ಕಾಲೇಜು ವಿದ್ಯಾರ್ಥಿಯೊಬ್ಬರ ನಗ್ನಚಿತ್ರವನ್ನು ವಿಡಿಯೋ ಮಾಡಿ ಬ್ಲಾಕ್ಮೇಲ್ ಮಾಡುತ್ತಿದ್ದ ಬಿಜೆಪಿ ಬೆಂಬಲಿತ ವಿದ್ಯಾರ್ಥಿ ಸಂಘಟನೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ತಾಲೂಕು ಅಧ್ಯಕ್ಷನನ್ನು ಬಂಧಿಸಬೇಕೆಂದು ಎನ್ಎಸ್ಯುಐ ಒತ್ತಾಯಿಸಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಎಬಿವಿಪಿ ತಾಲೂಕು ಅಧ್ಯಕ್ಷ ಪ್ರತಿಗೌಡ ಎಂಬಾತ ಯುವತಿಯ ಅಶ್ಲೀಲ ಚಿತ್ರವನ್ನು ವಿಡಿಯೋ ಮಾಡಿ ವಿಕೃತಿ ಮೆರೆದಿರುವ ಆರೋಪಿ. ಈತ, ಎಬಿವಿಪಿಯಲ್ಲಿ ಸದಸ್ಯತ್ವ ಕೊಡಿಸುವುದಾಗಿ ನಂಬಿಸಿ, ಯುವತಿಯನ್ನು ತನ್ನ ಕಾಮವಾಂಛೆ ತೀರಿಸಿಕೊಳ್ಳಲು ಬಳಸಿಕೊಳ್ಳುತ್ತಿದ್ದ. ಅಲ್ಲದೆ, ಆ ಕೃತ್ಯವನ್ನು ತನ್ನ ಮೊಬೈಲ್ನಲ್ಲಿ ಚಿತ್ರೀಕರಿಸಿಕೊಳ್ಳುತ್ತಿದ್ದ ಎಂದು ಆರೋಪಿಸಲಾಗಿದೆ.
ಯುವತಿಯೊಬ್ಬಳೊಂದಿಗೆ ವಿಡಿಯೋ ಕಾಲ್ನಲ್ಲಿ ಮಾತನಾಡಿದ್ದ ಕಾಮುಕ ಆರೋಪಿ, ಆಕೆಯನ್ನು ನಗ್ನಳಾಗುವಂತೆ ಒತ್ತಾಯಿಸಿದ್ದಾನೆ. ಬಳಿಕ, ಆಕೆಯ ನಗ್ನ ದೃಶ್ಯಗಳನ್ನು ವಿಡಿಯೋ ಮಾಡಿಕೊಂಡಿದ್ದಾನೆ. ಆ ವಿಡಿಯೋ ಇಟ್ಟುಕೊಂಡು ಆಕೆಯನ್ನು ಬ್ಲಾಕ್ಮೇಲ್ ಮಾಡಲು ಆರಂಭಿಸಿದ್ದಾನೆ. ಅಲ್ಲದೆ, ಜೂನ್ 16ರಂದು ಆ ವಿಡಿಯೋವನ್ನು ವಾಟ್ಸಾಪ್ನಲ್ಲಿ ಹರಿಬಿಟ್ಟಿದ್ಧಾನೆ ಎಂದು ತಿಳಿದುಬಂದಿದೆ.
ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ, ಆರೋಪಿ ಪ್ರತಿಗೌಡನನ್ನು ಬಂಧಿಸುವಂತೆ ಎನ್ಎಸ್ಯುಐ ಸಂಘಟನೆ ಒತ್ತಾಯಿಸಿದ್ದು, ಡಿವೈಎಸ್ಪಿ ಕಚೇರಿಗೆ ಮನವಿ ಸಲ್ಲಿಸಿದೆ.
“ಎಬಿವಿಪಿ ತಾಲೂಕು ಅಧ್ಯಕ್ಷ ಎಸಗಿರುವ ಕೃತ್ಯವು ಸಮಾಜ ತಲೆತಗ್ಗಿಸುವ ಪ್ರಕರಣವಾಗಿದೆ. ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕು. ಆರೋಪಿಯನ್ನು ಬಂಧಿಸಬೇಕು. ಪ್ರಭಾವಿಗಳ ಒತ್ತಡಕ್ಕೆ ಪೊಲೀಸರು ಮಣಿಯಬಾರದು” ಎಂದು ಮನವಿ ಮಾಡಿದೆ.
ಇಂತಹವರನ್ನು ಆದಷ್ಟು ಬೇಗ ಬಂದಿರಿ ಸರಿಯಾದ ಶಿಕ್ಷೆಗೆ ಗುರಿ ಪಡಿಸಬೇಕೆಂಬುದೇ ನನ್ನ ಆಶಯ , ಇಂತವರು ಯಾವ ಸಂಘಟನೆಯವರೇ ಆಗಿರಲಿ ಯಾವ ಪಾರ್ಟಿಯವರೇ ಆಗಿರಲಿ.. ಯಾವ ಜಾತಿಯವರೇ ಆಗಿರಲಿ..