ಶಿವಮೊಗ್ಗ | ಬೆಂಗಳೂರಿಗಿಲ್ಲ ಶರಾವತಿ ನೀರು: ಶಾಸಕ ಬೇಳೂರು ಗೋಪಾಲಕೃಷ್ಣ

Date:

ಬೆಂಗಳೂರಿಗೆ ಶರಾವತಿ ನದಿಯಿಂದ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆ ಕಾಂಗ್ರೆಸ್‌ ಸರ್ಕಾರದ ಮನಸ್ಸಿನಲ್ಲಿತ್ತು. ಅದಕ್ಕಾಗಿ ಒಂದಷ್ಟು ಪ್ರಕ್ರಿಯೆಗಳು ನಡೆದಿದ್ದವು ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣರವರು ಶಿವಮೊಗ್ಗದಲ್ಲಿ ಮಾತನಾಡಿರು.

- Advertisement -

“ಶರಾವತಿ ನೀರು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಯೋಜನೆ ಬಹಳ ಸುದ್ದಿಯಾಗಿದೆ. ಶರಾವತಿ ನದಿಯಿಂದ ಬೆಂಗಳೂರಿಗೆ ನೀರು ತೆಗೆದುಕೊಂಡು ಹೋಗುವ ಯೋಜನೆ ಉದ್ದೇಶ ಸರ್ಕಾರದ ಮುಂದೆ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಪ್ರಸ್ತಾವನೆ ಮಾಡಿದ್ದು, ಬಸವರಾಜ ಬೊಮ್ಮಾಯಿ ಅವರ ಸರ್ಕಾರ. ನಮ್ಮ ಸರ್ಕಾರ ಬಂದ ಮೇಲೆ ಯೋಜನೆಗೆ ₹20 ಸಾವಿರ ಕೋಟಿ ಅಂದಾಜು ವೆಚ್ಚ ಮಾಡಲಾಗಿದೆ. ಪ್ರಸ್ತಾವನೆ ಬಿಟ್ಟು ಬೇರೆ ಏನೂ ನಮ್ಮ ಸರ್ಕಾರದಲ್ಲಿ ಆಗಿಲ್ಲ. ಸಿಎಂ, ಡಿಸಿಎಂ ಈ ಬಗ್ಗೆ ನನಗೆ ಅಭಿಪ್ರಾಯ ಕೇಳಿದ್ದಾರೆ. ಶರಾವತಿ ನದಿಯಿಂದ ಬೆಂಗಳೂರಿಗೆ ನೀರು ತೆಗೆದುಕೊಂಡು ಹೋಗುವ ಯೋಜನೆಯ ಪ್ರಸ್ತಾವನೆ ಇಲ್ಲ” ಎಂದು ಬೇಳೂರು ಸ್ಪಷ್ಟಪಡಿಸಿದ್ದಾರೆ.

“ಕುಮಾರಸ್ವಾಮಿಯವರು ಬಿಜೆಪಿಯಲ್ಲಿ ನನಗೆ ಶತ್ರು ಇದ್ದಾರೆ ಅಂದಿದ್ದಾರೆ. ಬಿಜೆಪಿ ಜೆಡಿಎಸ್‌ನಲ್ಲಿ ಈಗ ಗೊಂದಲ ಶುರುವಾಗಿದೆ. ಯತ್ನಾಳ್ ಮತ್ತು ಈಶ್ವರಪ್ಪ ತಂಡ ಕಟ್ಟಿಕೊಂಡು ವಿಜಯೇಂದ್ರ ಇಳಿಸಲು ಹೊರಟಿದೆ. ಇದನ್ನು ಮುಚ್ಚಿಕೊಳ್ಳೋಕೆ ಈ ಮುಡಾ ಪ್ರಕರಣ ಮುನ್ನಲೆಗೆ ತಂದಿದ್ದಾರೆಂದು ಬೇಳೂರು ಆರೋಪಿಸಿದ್ದಾರೆ. ಛಲವಾದಿ ನಾರಾಯಸ್ವಾಮಿ ಬಂದು ಸಿದ್ದರಾಮಯ್ಯ ಕಳ್ಳ ಎಂದಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಕೆಳಗಿಸಲು ಇವರು ಪ್ಲಾನ್ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಸಿಎಂ ರಾಜೀನಾಮೆ ನೀಡಲ್ಲ. ಅವರ ಜೊತೆ ನಾವಿದ್ದೇವೆ” ಎಂದಿದ್ದಾರೆ.

“ಯಡಿಯೂರಪ್ಪನವರನ್ನು ಜೈಲಿಗೆ ಕಳಿಸಿದ್ದು ಯಾರು? ಹಾಗಾದರೆ ಯಡಿಯೂರಪ್ಪ ಕಳ್ಳರಾ ಅದನ್ನು ಹೇಳಬೇಕು ಅಲ್ವೆ. ಶರಾವತಿ ಸಂತ್ರಸ್ತ್ರರ ಪರವಾಗಿ ಸಂಸದ ರಾಘವೇಂದ್ರ ಕೇಂದ್ರದಲ್ಲಿ ಒಂದು ಮಾತಾಡಿಲ್ಲ. ರೈತರ ಧ್ವನಿಯಾಗಿ ರಾಘವೇಂದ್ರ ಕೆಲಸ ಮಾಡಿಲ್ಲ. ರೈತರಪರ ಧ್ವನಿ ಎತ್ತದೆ ಹೋದರೆ ಇವರು ಯಾಕೆ ಬೇಕು. ರಾಘವೇಂದ್ರ ತಮ್ಮ ಕಾಲೇಜು ಜಾಗ ಉಳಿಸಲು ಹೋರಾಟ ಮಾಡುತ್ತಿದ್ದಾರೆ ಅಷ್ಟೆ. ಮಲೆನಾಡಿನ ಪಾಪಿಗಳು ಅಂದರೆ ರಾಘವೇಂದ್ರ, ಹಾಲಪ್ಪ, ಆರಗ ಜ್ಞಾನೇಂದ್ರ, ಬೊಮ್ಮಾಯಿ ಅವರು. ನಮ್ಮ ಸರ್ಕಾರ ಶರಾವತಿ ಸಂತ್ರಸ್ತ್ರರ ಪರವಾಗಿದೆ” ಎಂದು ಬೇಳೂರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಯುದ್ಧ ಬೇಡ, ಬುದ್ಧ ಬೇಕು; ನೇರಳೆ ಗ್ರಾಮದಲ್ಲಿ ‘ಧಮ್ಮ ಪಯಣ’

“ಬೈ ಎಲೆಕ್ಷನ್ ಬಂದಿದೆ. ಬಿಜೆಪಿಯಲ್ಲಿ ಅವರ ಮಕ್ಕಳನ್ನೇ ನಿಲ್ಲಿಸುತ್ತಾರೆ ಅನಿಸುತ್ತೆ. ಪ್ರಧಾನಿಗಳು ಹೇಳಿದ್ದಾರೆ. ಮಕ್ಕಳನ್ನು ನಿಲ್ಲಿಸಬಾರದು. ಆದರೆ ಇವರು ಅವರನ್ನೇ ನಿಲ್ಲಿಸುತ್ತಾರೆ. ಉಪ ಚುನಾವಣೆ ನಡೆಯುತ್ತಿರುವ ಮೂರು ಕ್ಷೇತ್ರಗಳಲ್ಲಿಯೂ ನಾವು ಗೆಲ್ಲುತ್ತೇವೆ. ಮೂರು ಸ್ಥಾನ ಗೆದ್ದು ಕಾಂಗ್ರೆಸ್‌ ಸರ್ಕಾರ ಗಟ್ಟಿಯಾಗಿದೆ ಅಂತ ತೋರಿಸುತ್ತೇವೆ” ಎಂದು ಬೇಳೂರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...