ಶಿವಮೊಗ್ಗ | ಹಿಂಸೆಗೆ ತಿರುಗಿದ ಒಳಮೀಸಲಾತಿ ವಿರೋಧಿ ಹೋರಾಟ; ಬಿಎಸ್‌ವೈ ಮನೆ ಮೇಲೆ ಕಲ್ಲು ತೂರಾಟ

Date:

  • ಗಲಾಟೆಯಲ್ಲಿ ಹಲವು ಪೊಲೀಸರು ಮತ್ತು ಪ್ರತಿಭಟನಾಕಾರರಿಗೆ ಗಾಯ
  • ಪ್ರತಿಭಟನಾಕಾರರನ್ನು ಚದುರಿಸಿ, ನಿಯಂತ್ರಣಕ್ಕೆ ತಂದ ಪೊಲೀಸರು

ರಾಜ್ಯ ಸರ್ಕಾರವು ಪರಿಶಿಷ್ಟರಿಗೆ ನೀಡಿರುವ ಒಳಮೀಸಲಾತಿಯನ್ನು ವಿರೋಧಿಸಿ ಶಿವಮೊಗ್ಗದ ಯಡಿಯೂರಪ್ಪನವರ ಮನೆ ಮುಂದೆ ನಡೆಯುತ್ತಿದ್ದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಮತ್ತು ಪೊಲೀಸರ ಮಧ್ಯ ಚಟಾಪಟಿ ನಡೆದು ಬಿಎಸ್‌ವೈ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಪರಿಶಿಷ್ಟ ಜಾತಿಯಲ್ಲಿ ಬರುವ 101 ಜಾತಿಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ಉದ್ದೇಶದಿಂದ ರಚಿಸಲಾಗಿದ್ದ ನ್ಯಾಯಮೂರ್ತಿ ಸದಾಶಿವ ಆಯೋಗವನ್ನು ರಾಜ್ಯ ಸರ್ಕಾರವು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಪರಿಗಣಿಸಿ ಕೇಂದ್ರಕ್ಕೆ ಕಳುಹಿಸಿಕೊಡಲು ತೀರ್ಮಾನಿಸಿತ್ತು.

ಇದನ್ನು ವಿರೋಧಿದ ಲಂಬಾಣಿ, ಭೋವಿ ಹಾಗೂ ಕೊರಚ ಸಮುದಾಯದ ನೂರಾರು ಜನರು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಶಿಕಾರಿಪುರದ ಮನೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ವೇಳೆ ಕೆಲವು ಪ್ರತಿಭಟನಾಕಾರರು ಯಡಿಯೂರಪ್ಪನವರ ಮನೆಗೆ ನುಗ್ಗಲು ಯತ್ನಿಸಿದಾಗ, ಪೊಲೀಸರು ಇವರನ್ನು ತಡೆಯಲು ಯತ್ನಿಸಿದರು. ಇದಕ್ಕೆ ಸಿಟ್ಟಾದ ಪ್ರತಿಭಟನಾಕಾರರು ಪೊಲೀಸ್‌ ಬ್ಯಾರಿಕೇಡ್‌ ತಳಿ ಮುಂದಕ್ಕೆ ನುಗ್ಗಲು ಯತ್ನಿಸಿದರು.

ಯಡಿಯೂರಪ್ಪನವರ ನಿವಾಸದ ಮುಂದೆ ಟೈರ್ ಗಳನ್ನು ಸುಟ್ಟು ಮನೆ ಬಳಿ ನಿಲ್ಲಿಸಿದ್ದ ವಾಹನಗಳನ್ನು ಜಖಂಗೊಳಿಸಿ, ಯಡಿಯೂರಪ್ಪನವರ ಪ್ರತಿಕೃತಿ ದಹನ ಮಾಡಿದಲ್ಲದೇ ಮನೆ ಮುಂದೆ ಕಟ್ಟಲಾಗಿದ್ದ ಬಿಜೆಪಿ ಪಕ್ಷದ ಬ್ಯಾನರ್ ಗಳನ್ನು ಹರಿದುಹಾಕಿದರು.

ಇದಕ್ಕೂ ಸೊಪ್ಪು ಹಾಕದ ಪೊಲೀಸರು ಪ್ರತಿಭಟನಾಕಾರರನ್ನು ಮತ್ತಷ್ಟು ಹಿಂದಕ್ಕೆ ಕಳುಹಿಸಿದರು. ಇದಕ್ಕೆ ಪ್ರತಿಯಾಗಿ ಪ್ರತಿಭಟನಾಕಾರರು ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಲ್ಲದೇ, ಚಪ್ಪಲಿ ಹಾಗೂ ಕಲ್ಲುಗಳನ್ನು ಪೊಲೀಸರ ಮೇಲೆ ಹಾಗೂ ಯಡಿಯೂರಪ್ಪನವರ ಮನೆ ಮೇಲೆ ಎಸೆದರು.

ಯಡಿಯೂರಪ್ಪನವರು ಇತ್ತೀಚೆಗಷ್ಟೇ ಕಟ್ಟಿಸಿದ್ದ ಹೊಸ ಮನೆಯ ಗಾಜುಗಳು ಪುಡಿಪುಡಿಯಾಗಿದ್ದು, ಹಲವು ಪೊಲೀಸರು ಹಾಗೂ ಪ್ರತಿಭಟನಾ ನಿರತ ಮಹಿಳೆಯರೂ ಗಾಯಗೊಂಡಿದ್ದಾರೆ. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಮನರೇಗಾ ಯೋಜನೆಯಡಿ ಕೆಲಸಕ್ಕಾಗಿ ಆಗ್ರಹ

ಬರಗಾಲದಲ್ಲಿ ನೆಪ ಹೇಳುವುದು ಬಿಟ್ಟು ಕೆಲಸ ಮಾಡಲು ಹೇಳುವಲ್ಲಿ ತಾಲೂಕು ಪಂಚಾಯತಿ...

ತುಮಕೂರು | ಮಂದಿರ, ಮಸೀದಿ ಹೆಸರಿನಲ್ಲಿ ಯುವಕರನ್ನು ಬಿಜೆಪಿ ದಾರಿ ತಪ್ಪಿಸುತ್ತಿದೆ: ಸಚಿವ ಕೆ.ಎನ್ ರಾಜಣ್ಣ

ಮಂದಿರ, ಮಸೀದಿ ಹೆಸರಿನಲ್ಲಿ ಯುವಕರನ್ನು ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದ್ದು,...

ಬೇಸಿಗೆ | ಬಿಯರ್ ಮೊರೆ ಹೋದ ಮದ್ಯಪ್ರಿಯರು: 11 ದಿನದಲ್ಲಿ 27 ಲಕ್ಷ ಲೀ. ಬಿಯರ್ ಮಾರಾಟ

ತಾಪಮಾನ ಹೆಚ್ಚಳದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನರು ಬಿಸಿಯಾದ ಪಾನೀಯಗಳಿಗಿಂತ ತಂಪಾದ...

ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಆಗದಂತೆ ಕ್ರಮ: ನೋಡಲ್ ಅಧಿಕಾರಿ

ರೋಣ ತಾಲೂಕಿನಲ್ಲಿ ಜನ-ಜಾನುವಾರುಗಳಿಗೆ ಯಾವುದೇ ರೀತಿಯಲ್ಲಿ ಕುಡಿಯುವ ನೀರಿನ ಕೊರತೆ ಆಗದಂತೆ...