ಶಿವಮೊಗ್ಗ | ಬೃಹತ್‌ ಗುಂಡಿಗಳಿಂದ ರಾರಾಜಿಸುತ್ತಿರುವ ರಸ್ತೆ; ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಾಹನ ಸವಾರರು ಹೈರಾಣು

Date:

ಶಿವಮೊಗ್ಗ ನಗರದ ಎನ್ ಟಿ ರಸ್ತೆ, ನ್ಯೂ ಮಂಡಲಿ ವೃತ್ತದ ಸುತ್ತಮುತ್ತಲಿನಲ್ಲಿ ಬೃಹದಾಕಾರದ ಗುಂಡಿಗಳನ್ನು ಕಾಣಬಹುದು. ಈ ರಸ್ತೆಯಲ್ಲಿ ಅತಿ ಹೆಚ್ಚು ವಾಹನ ಸಂಚಾರ ಇದ್ದು, ಕಿರಿದಾದ ರಸ್ತೆ ಕೂಡ ಆಗಿದೆ. ಇಲ್ಲಿ ರಸ್ತೆಯಲ್ಲಿದೆಯೆಂದು ಹುಡುಕಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

- Advertisement -

“ನಿತ್ಯವೂ ಈ ಗುಂಡಿಯಿಂದ ಒಬ್ಬರಲ್ಲ ಒಬ್ಬರು ಬಿದ್ದು ಪೆಟ್ಟಾಗಿ ಗಾಯ ಮಾಡಿಕೊಳ್ಳುತ್ತಿದ್ದಾರೆ. ರಾತ್ರಿ ವೇಳೆಯಲ್ಲಂತೂ ಈ ಗುಂಡಿಗಳಿಂದ ಬಹಳಷ್ಟು ತೊಂದರೆಯಾಗುತ್ತಿದೆ. ಯಾವತ್ತು ಏನು ಅನಾಹುತ ಆಗುವ ಸಂಭವವಿದೆಯೋ ಗೊತ್ತಿಲ್ಲ. ಸತತ 6 ತಿಂಗಳಿಂದ ಈ ರೀತಿ ಗುಂಡಿ ಆಗಿದ್ದರು ಇದರ ಕುರಿತು ಯಾವುದೇ ಅಧಿಕಾರಿಗಳೂ ಕೂಡ ಇದನ್ನು ಸರಿಪಡಿಸುವ ಗೋಜಿಗೆ ಹೋಗಿಲ್ಲ” ಎಂಬುದು ವಾಹನ ಸವಾರಾರು ಹಾಗೂ ಸ್ಥಳೀಯರ ಆರೋಪವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸ್ಥಳೀಯರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ನಿತ್ಯ ಓಡಾಡುವ ವಾಹನ ಸವಾರರಿಗೆ ಒಂದು ಕಡೆ ವಾಹನ ಹಾಳಾಗುವ ಪರಿಸ್ಥಿತಿ ಮತ್ತೊಂದು ಕಡೆ ಹಿಂದೆ ಮುಂದೆ ಬರುವ ವಾಹನಗಳು ಯಾವಾಗ ಯಾರಿಗೆ ಢಿಕ್ಕಿ ಹೊಡೆಯುತ್ತಾರೋ ಎನ್ನುವ ಆತಂಕದಲ್ಲಿ ವಾಹನ ಸವಾರರು ವಾಹನ ಚಲಾಯಿಸುತ್ತಿದ್ದಾರೆ. ವಾಹನ ಸವಾರರೇ ಗುಂಡಿ ತಪ್ಪಿಸಲು ಹೋಗಿ ಹಲವು ಬಾರಿ ಆಯತಪ್ಪಿ ಬಿದ್ದು ಗಾಯಗೊಂಡಿರುವ ಹಲವು ಘಟನೆಗಳೂ ನಡೆದಿವೆ” ಎಂದು ತಿಳಿಸಿದ್ದಾರೆ.

