ಷಿತವಾಗಿ ಕೆಳಕ್ಕೆ ಇಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಗ್ರಾ.ಪಂ. ನಲ್ಲಿ ಅವ್ಯವಹಾರ; ತನಿಖೆಗೆ ಆಗ್ರಹ

ಬೀದರ್‌ ತಾಲೂಕಿ ಮಾಳೆಗಾಂವ ಗ್ರಾಮ ಪಂಚಾಯತ್‌ನಲ್ಲಿ ವಿವಿಧ ಯೋಜನೆಯಡಿ ನಡೆಸಿರುವ ಅವ್ಯವಹಾರದ...

ನೀಟ್ ಅಕ್ರಮ | ಹಣಕ್ಕಾಗಿ ಬದ್ಧತೆ ಮರೆತವಾ ಮಾಧ್ಯಮಗಳು?

ಸದ್ಯ ದೇಶಾದ್ಯಂತ ನೀಟ್-ಯುಜಿ ವೈದ್ಯಕೀಯ ಪ್ರವೇಶ ಪರೀಕ್ಷೆ ದೊಡ್ಡ ಚರ್ಚೆಯಾಗಿದೆ. ವೈದ್ಯಕೀಯ...

ತುಮಕೂರಿನ ವಸಂತನರಸಾಪುರದ ಬಳಿ ಇಂಟಿಗ್ರೇಟೆಡ್ ಟೌನ್‌ಶಿಪ್‌ ನಿರ್ಮಾಣ; ಯೋಜನೆ ಕೈಗೊಳ್ಳುವಂತೆ ಸಚಿವ ಬೈರತಿ ಸುರೇಶ್ ಸೂಚನೆ

ತುಮಕೂರು ಜಿಲ್ಲೆಯ ವಸಂತನರಸಾಪುರದ ಕೈಗಾರಿಕಾ ಪ್ರದೇಶಕ್ಕೆ ಹೊಂದಿಕೊಂಡಂತೆ ನಗರಾಭಿವೃದ್ಧಿ ಇಲಾಖೆಯಿಂದ Integrated...

ಬಾಗಲಕೋಟೆ | ಮನರೇಗಾ ಅಡಿ ಕೆಲಸ ನೀಡುವಂತೆ ಆಗ್ರಹ; ಗ್ರಾ.ಪಂ. ಎದುರು ಗ್ರಾಕೂಸ ಪ್ರತಿಭಟನೆ 

ಗ್ರಾಮೀಣ ಪ್ರದೇಶದಲ್ಲಿ ಮನರೇಗಾ(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಡಿ...