ಶಿವಮೊಗ್ಗ | ತಾಂತ್ರಿಕ ಶಿಕ್ಷಣದಲ್ಲಿರುವ ʼಕ್ಯಾರಿ ಓವರ್ʼ ಪದ್ಧತಿ ರದ್ದುಪಡಿಸಬೇಕು: ಎಚ್ ಆರ್ ಬಸವರಾಜಪ್ಪ

Date:

Advertisements

ತಾಂತ್ರಿಕ ಶಿಕ್ಷಣದಲ್ಲಿರುವ ʼಕ್ಯಾರಿ ಓವರ್ʼ ಪದ್ಧತಿಯನ್ನು ರದ್ದುಪಡಿಸಬೇಕು. ಸರ್ವರಿಗೂ ಶಿಕ್ಷಣ ಎಲ್ಲರಿಗೂ ಅವಕಾಶ”ವೆಂಬ ಪ್ರಜಾಪ್ರಭುತ್ವದ ತತ್ವಕ್ಕೆ ಇದು ಸಂಪೂರ್ಣ ತದ್ವಿರುದ್ಧವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಎಚ್ ಆರ್ ಬಸವರಾಜಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್‌ ಅವರಿಗೆ ಮನವಿ ಸಲ್ಲಿಸಿದ ಅವರು, “ಕೋವಿಡ್-19 ನಂತರ 2022-23ರ ಸಾಲಿನಿಂದ ತಾಂತ್ರಿಕ ಶಿಕ್ಷಣದಲ್ಲಿ ಅನುಷ್ಟಾನಕ್ಕೆ ತಂದಿರುವಂತಹ “ಕ್ಯಾರಿ ಓವರ್” ನಿಯಮವು ಗ್ರಾಮೀಣ ಮತ್ತು ರೈತ ಸಮುದಾಯದ ಬಹುಪಾಲು ವಿದ್ಯಾರ್ಥಿಗಳು ಪ್ರೌಢ ಶಿಕ್ಷಣದವರೆಗೆ ಕನ್ನಡ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮುಗಿಸಿ ಪಿಯುಸಿ ಹಂತದಲ್ಲಿ ಹೊಸದಾಗಿ ಆಂಗ್ಲ ಭಾಷೆಯಲ್ಲಿ ಶಿಕ್ಷಣವನ್ನು ಪಡೆಯುವ ಇವರು ತ್ರಾಸದಾಯಕವಾಗಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿ ತದನಂತರ ಕಷ್ಟಪಟ್ಟು ಎಂಜಿನಿಯರಿಂಗ್ ಹಾಗೂ ತಾಂತ್ರಿಕ ಶಿಕ್ಷಣ ವಿಭಾಗದಲ್ಲಿ ಪ್ರವೇಶಾತಿ ಪಡೆಯುವ ಈ ವರ್ಗದ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದಲ್ಲಿ ತಂದಿರುವ ʼಕ್ಯಾರಿ ಓವರ್ʼ ಪದ್ಧತಿಯು ಅವರ ಶಿಕ್ಷಣದ ಕನಸಿಗೆ ಮುಳುವಾಗಿದೆ” ಎಂದು ತಿಳಿಸಿದ್ದಾರೆ.

“ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದು ಬಂದಿರುವ ಇವರಿಗೆ ಮೊದಲ ವರ್ಷದ ತಾಂತ್ರಿಕ ಪದಗಳನ್ನು ಮೊದಲ ಬಾರಿಗೆ ಆಂಗ್ಲಭಾಷಾ ವಾಕ್ಯದಲ್ಲಿ ಉಲ್ಲೇಖವಾಗಿರುವುದನ್ನು ಕಂಡು ಭಯಭೀತರಾಗುವುದೇ ಹೆಚ್ಚು. ಆಂಗ್ಲಭಾಷೆ ಮತ್ತು ಅದರ ಪದಗಳು ಕಬ್ಬಿಣದ ಕಡಲೆಯಂತಾಗಿರುವ ಇವರಿಗೆ ಆಂಗ್ಲಭಾಷೆಯಲ್ಲಿರುವ ವಿಷಯಗಳನ್ನು ಅರ್ಥ ಮಾಡಿಕೊಳ್ಳಲು ಹಗಲಿರುಳೆನ್ನದೆ ಕಷ್ಟಪಡುವ ಸಂದರ್ಭದಲ್ಲಿ ವರ್ಷದಲ್ಲಿ ಎರಡು ಬಾರಿ ಎದರಾಗುವ ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸಲು ಪ್ರಾರಂಭಿಕ ಹಂತದಲ್ಲಿ ಕಷ್ಟಸಾಧ್ಯವಾಗುತ್ತದೆ. ಆದ್ದರಿಂದ ಪ್ರಾರಂಭಿಕ ಮೊದಲ ವರ್ಷದ ಈ “ಕ್ಯಾರಿ ಓವರ್” ಪದ್ಧತಿ ಕೈ ಬಿಟ್ಟು ಭವಿಷ್ಯದಲ್ಲಿ ರೈತರು ಹಾಗೂ ಗ್ರಾಮೀಣ ಪ್ರದೇಶದ ಮಕ್ಕಳೂ ಕೂಡಾ ತಾಂತ್ರಿಕ ಶಿಕ್ಷಣದಲ್ಲಿ ಪದವಿ ಪಡೆಯಲು ಸರ್ಕಾರ ಹಾಗೂ ತಾಂತ್ರಿಕ ಶಿಕ್ಷಣ ಮಂಡಳಿ ಅನುವು ಮಾಡಿಕೊಡಬೇಕು” ಎಂದು ಮನವಿ ಮಾಡಿದರು.

Advertisements

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಹಿರಿಯ ಉಪನ್ಯಾಸಕ ಬಿಸ್ಲಪ್ಪ ಕಟ್ಟಿಮನಿಯವರಿಗೆ ಬೀಳ್ಕೊಡುಗೆ ಸಮಾರಂಭ

“ಮೊದಲ ವರ್ಷದ ಶಿಕ್ಷಣದ ಅವಧಿಯಲ್ಲಿ ದ್ವಿತೀಯ ವರ್ಷಕ್ಕೆ ಅರ್ಹತೆಗಳಿಸುವ ಸಮಯದಲ್ಲಿ ಕೂದಲೆಳೆಯ ಅಂತರದಲ್ಲಿ ಅವಕಾಶ ವಂಚಿತರಾಗುವ ಈ ವರ್ಗದ ವಿದ್ಯಾರ್ಥಿಗಳು ಮುಂದೆ ಮಾನಸಿಕ ಖಿನ್ನತೆಗೆ ಒಳಗಾಗಿ ಶಿಕ್ಷಣದಿಂದ ಹೊರಗುಳಿದು ಕುಟುಂಬಕ್ಕೆ, ಸಮಾಜಕ್ಕೆ ಮಾರಕವಾಗಿ ಹಾಗೂ ಹೊರೆಯಾಗಿ ಬಾಳುವುದೇ ಹೆಚ್ಚು. ಕೋವಿಡ್ ನಂತರದ ಶಿಕ್ಷಣದಲ್ಲಿ ವಿದ್ಯಾರ್ಥಿಗಳಲ್ಲಿ ಬಹಳಷ್ಟು ಮಂದಿ ಮಾನಸಿಕವಾಗಿ ಜರ್ಜರಿತರಾಗಿದ್ದು, ಸಾವಕಾಶವಾಗಿ ಈಗ ತಹಬದಿಗೆ ಬರುತ್ತಿದ್ದಾರೆ. ಈ ಸನ್ನಿವೇಶ ಇರುವಾಗ “ಕ್ಯಾರಿ ಓವರ್” ಭೂತ ಪದ್ದತಿಯಿಂದ ಅವರನ್ನು ಮತ್ತುಷ್ಟು ಗಾಬರಿಗೊಳಿಸುವ ದುಸ್ಸಾಹಸಕ್ಕೆ ಮುಂದಾಗಬಾರದು. ವಿದ್ಯಾರ್ಥಿಗಳಿಗೆ ಮಾರಕವಾಗಿರುವ ಈ ಆವೈಜ್ಞಾನಿಕ “ಕ್ಯಾರಿ ಓವರ್” ಪದ್ಧತಿಯನ್ನು ಕೈ ಬಿಡಬೇಕು” ಎಂದು ಕೋರಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X