ಸದನದಲ್ಲಿ ಕೇಂದ್ರ ಗೃಹಮಂತ್ರಿ ಅಮಿತ್ ಶಾ ವಿವಾದಾತ್ಮಕ ಹೇಳಿಕೆ ನೀಡಿದ್ದು, ʼಅಂಬೇಡ್ಕರ್ ಅಂಬೇಡ್ಕರ್ ಅಂಬೇಡ್ಕರ್ ಎಂಬುದು ಒಂದು ಫ್ಯಾಷನ್ ಆಗಿಬಿಟ್ಟಿದೆ. ಇಷ್ಟು ಬಾರಿ ದೇವರ ಹೆಸರು ಹೇಳಿದ್ದರೆ 7 ಜನ್ಮಕೂ ಸ್ವರ್ಗ ಸಿಗುತ್ತಿತ್ತುʼ ಎಂಬ ಹೇಳಿಕೆ ನೀಡಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವುದು ತೀವ್ರ ಖಂಡನೀಯ ಎಂದು ಎಸ್‌ಡಿಪಿಐ ಆಕ್ರೋಶ ವ್ಯಕ್ತಪಡಿಸಿದೆ.
ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, “ವಿಶ್ವದಲ್ಲಿಯೇ ಮಾದರಿಯಾಗಿರುವ ಭಾರತೀಯ ಸಂವಿಧಾನದ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಹೆಸರು ಫ್ಯಾಷನ್ ಅಲ್ಲ, ಅದು ಅವರಿಗೆ ನೀಡುವ ಗೌರವವಾಗಿದೆ. ದಮನಿತರು, ಶೋಷಿತರು, ಬುಡಕಟ್ಟು ಜನಾಂಗ, ಬಡವರು ಮತ್ತು ಮಹಿಳೆಯರ ಹಕ್ಕುಗಳ ಬಗ್ಗೆ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನದಲ್ಲಿ ಸ್ಪಷ್ಟವಾಗಿ ಬರೆದಿದ್ದಾರೆ. ಅಷ್ಟೇ ಅಲ್ಲ ಭಾರತದಲ್ಲಿ ಇವತ್ತು ದಲಿತರು, ಅಲ್ಪಸಂಖ್ಯಾತರು ಸೇರಿದಂತ ಎಲ್ಲ ವರ್ಗದ ಮಹಿಳೆಯರಿಗೆ ಮೀಸಲಾತಿಯ ಹಕ್ಕು ನೀಡಿರುವವ ಸಂವಿಧಾನದ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಸರ್ವ ಭಾರತೀಯರಿಗೆ ಮಾದರಿ. ಇವರನ್ನು ಅಪಮಾನ ಮಾಡಿದರೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷವು ಸಹಿಸಲು ಸಾಧ್ಯವಿಲ್ಲ” ಎಂದು ಸಂಘಟನಾಕಾರರು ಕಿಡಿಕಾರಿದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಿಎಂ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ರೈತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
“ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವ ಕೇಂದ್ರ ಗೃಹಮಂತ್ರಿ ಬಿಜೆಪಿಯ ಅಮಿತ್ ಶಾ ಭಾರತೀಯರ ಮುಂದೆ ಬಹಿರಂಗ ಕ್ಷಮೆಯಾಚಿಸಲಿ, ಇಲ್ಲದಿದ್ದರೆ ರಾಜಿನಾಮೆ ನೀಡಲಿ” ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಇಮ್ರಾನ್, ಉಪಾಧ್ಯಕ್ಷ ದೇವೇಂದ್ರ ಪಾಟಿಲ್, ಪ್ರಧಾನ ಕಾರ್ಯದರ್ಶಿ ಇಸಾಕ್, ಕಾರ್ಯದರ್ಶಿ ಕಲೀಂ, ಖಜಾಂಚಿ ರಹೀಂ, ಜಿಲ್ಲಾ ಸಮಿತಿಯ ಜೀಲಾನ್, ಸಲೀಂ, ಫೈರೋಜ್, ಸಾಧಿಕ್, ಶಾರುಖ್ ಮತ್ತು ಕಾರ್ಯಕರ್ತರು ಇದ್ದರು.