ಶಿವಮೊಗ್ಗ | ಶಂಭುಲಿಂಗ.ಕೆ ನೇತೃತ್ವದಲ್ಲಿ ಪತ್ರಿಕಾ ವಿತರಕರ ಒಕ್ಕೂಟದ ಸಭೆ

Date:

ಶಿವಮೊಗ್ಗ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟದ ಕಚೇರಿಯಲ್ಲಿ, ಶಿವಮೊಗ್ಗ ಹಾಸನ ಚಿಕ್ಕಮಗಳೂರು ಹಾಗೂ ತಾಲೂಕು ಪತ್ರಿಕಾ ವಿತರಕರ ಪದಾಧಿಕಾರಿಗಳಿಂದ ರಾಜ್ಯಾಧ್ಯಕ್ಷರಾದ ಶಂಭುಲಿಂಗ. ಕೆ ರವರ ನೇತೃತ್ವದಲ್ಲಿ ಸಭೆ ನಡೆಸಲಾಯಿತು.

- Advertisement -

ಈ ವಿಶೇಷ ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಕೆ. ಶಂಭುಲಿಂಗರವರ ನೇತೃತ್ವದಲ್ಲಿ ಪತ್ರಿಕಾ ವಿತರಕರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ, ಹೋರಾಟದ ರೂಪುರೇಷೆಗಳ ಬಗ್ಗೆ, ಸಭೆಯಲ್ಲಿ ಮಾತನಾಡಿದ ಶಂಭುಲಿಂಗರವರು ಜಿಲ್ಲೆಯ ಎಲ್ಲಾ ಪತ್ರಿಕಾ ವಿತರಕರು ಕಡ್ಡಾಯವಾಗಿ ಈ ಶ್ರಮ ಕಾರ್ಡನ್ನು ಮಾಡಿಸಿಕೊಳ್ಳುವಂತೆ ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿಗೆ, ಸರ್ಕಾರದಿಂದ ಪಡೆಯಬೇಕಾಗಿರುವ ಸೌಲಭ್ಯಗಳ ಬಗ್ಗೆ, ಸಭೆಯಲ್ಲಿ ಮಾಹಿತಿ ನೀಡಿ ಸಂಘಟನೆಯನ್ನು ಬಲಪಡಿಸುವ ಬಗ್ಗೆ ಚರ್ಚೆ ಮಾಡಿದರು.

ಈ ವೇಳೆ ಶಿವಮೊಗ್ಗ ಜಿಲ್ಲಾ ಅಧ್ಯಕ್ಷ ಎನ್, ಮಾಲತೇಶ್ ರವರು ಮಾತನಾಡಿ ಪತ್ರಿಕಾ ವಿತರಕರಿಗೆ ಸಿಗಬೇಕಾದ ಸೌಲಭ್ಯಗಳು ಸೇರಿದಂತೆ ಅಗತ್ಯ ಬೇಡಿಕೆಗಳ ಬಗ್ಗೆ ರಾಜ್ಯಮಟ್ಟದಲ್ಲಿ ಅಧ್ಯಕ್ಷರ ನೇತೃತ್ವದಲ್ಲಿ ನಡೆಯುವ ಸಭೆಅಧ್ಯಕ್ಷರ ನೇತೃತ್ವದಲ್ಲಿ ನಡೆಯುವ ಸಭೆ ಸಮಾರಂಭಗಳಲ್ಲಿ ಜಿಲ್ಲೆಯ ಏಳು ತಾಲೂಕುಗಳಿಂದಲೂ ಕೂಡ ಪತ್ರಿಕಾ ವಿತರಕರನ್ನು ಸಂಘಟಿಸಿ ರಾಜ್ಯಾಧ್ಯಕ್ಷರ ಕೈ ಬಲಪಡಿಸಲು ಸಿದ್ದರಿದ್ದೇವೆ ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಕ್ತರ್ ಆಹ್ಮದ್ (ನಾಜೀರ್ ರವರು ಸಭೆಗೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಪತ್ರಿಕಾ ವಿತರಕರ ಮುಖಂಡರನ್ನು ಸ್ವಾಗತಿಸಿದರು. ಶಿವಮೊಗ್ಗ ಜಿಲ್ಲಾ ಗೌರವಾಧ್ಯಕ್ಷ ಹುಲಗಿ ಕೃಷ್ಣರವರು ವಂದನಾರ್ಪಣೆ ನೆರವೇರಿಸಿದರು. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಪತ್ರಿಕಾ ವಿತರಕರು, ಚಿಕ್ಕಮಂಗಳೂರು ಜಿಲ್ಲೆಯ ಪತ್ರಿಕಾ ವಿತರಕರು, ಮತ್ತು ಹಾಸನ ಜಿಲ್ಲೆಯ ಪತ್ರಿಕಾ ವಿತರಕ ಮುಖಂಡರು ಕೂಡ ಭಾಗವಹಿಸಿದ್ದರು.

ಸಭೆಯಲ್ಲಿ ಶಿವಮೊಗ್ಗ ಜಿಲ್ಲೆಯ ಉಪಾಧ್ಯಕ್ಷರಾದ ರಾಮು,ಜಿ, ನಾಗಭೂಷಣ್ ಭದ್ರಾವತಿ ಪರಶುರಾಮ್ ,ರಾವ್ ತಾಲೂಕು ಅಧ್ಯಕ್ಷರಾದ ಮಲ್ಲಿಕಾರ್ಜುನ್, ಮಧು, ಸೋಮಶೇಖರ್, ರಾಜಾವರ್ಮಾ ಜೈನ್, ದುರ್ಘೋಜಿ, ಪಾರ್ಥ ಬನ್, ಪ್ರಶಾಂತ್, ಶಿಕಾರಿಪುರದ ತಾಲೂಕು ಅಧ್ಯಕ್ಷ ಗಜೇಂದ್ರ, ಎಚ್ಎಫ್ ಯಾವಗಲ್ ಹನುಮಂತಪ್ಪ ಅಜಿದ್ ಉಲ್ಲಾ ಸೇರಿದಂತೆ ಹಲವು ಪತ್ರಿಕಾ ವಿತರಕರು ಸಭೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...