ಶಿವಮೊಗ್ಗ | ಭಾಷಣಕ್ಕಿಂತ ಸೇವಾ ಮನೋಭಾವ ದೊಡ್ಡದು: ಗೀತ ಶಿವರಾಜಕುಮಾರ್

Date:

ರಾಜಕೀಯ ಭಾಷಣ ಮಾಡುವುದಕ್ಕಿಂತ ಜನ ಸಾಮಾನ್ಯರಿಗೆ ಹತ್ತಿರವಿದ್ದು, ಸೇವೆ ಸಲ್ಲಿಸುವುದು ಮುಖ್ಯ ಎಂದು ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.

- Advertisement -

ಶಿವಮೊಗ್ಗದ ವಿನೋಬನಗರದ ಶ್ರೀರಾಮ ನಗರ (ಬೆಂಕಿನಗರ) ನಿವಾಸಿಗಳಿಂದ ಮಂಗಳವಾರ ಆಯೋಜಿಸಿದ್ದ ‘ನವ ಸಂವತ್ಸರʼ ಸಂಭ್ರಮದಲ್ಲಿ ಗೀತಕ್ಕ, ಶಿವಣ್ಣ ನಮ್ಮೊಂದಿಗೆ’ ಶೀರ್ಷಿಕೆಯಡಿಯ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು, ಅಶಕ್ತರಿಗೆ ಶಕ್ತಿಯಾಗಿ ನಿಂತಿದ್ದರು. ಅದೇ ರೀತಿ ಆಶ್ರಯ ಬಡಾವಣೆ ನಿವಾಸಿಗಳಿಗೆ ಮನೆ ನಿರ್ಮಾಣ ಮಾಡಿ ಕೊಟ್ಟಿದ್ದರು‌. ಇದರಿಂದ, ಅನೇಕರು ಬದುಕು ರೂಪಿಸಿಕೊಂಡಿದ್ದಾರೆ. ಅದೇ ದಾರಿಯಲ್ಲಿ ನಾನೂ ಕೂಡ ಸಾಗುತ್ತೇನೆ ಎಂದು ಭರವಸೆ ನೀಡಿದರು.

ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಹಣದ ಅವಶ್ಯಕತೆ ಇಲ್ಲ. ಜನ ಸಾಮಾನ್ಯರಿಗೆ ಸೇವೆ ಸಲ್ಲಿಸಲು ಈ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಆದ್ದರಿಂದ, ಗೀತಾ ಅವರಿಗೆ ಮತ ನೀಡಿ ಹರಸಬೇಕು ಎಂದರು.

ನಟ ಶಿವರಾಜಕುಮಾರ್ ಮಾತನಾಡಿ, ಜೀವನದಲ್ಲಿ ಬೇವು- ಬೆಲ್ಲ ಇದ್ದರೆ ಮಾತ್ರ, ಬದುಕು ಹಸನಾಗಿರುತ್ತದೆ. ನೂತನ ಯೋಜನೆಗಳ ಆರಂಭಿಸಲು ಸಿದ್ಧತೆ ನಡೆಸುತ್ತಿದ್ದರೆ ಸಿಹಿ ಹಂಚುವ ಹಾಗೂ ಸ್ವೀಕರಿಸುವ ಮೂಲಕ ಚಾಲ‌ನೆ ನೀಡಬೇಕು. ಅದೇ ರೀತಿ, ಜಿಲ್ಲೆಯ ಶಕ್ತಿಯಾಗಿ ಪತ್ನಿ ಗೀತಾ ಶಿವರಾಜಕುಮಾರ್ ಇರಲಿದ್ದಾರೆ. ಆದ್ದರಿಂದ, ಚುನಾವಣೆಯಲ್ಲಿ ಮತ ನೀಡಿ ಆಶೀರ್ವದಿಸಿ ಎಂದು ಕೋರಿದರು‌.

ಕಾಂಗ್ರೆಸ್ ಮುಖಂಡ ಎಚ್.ಸಿ.ಯೋಗೀಶ್ ಮಾತನಾಡಿ, ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಆಡಳಿತಾವಧಿಯಲ್ಲಿ ಜಿಲ್ಲೆಗೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ‌. ಗೀತಕ್ಕ ಕೂಡ ಸಮಾಜ ಸೇವೆ ಸಲ್ಲಿಸುವುದರಲ್ಲಿ ತಂದೆಯ ಹಾದಿಯಲ್ಲಿ ಸಾಗುತ್ತಿದ್ದಾರೆ‌. ಅವರಿಗೆ ಮತ ನೀಡಿ ಆಶೀರ್ವದಿಸೋಣ ಎಂದರು.

ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ನೆರವಿನಿಂದ ಬದುಕ ನಡೆಸುತ್ತಿದ್ದೇನೆ. ಹಿಂದೆ ಮನೆ ನಿರ್ಮಾಣಕ್ಕೆ ಬಂಗಾರಪ್ಪ ನೆರವಾಗಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಗೀತಾಕ್ಕ ಸೋತಿದ್ದರು. ಈ ಬಾರಿಯ ಚುನಾವಣೆಯಲ್ಲಿ ಗೀತಕ್ಕ  ಗೆದ್ದು ಬರಲಿ ಎಂದು ನಗರದ ಆಶ್ರಯ ಬಡಾವಣೆ ನಿವಾಸಿ ಕಲಾವತಿ ಹರಸಿದರು.

ಇದೇ ವೇಳೆ, ಕಲಾವತಿ ಅವರು, ಗೀತಾ ಶಿವರಾಜಕುಮಾರ್ ಅವರಿಗೆ ಬೆಳ್ಳಿ ಕಡ್ಗವನ್ನು ಉಡುಗೊರೆಯಾಗಿ ನೀಡಿದರು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಬೆಂಕಿನಗರದ ನಿವಾಸಿಗಳಿಂದ ಅರಿಶಿಣ-ಕುಂಕುಮ ನೀಡಿ ಉಡಿ ತುಂಬಿ ಹರಸಿದರು. ಅದೇ ರೀತಿ, ಬಡಾವಣೆಯ ಪುಟ್ಟ ಮಕ್ಕಳು ಚುನಾವಣಾ ಠೇವಣಿ ಹಣ ಹಾಗೂ ಪುನೀತ್ ರಾಜಕುಮಾರ್ ಅವರ್ ಭಾವ ಚಿತ್ರ ನೀಡಿದರು.

ಸೂಡ ಅಧ್ಯಕ್ಷ ಎಚ್.ಎಸ್.ಸುಂದರೇಶ್, ವಿಧಾನ ಪರಿಷತ್ ಮಾಜಿ ಅಧ್ಯಕ್ಷ ಆಯನೂರು ಮಂಜುನಾಥ, ಎಂ.ಶ್ರೀಕಾಂತ್, ಜಿ.ಡಿ.ಮಂಜುನಾಥ, ಪಾಲಾಕ್ಷಪ್ಪ, ಎಸ್.ಕೆ. ಮರಿಯಪ್ಪ, ವಿಶ್ವನಾಥ ಕಾಶಿ, ಕೆ.ರಂಗನಾಥ, ಗಿರೀಶ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...