ಶಿವಮೊಗ್ಗ | ಮಲೆನಾಡ ಜನರ ಅಚ್ಚುಮೆಚ್ಚಿನ ಸಹಕಾರ ಸಾರಿಗೆ ಬಸ್ ಮತ್ತೊಮ್ಮೆ ರಸ್ತೆಗೆ

Date:

ಮಲೆನಾಡ ಜನರಿಗೆ ಅದೊಂದು ಹೆಸರು ಸಹಕಾರ ಸಾರಿಗೆ ಬಸ್ ಮರೆಯಲಾಗದ ಹೆಸರೆಂದರೆ ತಪ್ಪಾಗಲಾರದು. ಹೌದು ಪ್ರತಿನಿತ್ಯ ಮಲೆನಾಡಿನ ಬಹುತೇಕ ಹಳ್ಳಿಗಳಲ್ಲಿಯೂ ಓಡಾಟ ನಡೆಸಲು ಇದ್ದಂತಹ ಬಸ್‌ ಸಹಕಾರ ಸಾರಿಗೆ. ಈ ಹೆಸರಿಗೆ ಒಂದು ಗತ್ತು ಗಮ್ಮತ್ತು ಇತ್ತು. ಇದು ಓಡಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಇತರ ಬಸ್‌ಗಳ ಅವಶ್ಯಕತೆಯೇ ಬೇಡ ಎನ್ನುವಷ್ಟರ ಮಟ್ಟಿಗೆ ಜನರು ಇದನ್ನು ನಂಬಿಕೊಂಡಿದ್ದರು.

- Advertisement -

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಟಿಸಿಎಸ್ ಎಂಬ ಸಂಸ್ಥೆಯ ಸಹಕಾರ ಸಾರಿಗೆ ಬಸ್, ಕೊಪ್ಪ, ಶೃಂಗೇರಿ, ಎನ್‌ ಆ‌ರ್ ಪುರ, ತೀರ್ಥಹಳ್ಳಿ, ಶಿವಮೊಗ್ಗ, ರಿಪ್ಪನ್‌ ಪೇಟೆ ಹೀಗೆ ಎಲ್ಲೆಡೆ ಸಂಚಾರ ಮಾಡುತ್ತಿದ್ದ ಸಾರಿಗೆ ಸಂಸ್ಥೆ ಹಲವಾರು ತೊಂದರೆಗಳಿಗೆ ಒಳಗಾಗಿ ಬಾಗಿಲು ಮುಚ್ಚುವ ಪರಿಸ್ಥಿತಿಗೆ ಬಂತು. ನಂತರ ಸಹಕಾರ ಸಾರಿಗೆಯ ಓಡಾಟ ನಿಲ್ಲಿಸಲಾಯಿತು. ಎಷ್ಟೋ ಜನರಿಗೆ ಓಡಾಟಕ್ಕೆ ಅನುಕೂಲವಾಗಿದ್ದ ಬಸ್ ಏಕಾಏಕಿ ಸ್ಥಗಿತವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ಸಾರ್ವಜನಿಕರಿಗೆ, ಶಾಲೆ ಕಾಲೇಜು ವಿದ್ಯಾರ್ಥಿಗಳಿಗೆ ಇದೊಂದು ಬಸ್‌ ಎನ್ನುವಂತಾಗಿರದೆ ತಮ್ಮದೇ ವಾಹನ ಎಂಬಂತೆ ಓಡಾಟ ನಡೆಸುತ್ತಿದ್ದರು. ಶಾಲೆ ಕಾಲೇಜು ವಿದ್ಯಾರ್ಥಿಗಳಿಗಾಗಿ ಬಸ್ ಪಾಸ್ ವಿತರಣೆ ಮಾಡಿದ ಮೊದಲ ಖಾಸಗಿ ಬಸ್ ಸಂಸ್ಥೆ ಸಹಕಾರ ಸಾರಿಗೆಗೆ ಸಲ್ಲುತ್ತದೆ. ಬಸ್‌ ಮಾತ್ರವಲ್ಲದೆ ಅದರಲ್ಲಿದ್ದ ಚಾಲಕರು, ನಿರ್ವಾಹಕರೂ ಕೂಡಾ ಜನರ ಜತೆಗೆ ಉತ್ತಮ ಬಾಂಧವ್ಯ ಹೊಂದಿದ್ದ ಕಾರಣದಿಂದ ಅತ್ಯಂತ ಜನಪ್ರಿಯತೆ ಪಡೆದಿತ್ತು.

ಈಗ ಹಲವು ವರ್ಷಗಳ ನಂತರ ಮತ್ತೊಮ್ಮೆ ಸಹಕಾರ ಸಾರಿಗೆ ಬಸ್ ರಸ್ತೆಗೆ ಇಳಿದಿದೆ. ರಸ್ತೆಯಲ್ಲಿ ಓಡಾಟ ನಡೆಸುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಹಲವು ವರ್ಷಗಳ ನಂತರವೂ ರಸ್ತೆಯಲ್ಲಿ ಈ ಬಸ್‌ ಓಡಾಟ ಆರಂಭಿಸಿದ್ದರೂ ಗಜ ಗಾಂಭೀರ್ಯ ನಡೆಯೆಂದರೆ ತಪ್ಪಾಗಲಾರದು. ಒಟ್ಟಿನಲ್ಲಿ ಹಲವು ವರ್ಷಗಳ ನಂತರ ಸಹಕಾರ ಸಾರಿಗೆ ತನ್ನ ಪುನರ್ಜನ್ಮ ಪಡೆದಿದೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಕೋಡಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಯುವತಿ 12 ಗಂಟೆಯ ಬಳಿಕ ಜೀವಂತವಾಗಿ ಪತ್ತೆ!

ಸಹಕಾರ ಸಾರಿಗೆ ಇನ್ನುಮುಂದೆ ಶಿವಮೊಗ್ಗದಲ್ಲಿ ಹಾಗೂ ಚಿತ್ರದುರ್ಗದಲ್ಲಿ ತನ್ನ ಗಾಂಭೀರ್ಯ ನಡೆಯನ್ನು ಮುಂದುವರೆಸಲಿದೆ. ಸಹಕಾರ ಸಾರಿಗೆ ಎಂಬ ಹೆಸರಿನಲ್ಲಿಯೇ ಮುಂದುವರೆಸುವಂತೆ ಮಲೆನಾಡ ಜನರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

ಕತಾರ್‌ನಲ್ಲಿ ಉಡುಪಿಯ ಸಮಾಜ ಸೇವಕ ಎಂ. ಇಕ್ಬಾಲ್ ಮನ್ನಾ ಅವರಿಗೆ ಗೌರವ ಸನ್ಮಾನ

ಉಡುಪಿ ಜಿಲ್ಲೆಯ ಪ್ರಮುಖ ಸಮಾಜ ಸೇವಕರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಎಂ....

ಗದಗ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ...