ಶಿವಮೊಗ್ಗ | ಡಿ.6ರಿಂದ 10ರವರೆಗೆ ದೇಶಿ ಮೇಳ ಆಯೋಜಿಸಿದ ಸ್ವದೇಶಿ ಜಾಗರಣ ಮಂಚ್

Date:

Advertisements

ಶಿವಮೊಗ್ಗ ನಗರದಲ್ಲಿರುವ ಫ್ರೀಡಂ ಪಾರ್ಕ್‌ನಲ್ಲಿ ಇದೆ ಮೊದಲ ಬಾರಿಗೆ ಬೃಹತ್‌ ಸ್ವದೇಶಿ ಮೇಳ ಆಯೋಜಿಸಲಾಗಿದೆ. ಡಿ.6ರಿಂದ 10ರವರೆಗೆ ಈ ಮೇಳ ನಡೆಯಲಿದೆ. ಸ್ವದೇಶಿ ಜಾಗರಣ ಮಂಚ್‌ ದೇಶೀಯ ವಸ್ತುಗಳ ಪರಿಚಯ ಮತು ಸ್ವದೇಶಿ ಉತ್ಪಾದಕರಿಗೆ ಮಾರುಕಟ್ಟೆ ಒದಗಿಸಲು ಈ ಮೇಳ ಹಮ್ಮಿಕೊಂಡಿದ್ದು, ಸಾರ್ವಜನಿಕರಿಗೆ ಉಚಿತ ಪ್ರವೇಶ ಇರಲಿದೆ.

ಡಿಸೆಂಬರ್‌ 6ರಂದು ಸಂಜೆ, 6.30ಕ್ಕೆ ಬೃಹತ್‌ ಮೇಳದ ಉದ್ಘಾಟನೆಯನ್ನು ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ನೆರವೇರಿಸಲಿದ್ದಾರೆ. ತರಳಬಾಳು ಜಗದ್ಗುರು ಶ್ರೀ 1108 ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ದಿವ್ಯಸಾನಿಧ್ಯ ವಹಿಸಲಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಬಿ.ವೈ. ರಾಘವೇಂದ್ರ, ಜಿಲ್ಲಾಧಿಕಾರಿ ಡಾ. ಆರ್‌. ಸೆಲ್ವಮಣಿ ಭಾಗವಹಿಸುವರು. ಅರ್ಥಶಾಸ್ತ್ರಜ್ಞ ಪ್ರೊ. ಬಿ.ಎಂ. ಕುಮಾರಸ್ವಾಮಿ ಮುಖ್ಯ ಭಾಷಣ ಮಾಡಲಿದ್ದಾರೆ.

ಈ ಮೇಳದಲ್ಲಿ 250ಕ್ಕೂ ಹೆಚ್ಚು ಸ್ವದೇಶಿ ಮಳಿಗೆಗಳು ಭಾಗವಹಿಸಲಿವೆ. ವೈವಿಧ್ಯಮಯ ದೇಶೀಯ ಆಹಾರಗಳು, ದೇಶೀಯ ಕ್ರೀಡೆಗಳು, ಜಾನಪದ ಕಲಾ ವೈಭವ, ಯಕ್ಷಗಾನ, ಬಾನ್ಸುರಿ ವಾದನ, ನೃತ್ಯ ರೂಪಕ, ಜಾದೂ ಪ್ರದರ್ಶನ ಸೇರಿದಂತೆ 16 ಕ್ಕೂ ಹೆಚ್ಚು ಶಿಬಿರ ಹಾಗೂ ತರಬೇತಿ ಕಾರ್ಯಾಗಾರಗಳು ನಡೆಯಲಿವೆ.

Advertisements

ಡಿಸೆಂಬರ್‌ 6ರ ರಾತ್ರಿ 8.30ಕ್ಕೆ ಜಾನಪದ ಕಲಾ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಭದ್ರಾವತಿ ತಾಲೂಕು ಎಮ್ಮೆಹಟ್ಟಿಯ ಶ್ರೀ ಗಜಾನನ ಡೊಳ್ಳು ಮತ್ತು ಸಾಂಸ್ಕೃತಿಕ ಕಲಾ ತಂಡ ಹಾಗೂ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಜಾನಪದ ಕಲಾ ತಂಡ, ವೀರಭದ್ರ ಕುಣಿತ ಮತ್ತು ವೀರಗಾಸೆ ಪ್ರದರ್ಶನ ಮಾಡಲಿದೆ.

ಆಹಾರ ಪ್ರಿಯರಿಗಾಗಿ ವಿವಿಧ ಖಾದ್ಯ ಸವಿಯಲು ಅವಕಾಶವಿದೆ. ಮೇಲುಕೋಟೆ ಪುಳಿಯೋಗರೆ, ಮುಳುಬಾಗಿಲು ದೋಸೆ, ದಾವಣಗೆರೆ ಬೆಣ್ಣೆದೋಸೆ, ಸಾವಯವ ಕಬ್ಬಿನಹಾಲು, ಅಡಕೆ ಐಸ್‌ ಕ್ರೀಂ, ಬಂಗಾರಪೇಟೆ ಚಾಟ್ಸ್, ಹುಬ್ಬಳ್ಳಿಯ ಗಿರಮಿಟ್‌, ಸಿರಿಧಾನ್ಯಗಳ ರೊಟ್ಟಿ (ನವಣೆ, ಸಜ್ಜೆ, ರಾಗಿ, ಜೋಳ ,ಅಕ್ಕಿ ರೊಟ್ಟಿ) ಸೇರಿದಂತೆ ಕವಳಿ, ಕಂಚಿ, ಮಾವು, ನಿಂಬೆ, ಮೆಣಸಿನ ಹಿಂಡಿ, ಮೆಂತ್ಯ ಹಿಂಡಿ, ಅಗಸಿ, ಶೇಂಗಾ, ಗುರೆಳ್ಳು ಚಟ್ನಿ ಪುಡಿ ಹೀಗೆ ನೂರಾರು ರೀತಿಯ ತರೇವಾರಿ ಆಹಾರ ಪದಾರ್ಥ, ತಿಂಡಿ, ತಿನಿಸು ಲಭ್ಯವಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X