ಶಿವಮೊಗ್ಗ | ಜ್ಞಾನ ಹೊಂದಿದವರು ಜಗತ್ತನ್ನೇ ಗೆಲ್ಲಬಲ್ಲರು: ಎಸ್‌ಪಿ ಮಿಥುನ್ ಕುಮಾರ್

Date:

Advertisements

ಪ್ರಸ್ತುತ ಜಗತ್ತಿನಲ್ಲಿ ಜ್ಞಾನಕ್ಕೆ ಹೆಚ್ಚಿನ ಪ್ರಾಮುಖ್ಯತೆಯಿದ್ದು, ಹೆಚ್ಚು ಜ್ಞಾನ ಹೊಂದಿರುವವರು ಜಗತ್ತನ್ನೇ ಗೆಲ್ಲಬಲ್ಲರು ಎಂದು ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಹೇಳಿದರು.

ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಪಾಲಿಕೆ ಹಾಗೂ ಸಮನ್ವಯ ಟ್ರಸ್ಟ್ ಸಹಯೋಗದಲ್ಲಿ ಜ್ಞಾನ ದಸರಾ ಪ್ರಯುಕ್ತ ನಿನ್ನೆ ಆಯೋಜಿಸಿದ್ದ ಬದುಕಿನ ಅವಕಾಶಗಳ ಕುರಿತ ಕಾರ್ಯಗಾರದಲ್ಲಿ ಮಾತನಾಡಿದರು.

“ಕಾಲೇಜು ಶಿಕ್ಷಣ ಪಡೆಯುತ್ತಿರುವಾಗಲೇ ನಿಮ್ಮ ಇಷ್ಟದ ಕ್ಷೇತ್ರದಲ್ಲಿ ಸಾಧನೆ ಮಾಡುವ ಸಂಕಲ್ಪ ಹೊಂದಬೇಕು. ಪದವಿ ಪಡೆಯುವ ಅವಧಿಯು ಜೀವನದ ಅಮೂಲ್ಯ ಸಮಯ. ಈ ಹಂತದಲ್ಲಿ ನೀವು ಸರಿಯಾದ ಮಾರ್ಗದಲ್ಲಿ ಮುನ್ನಡೆಯಬೇಕು. ಉನ್ನತ ಸಾಧನೆ ಮಾಡಬೇಕು” ಎಂದು ತಿಳಿಸಿದರು.

Advertisements

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿ, “ಬದುಕಿನಲ್ಲಿ ಯಶಸ್ಸು ಸಾಧಿಸಲು ಆತ್ಮವಿಶ್ವಾಸ ಅತ್ಯಂತ ಮುಖ್ಯ. ಎಂತಹ ಕಷ್ಟಕರ ಸನ್ನಿವೇಶ ಎದುರಾದರೂ ಸಮರ್ಥವಾಗಿ ನಿಭಾಯಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ನಾವು ಕಂಡಿರುವ ಕನಸು ನನಸು ಮಾಡಿಕೊಳ್ಳಲು ಹಂತ ಹಂತವಾಗಿ ಯೋಜನೆ ಮಾಡಿ ಪೂರ್ಣಗೊಳಿಸುವ ಮೂಲಕ ಗುರಿ ತಲುಪಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಅರಣ್ಯ ಭೂಮಿ ಉಳಿಸಿ, ಖಾಸಗಿ ವ್ಯಕ್ತಿಗಳ ಹುನ್ನಾರಕ್ಕೆ ಕಡಿವಾಣ ಹಾಕುವಂತೆ ಆಗ್ರಹ

ಶಾಸಕ ಎಸ್ ಎನ್ ಚನ್ನಬಸಪ್ಪ ಮಾತನಾಡಿ, “ಮೌಲ್ಯಾಧಾರಿತ ಜೀವನ ಕಟ್ಟಿಕೊಳ್ಳಲು ಯುವಜನರು ಆಲೋಚನೆ ನಡೆಸಬೇಕು. ಹಿರಿಯರು ತೋರಿಸಿರುವ ಮಾರ್ಗದರ್ಶನದಲ್ಲಿ ಸಂಸ್ಕೃತಿ ಪರಂಪರೆಯ ಆಚರಣೆಗಳನ್ನು ಪಾಲಿಸಬೇಕು. ಜೀವನದಲ್ಲಿ ಉತ್ತಮ ಸಾಧನೆ ಮಾಡಿ ಶಿವಮೊಗ್ಗದ ಕೀರ್ತಿ ಹೆಚ್ಚಿಸಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

Download Eedina App Android / iOS

X