ಶಿವಮೊಗ್ಗ | ವಿದ್ಯಾರ್ಥಿನಿಯ ನಗ್ನಚಿತ್ರ ಚಿತ್ರಿಸಿ ಬ್ಲಾಕ್‌ಮೇಲ್; ಎಬಿವಿಪಿ ಅಧ್ಯಕ್ಷನ ಬಂಧನಕ್ಕೆ ಆಗ್ರಹ

Date:

ಕಾಲೇಜು ವಿದ್ಯಾರ್ಥಿಯೊಬ್ಬರ ನಗ್ನಚಿತ್ರವನ್ನು ವಿಡಿಯೋ ಮಾಡಿ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಬಿಜೆಪಿ ಬೆಂಬಲಿತ ವಿದ್ಯಾರ್ಥಿ ಸಂಘಟನೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ತಾಲೂಕು ಅಧ್ಯಕ್ಷನನ್ನು ಬಂಧಿಸಬೇಕೆಂದು ಎನ್‌ಎಸ್‌ಯುಐ ಒತ್ತಾಯಿಸಿದೆ.

- Advertisement -

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಎಬಿವಿಪಿ ತಾಲೂಕು ಅಧ್ಯಕ್ಷ ಪ್ರತಿಗೌಡ ಎಂಬಾತ ಯುವತಿಯ ಅಶ್ಲೀಲ ಚಿತ್ರವನ್ನು ವಿಡಿಯೋ ಮಾಡಿ ವಿಕೃತಿ ಮೆರೆದಿರುವ ಆರೋಪಿ. ಈತ, ಎಬಿವಿಪಿಯಲ್ಲಿ ಸದಸ್ಯತ್ವ ಕೊಡಿಸುವುದಾಗಿ ನಂಬಿಸಿ, ಯುವತಿಯನ್ನು ತನ್ನ ಕಾಮವಾಂಛೆ ತೀರಿಸಿಕೊಳ್ಳಲು ಬಳಸಿಕೊಳ್ಳುತ್ತಿದ್ದ. ಅಲ್ಲದೆ, ಆ ಕೃತ್ಯವನ್ನು ತನ್ನ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಳ್ಳುತ್ತಿದ್ದ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

7 ದಿನಗಳಲ್ಲಿ 8 ಇ-ಮೇಲ್‌ಗಳು; ಆದರೂ ಮತಪಟ್ಟಿಯಲ್ಲಿ ಉಳಿಯಲಿಲ್ಲ...

90 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿರುವ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ 97 ಮತದಾರರು ಎಂಬ ಸಂಖ್ಯೆ ಅತಿ ಚಿಕ್ಕದಾಗಿ ಕಾಣಬಹುದು. ಆದರೆ, ಗೋವಾದ ಈ 97 ಮತದಾರರ ಪ್ರಕರಣವು ಚುನಾವಣಾ ಆಯೋಗದ ಕಾರ್ಯವಿಧಾನ,...

ಮತದಾರರ ಪಟ್ಟಿ: ನಿರ್ಧಾರ ತೆಗೆದುಕೊಳ್ಳುವುದು, ಜಾರಿಗೆ ತರುವುದು ಯಾರು?

ಗೋವಾದ 97 ಮತದಾರರ ಪ್ರಕರಣ ಚುನಾವಣಾ ವ್ಯವಸ್ಥೆಯ ಮುಂದಿರುವ ಒಂದು ಮಹತ್ವದ ಪ್ರಶ್ನೆಯನ್ನು ಎದುರುತರುತ್ತದೆ: ಸ್ಥಳೀಯ ಮಟ್ಟದ ಮತದಾರರ ನೋಂದಣಿ ಅಧಿಕಾರಿಗಳು (ERO) ದಾಖಲೆಗಳನ್ನು ಪರಿಶೀಲಿಸಿ ಅಂತಿಮ ಪಟ್ಟಿಯಲ್ಲಿ ಸೇರಿಸಲು ಅರ್ಹರೆಂದು ಕಂಡುಕೊಂಡ...