ರಸ್ತೆ ಗುಂಡಿ 1ರಸ್ತೆ ಗುಂಡಿ 3

“ಶಿವಮೊಗ್ಗದಿಂದ ತೀರ್ಥಹಳ್ಳಿ, ಬೈಪಾಸ್ ಮತ್ತು ನ್ಯೂ ಮಂಡಲಿ ತಲುಪುವ ತ್ರಿಕೋನ ರಸ್ತೆ ಇದಾಗಿದ್ದು, ಇಲ್ಲಿ ಶಿವಮೊಗ್ಗದಿಂದ ತೀರ್ಥಹಳ್ಳಿ, ಮಣಿಪಾಲ, ಉಡುಪಿ, ಮಂಗಳೂರು ರಸ್ತಗೆ ಹೋಗುವ ಮಾರ್ಗ ಮಧ್ಯೆ ನಾರಾಯಣ ಹೃದಯಾಲಯ ಆಸ್ಪತ್ರೆ ಹಾಗೂ ಶಂಕರ್ ಕಣ್ಣಿನ ಆಸ್ಪತ್ರೆಗಳೂ ಇವೆ. ಹಾಗಾಗಿ ತುರ್ತು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಹೋಗುವ ರೋಗಿಗಳನ್ನು ಆಂಬುಲೆನ್ಸ್ ಮುಖಾಂತರ ಇದೇ ರಸ್ತೆಯಲ್ಲಿ ಕರೆದೊಯ್ಯಲಾಗುತ್ತದೆ. ಅಂತೆಯೇ ತೀರ್ಥಹಳ್ಳಿಯಿಂದ ಶಿವಮೊಗ್ಗ ನಗರಕ್ಕೆ ಬರುವಾಗ ಮ್ಯಾಕ್ಸ್ ಆಸ್ಪತ್ರೆ ಮತ್ತು ಶಿವಮೊಗ್ಗ ಜಿಲ್ಲಾಸ್ಪತ್ರೆ ಮೆಗ್ಗಾನ್ ಆಸ್ಪತ್ರೆ‌ಯಿದೆ. ಹಾಗಾಗಿ ನಿತ್ಯವೂ ಅತಿ ಹೆಚ್ಚು ಆಂಬುಲೆಲ್ಸ್‌ಗಳು ಇದೇ ರಸ್ತೆಯಲ್ಲಿ ಓಡಾಡುತ್ತವೆ. ಇದರಿಂದ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಓಡಾಡುವ ಪರಿಸ್ಥಿತಿ ಎದುರಾಗಿದೆ. ಮಳೆಗಾಲ ಆರಂಭವಾಗಿರುವ ಕಾರಣ ರಸ್ತೆ ಗುಂಡಿಯಿಂದ ತಪ್ಪಿಸಲು ಹೋಗಿ ಗಾಡಿ ಸ್ಕಿಡ್ ಆಗಿ ಬೀಳುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆ ಗುಂಡಿ 2ರಸ್ತೆ ಗುಂಡಿ 4

“ವಾಹನ ಸವಾರರಿಗೆ ತೊಂದರೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಪರಿಹಾರ ಒದಗಿಸಿ ರಸ್ತೆ ಸರಿಪಡಿಸಿಕೊಡಬೇಕು” ಎಂದು ಸ್ಥಳೀಯರು ಮತ್ತು ವಾಹನ ಸವರಾರು ಅಗ್ರಹಿಸಿದರು.

ರಾಷ್ಟ್ರೀಯ ಹೆದ್ದಾರಿ ವಿಭಾಗದ ಎಇಇ ಸುರೇಶ್ ಆರ್ ಅವರನ್ನು ಈ ದಿನ.ಕಾಮ್‌ ಸಂಪರ್ಕಿಸಿದಾಗ ಪ್ರತಿಕ್ರಿಯಿಸಿದ್ದು, “ನಾವು ಒಮ್ಮೆ ಗುಂಡಿಗಳನ್ನು ಮುಚ್ಚಿದ್ದೆವು. ಪ್ರಸ್ತುತ ಹೊಸ ಕೆಲಸ ಆಗುತ್ತಿದೆ. ಆದರೆ ತ್ವರಿತಗತವಾಗಿ ಕೆಲಸ ಆಗುತ್ತಿಲ್ಲ. ಇದು ಹೊಸ ಕಾಮಗಾರಿಯಾಗಿರುವ ಕಾರಣ ಇನ್ನೂ ಪ್ರಗತಿಯಲ್ಲಿದೆ” ಎಂದರು.

ಇದನ್ನೂ ಓದಿದ್ದೀರಾ? ತುಮಕೂರು | ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಕರೆ; ರಸ್ತೆಗಿಳಿದ ರೈತರಿಂದ ಅರೆ ಬೆತ್ತಲೆ ಉರುಳು ಸೇವೆ

ಅಸಿಸ್ಟೆಂಟ್ ಎಂಜಿನಿಯರ್(ಸೆಕ್ಷನ್ ಆಫೀಸರ್ ) ಸದಾನಂದ ಮಾತನಾಡಿ, “ನಾನು ಮತ್ತು ಪವನ್ ಅವರು ಈ ಭಾಗ ನೋಡಿಕೊಳ್ಳುತ್ತಿದ್ದೇವೆ. ಹಾಗಾಗಿ ನಾನು ಸಂಬಂಧಪಟ್ಟ ಸಿಬ್ಬಂದಿಗಳಿಗೆ ಈ ಕುರಿತು ಮಾಹಿತಿ ನೀಡಿ ಸರಿಪಡಿಸಿಕೊಡುತ್ತೇನೆ” ಎಂದು ಭರವಸೆ ನೀಡಿದ್ದಾರೆ.

WhatsApp Image 2025 11 17 at 5.17.05 PM
ರಾಘವೇಂದ್ರ, ಶಿವಮೊಗ್ಗ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...