ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಹೊಸಗುಂದ ತಿರುವಿನ ಬಳಿ ಗಜಾನನ ಕಂಪನಿಯ ಖಾಸಗಿ ಬಸ್ ಅಪಘಾತವಾಗಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.
ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದಿದೆ. ಬಸ್ಸಿನಲ್ಲಿ ಸರಿಸುಮಾರು 15ಕ್ಕಿಂತ ಅಧಿಕ ಮಂದಿ ಪ್ರಯಾಣಿಸುತ್ತಿದ್ದರೆಂದು ತಿಳಿದುಬಂದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ. ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಪ್ರಯಾಣಿಕರನ್ನು ಸಾಗರ ಹಾಗೂ ಆನಂದಪುರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಹೆಚ್ಚುತ್ತಿರುವ ಅಪಘಾತ: ಜಿಲ್ಲೆಯಾದ್ಯಂತ ಹೆಲ್ಮೆಟ್ ಕಡ್ಡಾಯಗೊಳಿಸಿ ಜಿಲ್ಲಾಡಳಿತ ಆದೇಶ
ಆನಂದಪುರ ಪೊಲೀಸ್ ಠಾಣೆಯ 112ರ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ವರದಿ : ಅಮಿತ್ ಆರ್, ಆನಂದಪುರ