ಕ್ಷುಲಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಯುವಕನೊಬ್ಬನನ್ನು ಹತ್ಯೆಗೈದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಲ್ಲಿ ನಡೆದಿದೆ.
ಶಿಕಾರಿಪುರದ ಕೆಹೆಚ್‌ಪಿ ಕಾಲೋನಿಯಲ್ಲಿ ಘಟನೆ ನಡೆದಿದೆ. ಜಾಫರ್ (32) ಹತ್ಯೆಗೀಡಾದ ಯುವಕ ಎಂದು ವರದಿಯಾಗಿದೆ.
ಗಲಾಟೆಯಲ್ಲಿ ಎದುರಾಳಿ ಗುಂಪಿನವರು ಜಾಫರ್ ಎದೆಗೆ ಚಾಕುವಿನಿಂದ ಇರಿದಿದ್ದು, ಪರಿಣಾಮ ತೀವ್ರ ರಕ್ತಸ್ರಾವವಾಗಿದ್ದು, ಜಾಫರ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ಶಿಕಾರಿಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.