ಶಿವಮೊಗ್ಗ | ಧಾರಾಕಾರ ಮಳೆ; ಮರ ಬಿದ್ದು ಮನೆ ಹಾನಿ

Date:

ಎಡೆಬಿಡದೆ ಸುರಿದ ಧಾರಾಕಾರ ಮಳೆಗೆ ಮನೆಯೊಂದರ ಮೇಲೆ ಬೃಹತ್ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿದ್ದು, ದಂಪತಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

- Advertisement -

ಶಿವಮೊಗ್ಗ ಜಿಲ್ಲೆ ರಿಪ್ಪನ್‌ಪೇಟೆ ಸಮೀಪದ ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಚ್ ಕುನ್ನೂರು ಗ್ರಾಮದಲ್ಲಿ ಭಾನುವಾರ ತಡರಾತ್ರಿ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಭಾನುವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಎಚ್ ಕುನ್ನೂರು ಗ್ರಾಮದ ತಿಮ್ಮಪ್ಪ ಎಂಬುವವರ ಮನೆ ಮೇಲೆ ಪಕ್ಕದಲ್ಲಿದ್ದ ಬೃಹತ್ ಮರ ಬುಡ ಸಮೇತವಾಗಿ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಆಶಾ ಕಾರ್ಯಕರ್ತೆ ವಿನೂತ, ತಿಮ್ಮಪ್ಪ ದಂಪತಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಮನೆಯಲ್ಲಿದ್ದ ಟಿವಿ ಸೇರಿದಂತೆ ದವಸ, ಧಾನ್ಯಗಳು, ಆಹಾರ ಪದಾರ್ಥಗಳು ಹಾಗೂ ಇನ್ನಿತರ ವಸ್ತುಗಳು ನೀರುಪಾಲಾಗಿದ್ದು, ಮೇಲ್ಛಾವಣಿಗೆ ಹಾಕಿದ್ದ ಸಿಮೆಂಟ್ ಶೀಟ್, ಹೆಂಚುಗಳು ಸೇರಿದಂತೆ ಭಾಗಶಃ ಮನೆಗೆ ಹಾನಿಯಾಗಿದೆ.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಮನೆ ಮೇಲೆ ಮರ ಬಿದ್ದು ಹಾನಿ; ಕುಟುಂಸ್ಥರು ಪಾರು

ಘಟನೆಯ ವಿಷಯ ತಿಳಿಯುತ್ತಿದ್ದಂತೆ ಕೋಡೂರು ಗ್ರಾ ಪಂ ಅಧ್ಯಕ್ಷ ಉಮೇಶ್, ಸದಸ್ಯ ಮಂಜಪ್ಪ, ಪಿಡಿಒ ನಾಗರಾಜ್, ತಾ ಪಂ ಮಾಜಿ ಸದಸ್ಯ ಚಂದ್ರಮೌಳಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಹಲವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...