ಶಿವಮೊಗ್ಗದ ಶಿವಪ್ಪ ನಾಯಕ ಸರ್ಕಲ್‌ನಲ್ಲಿ ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಸಂಭ್ರಮಾಚರಣೆ ವೇಳೆ ‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ ಮುಸ್ಲಿಂ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್, “ಪೊಲೀಸರಿಂದ ಮಹಿಳೆಯ ಹಿನ್ನೆಲೆ, ಪೂರ್ವಾಪರ ಬಗ್ಗೆ ಪರಿಶೀಲನೆ ನಡೆಸಿದಾಗ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ದೃಢವಾಗಿದೆ. ಮಾನಸಿಕ ರೋಗಕ್ಕೆ ಮಹಿಳೆ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಮಹಿಳೆ ತಂದೆಯಿಂದ ಪೊಲೀಸರಿಗೆ ದಾಖಲೆಗಳ ಸಲ್ಲಿಕೆ ಮಾಡಲಾಗಿದ್ದು, 2018 ರಿಂದ ಚಿಕಿತ್ಸೆ ಪಡೆಯುತ್ತಿದ್ದರು” ಎಂದು ತಿಳಿಸಿದ್ದಾರೆ.
A tense situation prevailed for some time in sensitive #Shivamogga town on Monday when a burqa-clad woman shouted ‘#AllahuAkbar’ when hundreds of people chanted ‘#JaiShriRam.’ The police took her away in the jeep and brought the situation under control.
Hundreds of people had… pic.twitter.com/CEKONaKWIv
— Hate Detector 🔍 (@HateDetectors) January 22, 2024
ಪ್ರಕರಣ ಸಂಬಂಧ ಮಾತನಾಡಿರುವ ಮಹಿಳೆಯ ತಂದೆ, “ನನ್ನ ಮಗಳು ಮೊದಲಿನಿಂದಲೂ ಸ್ವಲ್ಪ ಮಾನಸಿಕ ಅಸ್ವಸ್ಥಳು. ಈ ಸಂಬಂಧ ಅವಳಿಗೆ ಚಿಕಿತ್ಸೆ ಕೊಡಿಸುತ್ತಿದ್ದೇವೆ. ಕಳೆದ 10 ತಿಂಗಳಿನಿಂದ ಗಂಡನ ಮನೆ ಬಿಟ್ಟು ನನ್ನ ಮನೆಯಲ್ಲಿಯೇ ಇದ್ದಾಳೆ. ಈ ಹಿಂದೆ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಳು. ಘಟನೆ ಕೇಳಿ ನನಗೂ ನೋವಾಗಿದೆ. ಅವಳು ಆ ತರಹದ ಹುಡುಗಿ ಅಲ್ಲ. ಅವಳು ಜಾತಿ ಭೇದ ಮಾಡಲ್ಲ. ಎಲ್ಲರನ್ನೂ ಒಂದೇ ತರ ನೋಡುತ್ತಾಳೆ. ಉದ್ದೇಶ ಪೂರ್ವಕವಾಗಿ ಅವಳು ಘೋಷಣೆ ಕೂಗಿಲ್ಲ” ಎಂದರು.
ಏನಿದು ಘಟನೆ?
ಅಯೋಧ್ಯೆ ರಾಮ ಮಂದಿರ ಇಂದು ಲೋಕಾರ್ಪಣೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲೂ ಸಿಹಿ ಹಂಚಿ ಸಂಭ್ರಮಿಸಲಾಗುತ್ತಿತ್ತು. ಜೈ ಶ್ರೀರಾಮ್ ಘೋಷಣೆಗಳನ್ನು ನೆರೆದಿದ್ದವರು ಕೂಗುತ್ತಿದ್ದರು. ಈ ವೇಳೆ ಮುಸ್ಲಿಂ ಮಹಿಳೆಯೊಬ್ಬಳು ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದರು. ಪರಿಣಾಮವಾಗಿ ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಬಳಿಕ ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ಅರಿತ ಪೊಲೀಸರು, ಮುಸ್ಲಿಂ ಮಹಿಳೆಯನ್ನು ವಶಕ್ಕೆ ಪಡೆದು ಪೊಲೀಸ್ ಜೀಪ್ನಲ್ಲಿ ಕರೆದೊಯ್ದಿದ್ದರು.