ಯುವತಿಯೊಬ್ಬಳೊಂದಿಗೆ ವಿಡಿಯೋ ಕಾಲ್‌ನಲ್ಲಿ ಮಾತನಾಡಿದ್ದ ಕಾಮುಕ ಆರೋಪಿ, ಆಕೆಯನ್ನು ನಗ್ನಳಾಗುವಂತೆ ಒತ್ತಾಯಿಸಿದ್ದಾನೆ. ಬಳಿಕ, ಆಕೆಯ ನಗ್ನ ದೃಶ್ಯಗಳನ್ನು ವಿಡಿಯೋ ಮಾಡಿಕೊಂಡಿದ್ದಾನೆ. ಆ ವಿಡಿಯೋ ಇಟ್ಟುಕೊಂಡು ಆಕೆಯನ್ನು ಬ್ಲಾಕ್‌ಮೇಲ್‌ ಮಾಡಲು ಆರಂಭಿಸಿದ್ದಾನೆ. ಅಲ್ಲದೆ, ಜೂನ್ 16ರಂದು ಆ ವಿಡಿಯೋವನ್ನು ವಾಟ್ಸಾಪ್‌ನಲ್ಲಿ ಹರಿಬಿಟ್ಟಿದ್ಧಾನೆ ಎಂದು ತಿಳಿದುಬಂದಿದೆ.

ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಬಳಿಕ, ಆರೋಪಿ ಪ್ರತಿಗೌಡನನ್ನು ಬಂಧಿಸುವಂತೆ ಎನ್‌ಎಸ್‌ಯುಐ ಸಂಘಟನೆ ಒತ್ತಾಯಿಸಿದ್ದು, ಡಿವೈಎಸ್‌ಪಿ ಕಚೇರಿಗೆ ಮನವಿ ಸಲ್ಲಿಸಿದೆ.

“ಎಬಿವಿಪಿ ತಾಲೂಕು ಅಧ್ಯಕ್ಷ ಎಸಗಿರುವ ಕೃತ್ಯವು ಸಮಾಜ ತಲೆತಗ್ಗಿಸುವ ಪ್ರಕರಣವಾಗಿದೆ. ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕು. ಆರೋಪಿಯನ್ನು ಬಂಧಿಸಬೇಕು. ಪ್ರಭಾವಿಗಳ ಒತ್ತಡಕ್ಕೆ ಪೊಲೀಸರು ಮಣಿಯಬಾರದು” ಎಂದು ಮನವಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾದಾಮಿ | ಸೆ.27ರಂದು ‘ಬಸವ-ಭೀಮ ಸಂಗಮ’ ಕಾರ್ಯಕ್ರಮ

ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಶೋಷಣೆಮುಕ್ತ ಸಮಾಜದ ಆಶಯಗಳನ್ನು ಮುನ್ನೆಲೆಗೆ ತರುವ...

ವಿಜಯಪುರ | ನವೋದ್ಯಮ ಪರಿಸರ ಬಲಪಡಿಸಲು ಕೆಡಿಇಎಂ ಬೆಂಬಲ

ವಿಜಯಪುರ ಜಿಲ್ಲೆಯ ಸ್ಟಾರ್ಟ್‌ಅಪ್‌ಗಳು, ವಿದ್ಯಾರ್ಥಿ ನವೋದ್ಯಮಿಗಳು ಹಾಗೂ ಉದ್ಯಮಿಗಳಿಗೆ ಉತ್ತೇಜನ ನೀಡುತ್ತಿರುವ...

ಗದಗ | ಹೆಚ್ಚುವರಿ ಪರಿಹಾರ ನೀಡದ, ಜಿಲ್ಲಾಧಿಕಾರಿ ಕಾರು ಜಪ್ತಿ

ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಸ್ವಾಧೀನಪಡಿಸಿಕೊಂಡ ಜಮೀನಿಗೆ ಹೆಚ್ಚುವರಿ ಪರಿಹಾರ ನೀಡದ...

ಯಾದಗಿರಿ | ಅಂಬೇಡ್ಕರ್, ಬಸವಣ್ಣ, ಅಲ್ಲಮಪ್ರಭು, ಕುವೆಂಪು ಕೆಲವರಿಗೆ ‘ಡಿಸ್ಟರ್ಬ್’ ಮಾಡುತ್ತಾರೆ : ನಟ ಪ್ರಕಾಶ್ ರೈ

ಅಂಬೇಡ್ಕರ್ ಅವರ ನೀಲಿ ಶಾಲ್ ಕೂಡ ಕೆಲವರನ್ನು ‘ಡಿಸ್ಟರ್ಬ್’ ಮಾಡುತ್ತದೆ. ಅಂಬೇಡ್ಕರ್,...