ಶಿವಮೊಗ್ಗ | ‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ ಮಹಿಳೆ ಮಾನಸಿಕ ಅಸ್ವಸ್ಥೆ: ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟನೆ

Date:

ಶಿವಮೊಗ್ಗದ ಶಿವಪ್ಪ ನಾಯಕ ಸರ್ಕಲ್‌ನಲ್ಲಿ ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಸಂಭ್ರಮಾಚರಣೆ ವೇಳೆ ‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ ಮುಸ್ಲಿಂ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಶಿವಮೊಗ್ಗ ಎಸ್​ಪಿ ಮಿಥುನ್ ಕುಮಾರ್, “ಪೊಲೀಸರಿಂದ ಮಹಿಳೆಯ ಹಿನ್ನೆಲೆ, ಪೂರ್ವಾಪರ ಬಗ್ಗೆ ಪರಿಶೀಲನೆ ನಡೆಸಿದಾಗ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ದೃಢವಾಗಿದೆ. ಮಾನಸಿಕ ರೋಗಕ್ಕೆ ಮಹಿಳೆ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಮಹಿಳೆ ತಂದೆಯಿಂದ ಪೊಲೀಸರಿಗೆ ದಾಖಲೆಗಳ ಸಲ್ಲಿಕೆ ಮಾಡಲಾಗಿದ್ದು, 2018 ರಿಂದ ಚಿಕಿತ್ಸೆ ಪಡೆಯುತ್ತಿದ್ದರು” ಎಂದು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಮಾತನಾಡಿರುವ ಮಹಿಳೆಯ ತಂದೆ, “ನನ್ನ ಮಗಳು ಮೊದಲಿನಿಂದಲೂ ಸ್ವಲ್ಪ ಮಾನಸಿಕ ಅಸ್ವಸ್ಥಳು. ಈ ಸಂಬಂಧ ಅವಳಿಗೆ ಚಿಕಿತ್ಸೆ ಕೊಡಿಸುತ್ತಿದ್ದೇವೆ. ಕಳೆದ 10 ತಿಂಗಳಿನಿಂದ ಗಂಡನ ಮನೆ ಬಿಟ್ಟು ನನ್ನ ಮನೆಯಲ್ಲಿಯೇ ಇದ್ದಾಳೆ. ಈ ಹಿಂದೆ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಳು. ಘಟನೆ ಕೇಳಿ ನನಗೂ ನೋವಾಗಿದೆ. ಅವಳು ಆ ತರಹದ ಹುಡುಗಿ ಅಲ್ಲ. ಅವಳು ಜಾತಿ ಭೇದ ಮಾಡಲ್ಲ. ಎಲ್ಲರನ್ನೂ ಒಂದೇ ತರ ನೋಡುತ್ತಾಳೆ. ಉದ್ದೇಶ ಪೂರ್ವಕವಾಗಿ ಅವಳು ಘೋಷಣೆ ಕೂಗಿಲ್ಲ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಏನಿದು ಘಟನೆ?
ಅಯೋಧ್ಯೆ ರಾಮ ಮಂದಿರ ಇಂದು ಲೋಕಾರ್ಪಣೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲೂ ಸಿಹಿ ಹಂಚಿ ಸಂಭ್ರಮಿಸಲಾಗುತ್ತಿತ್ತು. ಜೈ ಶ್ರೀರಾಮ್ ಘೋಷಣೆಗಳನ್ನು ನೆರೆದಿದ್ದವರು ಕೂಗುತ್ತಿದ್ದರು. ಈ ವೇಳೆ ಮುಸ್ಲಿಂ ಮಹಿಳೆಯೊಬ್ಬಳು ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದರು. ಪರಿಣಾಮವಾಗಿ ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಬಳಿಕ ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ಅರಿತ ಪೊಲೀಸರು, ಮುಸ್ಲಿಂ ಮಹಿಳೆಯನ್ನು ವಶಕ್ಕೆ ಪಡೆದು ಪೊಲೀಸ್ ಜೀಪ್​ನಲ್ಲಿ ಕರೆದೊಯ್ದಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಸಭೆ

ರಾಜ್ಯದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌ ಕೆ ಶಿವಕುಮಾರ್,...

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗೆಲುವು ಗ್ಯಾರಂಟಿ: ಸದಾಶಿವ ಉಳ್ಳಾಲ್ ವಿಶ್ವಾಸ

ಉಳುವವನೇ ಭೂಮಿಯೊಡೆಯ, ಲೋನ್ ಮೇಳ, ಬ್ಯಾಂಕ್ ರಾಷ್ಟ್ರೀಕರಣ, ಮಂಗಳೂರಿಗೆ ಎನ್‌ಎಂಪಿಟಿ, ವಿಮಾನ...

ವಿಜಯಪುರ ಲೋಕಸಭಾ ಕ್ಷೇತ್ರ; 21 ಅಭ್ಯರ್ಥಿಗಳಿಂದ 35 ನಾಮಪತ್ರ ಸಲ್ಲಿಕೆ

ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ವಿಜಯಪುರ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಕ್ಕೆ ಏಪ್ರಿಲ್‌...

ದಾವಣಗೆರೆ | ಜಾತ್ಯತೀತ ಪಕ್ಷಕ್ಕೆ ಮತ ಹಾಕುವಂತೆ ಮಾನವ ಬಂಧುತ್ವ ವೇದಿಕೆ ಮನವಿ

ಮತದಾನದ ಹಕ್ಕು ಸಂವಿಧಾನ ನೀಡಿರುವ ಅತ್ಯಂತ ಶ್ರೇಷ್ಟವಾದದ್ದು ಮತ್ತು ಪವಿತ್ರವಾದ ಅವಕಾಶ....